ಕಾರವಾರ 27: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಅವಧಿಯಲ್ಲಿ ಜಿಲ್ಲೆಯಲ್ಲಿ ನಡೆದ ವಿಶೇಷ ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ, ಜಿಲ್ಲೆಯ ಯುವ ಜನತೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಿಕೊಳ್ಳಲು ಹೆಚ್ಚಿನ ಉತ್ಸಾಹ ತೋರಿದ್ದು, ವಿಶೇಷ ನೋಂದಣಿ ಅಭಿಯಾನದ ಅವಧಿಯಲ್ಲಿ 2796 ಮತದಾರರು ಮತದಾರರ ಪಟ್ಟಿಗೆ ಹೊಸದಾಗಿ ಸೇರೆ್ಡಗೆ ಅರ್ಜಿ ಸಲ್ಲಿಸಿದ್ದಾರೆ.
ಮತದಾರರ ಪಟ್ಟಿಯ ಪರಿಷ್ಕರಣೆಯ ಅರ್ಹತಾ ದಿನವಾದ ಜನವರಿ 1 2025 ಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಅವಧಿಯಲ್ಲಿ , ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ, ತೆಗೆದು ಹಾಕುವಿಕೆ, ತಿದ್ದುಪಡಿ ಮಾಡುವ ಕುರಿತಂತೆ ಜಿಲ್ಲೆಯಾದ್ಯಂತ ನವೆಂಬರ್ 9 ಮತ್ತು 10 ಹಾಗೂ 23 ಮತ್ತು 24 ರಂದು ವಿಶೇಷ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ಆಯೋಜಸಿದ್ದು ಈ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಸಂಬಂಧಪಟ್ಟ ಮತಗಟ್ಟೆ ಅಧಿಕಾರಿಗಳು ಹಾಜರಿದ್ದು ಸಾರ್ವಜನಿಕರಿಂದ ನಮೂನೆ 6, ನಮೂನೆ 7 ಮತ್ತು ನಮೂನೆ 8 ರಲ್ಲಿ ಅರ್ಜಿಗಳನ್ನು ಸ್ವೀಕರಿಸಿದ್ದಾರೆ.
ವಿಶೇಷ ನೋಂದಣಿ ಅಭಿಯಾನದ ಅವಧಿಯಲ್ಲಿ ಹಳಿಯಾಳ ವಿಧಾನ ಸಭಾ ಕ್ಷೇತ್ರದಲ್ಲಿ 422 ಹೊಸ ಮತದಾರರು ಸೇರೆ್ಡಗೆ ಅರ್ಜಿ ನೀಡಿದ್ದು, 258 ಮಂದಿ ತಿದ್ದುಪಡಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕಾರವಾರದಲ್ಲಿ 333 ಹೊಸ ಸೇರೆ್ಡಗೆ, ತಿದ್ದುಪಡಿಗಾಗಿ 332, ಕುಮಟಾ ದಲ್ಲಿ 263 ಹೊಸ ಸೇರೆ್ಡಗೆ, ತಿದ್ದುಪಡಿಗಾಗಿ 223 ,ಭಟ್ಕಳದಲ್ಲಿ 254 ಹೊಸ ಸೇರೆ್ಡಗೆ, ತಿದ್ದುಪಡಿಗಾಗಿ 250, ಶಿರಸಿಯಲ್ಲಿ 476 ಹೊಸ ಸೇರೆ್ಡಗೆ, ತಿದ್ದುಪಡಿಗಾಗಿ 327, ಯಲ್ಲಾಪುರದಲ್ಲಿ 1048 ಹೊಸ ಸೇರೆ್ಡಗೆ, ತಿದ್ದುಪಡಿಗಾಗಿ 865 ಅರ್ಜಿಗಳನ್ನು ಸ್ವೀಕರಿಸಲಾಗಿದೆ.
ವಿಶೇಷ ನೋಂದಣಿ ಅಭಿಯಾನದ ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ ಸೇರ್ೆಡೆಯಾಗಲು ಒಟ್ಟು 2796 ಮಂದಿ ನಮೂನೆ 6 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದ್ದು, 2027 ಮಂದಿ ಮತದಾರರ ಪಟ್ಟಿಯಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಲು ನಮೂನೆ 8 ರಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ಅರ್ಹತಾ ದಿನಾಂಕ. 1-1-2025 ಕ್ಕೆ ಸಂಬಂಧಿಸಿದಂತೆ, ದಿನಾಂಕ-20-8-2024 ರಿಂದ 15-12-2024 ರವರೆಗೆ ಮತದಾರರ ಪಟ್ಟಿ ಪರಿಷ್ಕರಣೆ ಪ್ರಾರಂಭವಾಗಿದ್ದು, ಯುವ ಮತದಾರರು ಹಾಗೂ ಸಾರ್ವಜನಿಕರು ಹೊಸದಾಗಿ ಹೆಸರು ಸೇರೆ್ಡಗಾಗಿ, ಹೆಸರು ಕಡಿಮೆಗೊಳಿಸಲು , ವರ್ಗಾವಣೆ, ಹೆಸರಿನಲ್ಲಿ ತಿದ್ದುಪಡಿಗಾಗಿ ಸೂಕ್ತ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಮತಗಟ್ಟೆ ಅಧಿಕಾರಿ (ಬಿಎಲ್‌ಓ) ರವರಿಗೆ ಅಥವಾ ಗಿಊಂ ಮೂಲಕವೂ ನೀಡಲು ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು : ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ಉತ್ತರ ಕನ್ನಡ ಜಿಲ್ಲೆ