ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ವೆಲ್ಡಿಂಗ್ ಕೆಲಸದ ಯುವಕ ಮೃತ್ಯು
Young welding worker dies after accidentally touching live wire
ಹೊಸಪೇಟೆ 23: ದಿನಾಂಕ 23.12.2025 ಮಂಗಳವಾರದಂದು 100 ಹಾಸಿಗೆ ಆಸ್ಪತ್ರೆಯ ರಸ್ತೆಯಲ್ಲಿ ನೂತನ ಕಟ್ಟಡ ಕಾಮಗಾರಿ ನಡೆಯುತ್ತಿದ್ದು ಕಟ್ಟಡದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ 18ನೇ ವಾರ್ಡ್ ನಗರ ಹೊಸಪೇಟೆಯ ಮೂಲದ ರಿಜ್ವಾನ್ (18) ಈತನ ಕೈಯಲ್ಲಿದ್ದ ಕಬ್ಬಿಣದ ಪೈಪ್ ಒಂದು ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ತಗುಲಿದ್ದರಿಂದ ವಿದ್ಯುತ್ ಮೈಯಲ್ಲಿ ಪ್ರವಹಿಸಿದ್ದರಿಂದ ಸ್ಥಳದಲ್ಲೇ ಪ್ರಾಣ ಹೋಗಿರುತ್ತದೆ. ಈ ಘಟನೆ ಕುರಿತು ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಸಂದರ್ಭದಲ್ಲಿ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎನ್ ಮಹಮ್ಮದ್ ಇಮಾಮ್ ನಿಯಾಜಿ ರವರು ಘಟನೆ ಸಂಭವಿಸಿದ ಸ್ಥಳಕ್ಕೆ ಕೂಡಲೇ ಆಗಮಿಸಿ ಪರೀಶೀಲನೆ ನಡೆಸಿದರು. ನಂತರ ದುಃಖ ತಪ್ತ ಕುಟುಂಬಕ್ಕೆ ಸಾಂತ್ವನ ತಿಳಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 