ನಿಮ್ಮ ಆರೋಗ್ಯ, ನಮ್ಮ ಆದ್ಯತೆ: ಗದಗ ನಗರದ ನಾಲ್ಕು ‘ನಮ್ಮ ಕ್ಲೀನಿಕ್’ ಉದ್ಘಾಟನೆಸಚಿವ ಎಚ್.ಕೆ. ಪಾಟೀಲರಿಂದ ಜನಸ್ನೇಹಿ ಆರೋಗ್ಯ ಸೇವೆ ’ನಮ್ಮ ಕ್ಲೀನಿಕ್’ ಚಾಲನೆ
Your health, our priority: Inauguration of four ‘Namma Clinics’ in Gadag city Minister H.K. Patil la
ನಿಮ್ಮ ಆರೋಗ್ಯ, ನಮ್ಮ ಆದ್ಯತೆ: ಗದಗ ನಗರದ ನಾಲ್ಕು ‘ನಮ್ಮ ಕ್ಲೀನಿಕ್’ ಉದ್ಘಾಟನೆಸಚಿವ ಎಚ್.ಕೆ. ಪಾಟೀಲರಿಂದ ಜನಸ್ನೇಹಿ ಆರೋಗ್ಯ ಸೇವೆ ’ನಮ್ಮ ಕ್ಲೀನಿಕ್’ ಚಾಲನೆ
ಗದಗ 25 : ನಗರದ ಡೊರಗಲ್ಲಿ, ಕುರಹಟ್ಟಿ ಪೇಟೆ, ಹಮಾಲರ ಕಾಲೋನಿ ಹಾಗೂ ಆಶ್ರಯ ಕಾಲೊನಿಯಲ್ಲಿ ಸ್ಥಾಪಿಸಲಾದ ನೂತನ ‘ನಮ್ಮ ಕ್ಲೀನಿಕ್’ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಚ್.ಕೆ. ಪಾಟೀಲರು (ಜನವರಿ 25ರಂದು) ರವಿವಾರ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಚ್ ಕೆ ಪಾಟೀಲರು, ಒಂದು ವರ್ಷದ ಅವಧಿಯಲ್ಲಿ ಇಲ್ಲಿನ ಕುಟುಂಬಗಳ ಆರೋಗ್ಯದಲ್ಲಿ ಸ್ಪಷ್ಟ ಸುಧಾರಣೆ ಆಗಬೇಕು ಎಂಬುದು ನಮ್ಮ ಗುರಿ. ಜನರ ಆರೋಗ್ಯದ ಕಾಳಜಿ ಈ ‘ನಮ್ಮ ಕ್ಲೀನಿಕ್’ಗಳ ಮೂಲಕ ಸಾಧ್ಯವಾಗಲಿದೆ ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದರು.ಗದಗ ನಗರದ ಆರೋಗ್ಯ ಜಾಲವನ್ನು ಗಣನೀಯವಾಗಿ ವಿಸ್ತರಿಸಲಾಗುತ್ತಿದೆ. ಪ್ರತಿ ಕ್ಲೀನಿಕ್ ಮೂಲಕ ಸುಮಾರು 3 ಸಾವಿರ ಕುಟುಂಬಗಳಿಗೆ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ಬಡ ಜನರ ಆರೋಗ್ಯ ಸುಧಾರಣೆಯಲ್ಲಿ ‘ನಮ್ಮ ಕ್ಲೀನಿಕ್’ ಬಹುಮುಖ್ಯ ಪಾತ್ರ ವಹಿಸಲಿದೆ” ಎಂದು ತಿಳಿಸಿದರು.ಸರ್ಕಾರದ ಉದ್ದೇಶ ಜನಸಾಮಾನ್ಯರಿಗೆ ಮನೆಬಾಗಿಲಿನಲ್ಲೇ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದಾಗಿದೆ. ‘ನಮ್ಮ ಕ್ಲೀನಿಕ್’ ಯೋಜನೆಯ ಮೂಲಕ ನಗರದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ತಕ್ಷಣದ ಚಿಕಿತ್ಸಾ ಸೌಲಭ್ಯ ದೊರೆಯಲಿದೆ ಎಂದರು.ನಗರದ ವಿವಿಧ ಭಾಗಗಳಲ್ಲಿ ಸ್ಥಾಪಿಸಲಾದ ಈ ಕ್ಲೀನಿಕ್ಗಳಿಂದ ಸಣ್ಣಪುಟ್ಟ ರೋಗಗಳಿಗೆ ಚಿಕಿತ್ಸೆ, ಉಚಿತ ಓಷಧಿ ವಿತರಣೆ, ರಕ್ತದೊತ್ತಡ, ಮಧುಮೇಹ ಸೇರಿದಂತೆ ಮೂಲಭೂತ ಆರೋಗ್ಯ ಪರೀಕ್ಷೆಗಳು ಸುಲಭವಾಗಿ ಲಭ್ಯವಾಗಲಿವೆ ಎಂದು ಅವರು ಹೇಳಿದರು.ಸ್ಥಳೀಯ ನಾಗರಿಕರು ಈ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದ ಸಚಿವರು, ಸಾರ್ವಜನಿಕ ಆರೋಗ್ಯ ಸುಧಾರಣೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.ನಿಮ್ಮ ಆರೋಗ್ಯ, ನಮ್ಮ ಆದ್ಯತೆ ಎಂಬ ಧ್ಯೇಯವಾಕ್ಯದೊಂದಿಗೆ ಗದಗ ನಗರದಲ್ಲಿ ಸರ್ಕಾರದ ‘ನಮ್ಮ ಕ್ಲೀನಿಕ್’ ಯೋಜನೆ ಯಶಸ್ವಿಯಾಗಿ ಜನಸಾಮಾನ್ಯರ ಆರೋಗ್ಯ ಸೇವೆಗೆ ಹೊಸ ಆಯಾಮ ನೀಡಲಿದೆ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ. ಪಾಟೀಲ ಹೇಳಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಅವರು ಮಾತನಾಡಿ, “ಜಿಲ್ಲೆಯಲ್ಲಿ ಒಟ್ಟು 21 ‘ನಮ್ಮ ಕ್ಲೀನಿಕ್’ಗಳು ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ ಗದಗ ನಗರದಲ್ಲೇ 7 ಕ್ಲೀನಿಕ್ಗಳು ಸೇವೆ ನೀಡುತ್ತಿವೆ. ಪ್ರತಿ 15 ಸಾವಿರ ಜನರಿಗೆ ಒಂದು ಕ್ಲೀನಿಕ್ ಸ್ಥಾಪಿಸುವ ಗುರಿಯೊಂದಿಗೆ ಈ ಯೋಜನೆ ಜಾರಿಯಲ್ಲಿದೆ” ಎಂದು ತಿಳಿಸಿದರು.ಪ್ರತಿ ಕ್ಲೀನಿಕ್ನಲ್ಲಿ ನಾಲ್ವರು ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳಿಗೆ ಚಿಕಿತ್ಸೆ, ಉಚಿತ ಓಷಧಿ ವಿತರಣೆ, ಮೂಲಭೂತ ಆರೋಗ್ಯ ಪರೀಕ್ಷೆಗಳು ಹಾಗೂ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನ ನಡೆಯುತ್ತಿದೆ ಎಂದರು.ಇದೇ ಸಂದರ್ಭದಲ್ಲಿ ವಾರಕ್ಕೊಮ್ಮೆ ಸಾರ್ವಜನಿಕರಿಗೆ ಯೋಗಾಭ್ಯಾಸವನ್ನು ಆಯೋಜಿಸಲಾಗುತ್ತಿದ್ದು, ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಣೆಗೆ ಒತ್ತು ನೀಡಲಾಗುತ್ತಿದೆ ಎಂದು ಅವರು ಹೇಳಿದರು. ಈ ಎಲ್ಲಾ ಸೇವೆಗಳ ಸದುಪಯೋಗ ಪಡೆದುಕೊಳ್ಳುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ಷುಷಹಿ್ಪೈಳಿಷ್ಫ್ಘ್ತ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಸಿದ್ದು ಪಾಟೀಲ, ಎಸ್ ಎನ್ ಬಳ್ಳಾರಿ, ಕೃಷ್ಣ ಪರಾಪುರ, ಯುವರಾಜ ಬಳ್ಳಾರಿ, ಮರ್ಕಾಂಡಪ್ಪ ಹಾದಿಮನಿ, ದುರಗೇಶ್ ವಿಭೂತಿ, ಪೌರಾಯುಕ್ತ ರಾಜಾರಾಮ್ ಪವಾರ, ಡಾ. ವೆಂಕಟೇಶ ರಾಠೋಡ್, ಡಾ.ಗಡಾದ, ಡಾ. ಪ್ರೀತಂ ಖೋತ್, ಎಲ್ ಕೆ ಜೂಲಕಟ್ಟಿ, ಡಾ. ಗಿರಡ್ಡಿ, ಅ. ಮಹಮ್ಮದ್ ಮುಸ್ತಾಪ, ಶಾಕೀರ್ ಕಾತರಕಿ, ಉಸ್ಮಾನ್ ಮಾಳೊಕೊಪ್ಪ, ವಿತೇಂದ್ರಸಿಂಗ ರಜಪೂತ್ ಇದ್ದರು.ರಾಷ್ಟ್ರೀಯ ಮತದಾರರ ದಿನಾಚರಣೆಸಧೃಡ ರಾಷ್ಟ್ರ ನಿರ್ಮಾಣಕ್ಕೆಸಂವಿಧಾನಾತ್ಮಕ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ
ಗದಗ 25: ಸಧೃಡ ಸಮಾಜ, ಸಧೃಢ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಮತದಾನದ ಪಾತ್ರ ಬಹು ಮುಖ್ಯವಾಗಿದ್ದು, ಮತದಾನದ ಹಕ್ಕನ್ನು ಪಡೆದಂತಹ ಪ್ರತಿಯೊಬ್ಬ ಅರ್ಹ ಮಾತದಾರರು ಚುನಾವಣೆಗಳಲ್ಲಿ ತಪ್ಪದೇ ತಮ್ಮ ಹಕ್ಕನ್ನು ಚಲಾಯಿಸುವಂತೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀದರ್ ಅವರು ತಿಳಿಸಿದರು.ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ರವಿವಾರ(ಜ.25) ಜರುಗಿದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮತದಾನ ಎನ್ನುವುದು ಸಂವಿಧಾನಾತ್ಮಕವಾಗಿ ನೀಡಿದಂತಹ ಹಕ್ಕನ್ನು ಬಳಸುವುದುರ ಮೂಲಕ ಸಮಾಜಕ್ಕೆ ಉತ್ತಮ ನಾಯಕರನ್ನು ಆಯ್ಕೆ ಮಾಡುವಂತಹ ಸುವರ್ಣ ಅವಕಾಶವನ್ನು ಮತದಾರರು ಕಳೆದುಕೊಳ್ಳಬಾರದು. ತಮ್ಮ ಅಮೂಲ್ಯವಾದ ಮತದಿಂದ ಸಮಾಜ, ರಾಷ್ಟ್ರಕ್ಕೆ ಉತ್ತಮವಾದವರನ್ನು ಆಯ್ಕೆ ಮಾಡುವುದು ಪ್ರತಿಯೊಬ್ಬ ಅರ್ಹ ಮತದಾರರ ಆದ್ಯ ಕರ್ತವ್ಯವಾಗಿದೆ ಎಂದರು.ಮತದಾನದ ಮಹತ್ವ ಹಾಗೂ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವ ಉದ್ದೇಶದೊಂದಿಗೆ ಚುನಾವಣಾ ಆಯೋಗದಿಂನದ ರಾಷ್ಟ್ರೀಯ ಮತದಾರರ ದಿನವನ್ನು ಕಳೆದ ಹದಿನೈದು ವರ್ಷಗಳಿಂದ ಆಚರಿಸಲಾಗುತ್ತಿದೆ.ಸಂವಿಧಾನಾತ್ಮಕ ನೀಡಿದಂತಹ ಮತದಾನದ ಹಕ್ಕನ್ನು ಚಲಾಯಿಸುವುದು ಯಾರೂ ಕೂಡ ಮರೆಯಬಾರದು ಎನ್ನುವ ಉದ್ದೇಶದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮತದಾನದ ದಿನಗಳಂದು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆ ಆಗುತ್ತಿರುವುದು ಕಳಕವಳಕಾರಿಯಾದಂತಹ ಸಂಗತಿಯಾಗಿದೆ. 18 ವರ್ಷ ಮೇಲ್ಪಟ್ಟಂತಹ ಯುವ ಮತದಾರರು ಈಗಿನಿಂದಲೇ ಉತ್ತಮ ನಾಯಕರನ್ನು ಆರಿಸುವ ಪರಿಪಾಠ ಬೆಳೆಸಿಕೊಳ್ಳಬೇಕು. ಅರ್ಹ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಮತವನ್ನು ತಪ್ಪದೇ ಚಲಾಯಿಸುವುದರ ಮೂಲಕ ಸಶಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗುವಂತೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಅವರು ಕರೇ ನೀಡಿದರು.ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಸ್.ಶಿವನಗೌಡ್ರ ಅವರು ಮಾತನಾಡಿ ದೇಶದ ಪ್ರಜಾಪ್ರಭುತ್ವ ಉಳಿಯಬೇಕಾದರೆ ಪ್ರತಿಯೊಬ್ಬರು ತಮ್ಮ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಬೇಕು.ಸಂವಿಧಾನ ನಮಗೆ ಮತಾದಾನದನದ ಹಕ್ಕನ್ನು ನೀಡಿದ್ದು ಪ್ರತಿ ಚುನಾವಣೆಗಳಲ್ಲಿ ಮತದಾನ ಮಾಡುವುದು ನಮ್ಮ ಮೂಲಭೂತ ಕರ್ತವ್ಯವಾಗಿದೆ. ಮತದಾರರಲ್ಲಿ ಜಾಗೃತಿ ಹಾಗೂ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವ ಉದ್ದೇಶದೊಂದಿಗೆ ಈ ಕಾರ್ಯಕ್ರಮವನ್ಬು ಆಯೋಜಿಸಲಾಗುತ್ತಿದೆ.ಮತದಾನದ ಪ್ರಮಾಣ ಹೆಚ್ಚಳಕ್ಕಾಗಿ ಚುನಾವಣಾ ಆಯೋಗದಿಂದ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರು ಕೂಡ ಮತದಾನದ ಪ್ರಮಾಣ ಹೆಚ್ಚಾಗದೆ ಇರುವುದು ದುರದೃಷ್ಟಕರ ಸಂಗತಿಯಾಗಿದೆ. ಇದೇ ರೀತಿ ಚುನಾವಣೆಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಾ ಸಾಗಿದರೆ ಮುಂದೊಂದು ದಿನ ಕಡ್ಡಾಯ ಮತದಾನ ಎನ್ನುವ ಕಾನೂನು ಜಾರಿಯಾದರೂ ಆಗಬಹುದು ಎಂದರು. ಯಾವುದೇ ರಾಷ್ಟ್ರ ಮುಂದುವರೆಯಬೇಕಾದರೆ ಯುವಜನತೆಯವ ಪಾತ್ರ ಬಹುಮುಖ್ಯಾವಾಗಿದೆ. ಚುನಾವಣಾ ಆಯೋಗವು ಯುವಜನತೆಗಾಗಿ ಮತದಾನದ ಹಾಗೂ ಮತದಾರರ ಪಟ್ಟಿಗೆ ಸೇರೆ್ಡ ಕುರಿತು ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಈ ಕುರಿತು ಇತರರಿಗೂ ಮಾಹಿತಿ ನೀಡಿ ಅವರನ್ನೂ ಕೂಡ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೆಪಿಸಲು ತಿಳಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೆಶಕರ ಬಸನಗೌಡ ಕೋಟೂರ, ಡಿ.ಎಸ್.ಪಿ. ಮುರ್ತುಜಾ ಖಾದ್ರಿ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾ ನಿರ್ದೆಶಕಾರಾದ ಕಂಬಾಳಿಮಠ, ತಹಶೀಲ್ದಾರ ಶ್ರಿನಿವಾಸಮೂರ್ತಿ ಕುಲಕರ್ಣಿ,ಆಹಾರ ಇಲಾಖೆ ಉಪನಿರ್ದೆಶಕ ರಮೇಶ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕಿ ಡಾ. ನಂದಾ ಹಣಬರಟ್ಟಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು. ಉಪವಿಭಾಗಾಧಿಕಾರಿ ಗಂಗಪ್ಪ ಎಂ ಸ್ವಾಗತಿಸಿದರು,ಕಾರ್ಯಕ್ರಮದಲ್ಲಿ ಯುವ ಮತದಾರರಿಗೆ ಮತಾದಾನ ಗುರುತಿನ ಚೀಟಿ ವಿತರಣೆ, ಮತದಾರರ ನೊಂದಣಿ ಕಾರ್ಯದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಬಿ.ಎಲ್.ಓ, ಡಾಟಾ ಎಂಟ್ರಿ ಆಪರೇಟರ, ಪ್ರಬಂಧ ಸ್ಪರ್ಧೆ ವಿಜೇತರುಗಳಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.ತದನಂತರ ವಿಧ್ಯಾರ್ಥಿಗಳು ಮತದಾನದ ಮಹತ್ವ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಸಿ.ಎನ್.ಶ್ರೀಧರ ಅವರು ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು.
ರಾಷ್ಟ್ರೀಯ ಮತದಾರರ ದಿನಾಚರಣೆ:ಚಿತ್ರಕಲಾ ಪ್ರದರ್ಶನಗದಗ 25 :ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದಲ್ಲಿ ಮತದಾನದ ಪ್ರಾಮುಖ್ಯತೆ ಮತ್ತು ಜಾಗೃತಿ ಮೂಡಿಸುವ ಚಿತ್ರಕಲಾ ಪ್ರದರ್ಶನವನ್ನು ಆಯೊಜಿಸಲಾಗಿತ್ತು.ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕಿ ಡಾ.ನಂದಾ ಹಣಬರಟ್ಟಿ ಅವರು ಮತದಾನದನ ಪ್ರಾಮುಖ್ಯತೆ ಕುರಿತ ಸ್ವರಚಿತ ಚಿತ್ರಗಳ ಚಿತ್ರಕಲಾ ಪ್ರದರ್ಶನವನ್ನು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು.ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿ ಆರ್, ಮುಂಡರಗಿ, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೆಶಕ ಬಸನಗೌಡ ಕೋಟೂರ, ಡಿ.ಎಸ್.ಪಿ.ಮುರ್ತುಜಾ ಖಾದ್ರಿ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾ ನಿರ್ದೆಶಕ ಎಂ ಎಂ ಕಂಬಾಳಿಮಠ, ತಹಶೀಲ್ದಾರ ಶ್ರಿನಿವಾಸಮೂರ್ತಿ ಕುಲಕರ್ಣಿ,ಆಹಾರ ಇಲಾಖೆ ಉಪನಿರ್ದೆಶಕ ರಮೇಶ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕಿ ನಂದಾ ಹಣಬರಟ್ಟಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ವಿಧ್ಯಾರ್ಥಿಗಳು ಚಿತ್ರಕಲಾ ಪ್ರದರ್ಶನ ವೀಕ್ಷಿಸಿದರು.
16ನೇ ರಾಷ್ಟ್ರಿಯ ಮತದಾರರ ದಿನಾಚರಣೆ ನಿಮಿತ್ಯ ಸ್ವೀಪ್ ಜಾಥಾ ಹಾಗೂ ದಿನಾಚರಣೆ ಆಯೋಜನೆ.ಶಿರಹಟ್ಟಿ 25 : ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಹೊಣೆಗಾರಿಕೆ ಕುರಿತು ಜಾಗೃತಿ ಮೂಡಿಸಲು ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ ಎಂದು ಗೌರವನ್ವಿತ ದಿವಾಣಿ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಸತೀಶ್ ಎಂ ಹೇಳಿದರು.ಪಟ್ಟಣದ ದೇವರಾಜ್ ಅರಸು ಭವನ ಆಡೋಟೋರಿಯಂ ಹಾಲಿನಲ್ಲಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 2026ರ ರಾಷ್ಟ್ರೀಯ ಮತದಾರರ ದಿನದ ಘೋಷವಾಕ್ಯ "ನನ್ನ ಭಾರತ, ನನ್ನ ಮತ ಹಿ ಪ್ರಜಾಪ್ರಭುತ್ವದ ಹೃದಯದಲ್ಲಿರುವ ಭಾರತೀಯ ನಾಗರೀಕ" (ಒಥಿ ಋಜಚಿ, ಒಥಿ ಗಿಠಜ - ಅಣದಜಟಿ ಚಿಣ ಣಜ ಊಜಚಿಡಿಣ ಠ ಋಜಚಿಟಿ ಆಜಟಠಡಿಚಿಛಿಥಿ) ಆಗಿದೆ. ದೇಶದ ಮತದಾರರಿಗೆ ಸಮರ್ಿತವಾಗಿರುವ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸುವುದರ ಮೂಲಕ ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಳ್ಳಲು ಪ್ರೋತ್ಸಾಹಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಹೊಸ ಮತದಾರರನ್ನು ಅಭಿನಂದಿಸಿ ಮತದಾರರ ಗುರುತಿನ ಚೀಟಿ (ಇಕಋ ಅಚಿಡಿಜ)ಗಳನ್ನು ವಿತರಿಸಲಾಗುವುದು. ಅದರ ಅಂಗವಾಗಿ ಯುವಕರು, ವಿಶೇಷಚೇತನರು, ಮಹಿಳೆಯರು, ತೃತೀಯ ಲಿಂಗಿಗಳು ಹಾಗೂ ವಿಶೇಷವಾಗಿ ನೈಜವಾಗಿ ದುರ್ಬಲ ಬುಡಕಟ್ಟು ಜನಾಂಗದ ಮತದಾರರಿಗೆ ಮತದಾರರ ಗುರುತಿನ ಚೀಟಿಗಳನ್ನು ಸಾಂಕೇತಿಕವಾಗಿ ವಿತರಿಸಲಾಗುವುದು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಿರಹಟ್ಟಿ ತಹಸೀಲ್ದಾರ್ ಕೆ. ರಾಘವೇಂದ್ರ ರಾವು ಸಮಾರಂಭದಲ್ಲಿ ಭಾಗವಹಿಸುವ ಎಲ್ಲರಿಗೂ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು ರಾಮಣ್ಣ ದೊಡ್ಡಮನಿ, ಅಧ್ಯಕ್ಷರು ತಾಲೂಕು ಸ್ವೀಪ್ ಸಮಿತಿ ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯತ್ ಶಿರಹಟ್ಟಿ ಮಾತನಾಡಿ ಪ್ರತಿ ಪ್ರಜೆಯೂ ತನ್ನನ್ನು ಆಳುವ ಪ್ರತಿನಿಧಿಯನ್ನು ಆಯ್ಕೆ ಮಾಡಲು ಇರುವ ವ್ಯವಸ್ಥೆಯೇ ಮತದಾನ. ಮತದಾನ ದೇಶದ ಪ್ರಜೆಗಳ ಪ್ರಮುಖ ಹಕ್ಕು. ತಮ್ಮ ಒಳಿತನ್ನು ಬಯಸುವ ಜನಪರ ನಾಯಕನನ್ನು ತಾವೇ ಆಯ್ಕೆ ಮಾಡಿ ಕಳುಹಿಸಲು ಮತದಾನ ಎಂಬ ಪ್ರಕ್ರಿಯೆ ಬೇಕು. ದೇಶಕ್ಕೆ ಒಳಿತು ಮಾಡುವ ನಾಯಕನನ್ನು ಚುನಾಯಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ ಎಂದರು. ಚುನಾವಣಾ ಆಯೋಗದ ನಿರ್ದೇಶನದಂತೆ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ಪ್ರತಿಯೊಬ್ಬರೂ ಮತದಾನದ ಹಕ್ಕು ಚಲಾಯಿಸಬೇಕು ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.ಕಾರ್ಯಕ್ರಮದಲ್ಲಿ ತಾಲೂಕು ಪಿಎಸ್‌ಐ ಈರ್ಪ ರಿತ್ತಿ, ಹನುಮರಡ್ಡಿ ವಂದ್ಲಿ, ಉಪನ್ಯಾಸಕರು ಡಬಾಲಿ ಪ ಪೂ ಕಾಲೇಜು, ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ತಾಲೂಕಿನ ಆಶಾ ಕಾರ್ಯಕರ್ತರು, ಅಂಗನವಾಡಿ ಮೇಲ್ವಿಚಾರಕರು ಮತ್ತು ಸಹಾಯಕರು, ಓಖಐಒ ಒಃಏ ಹಾಗೂ ಐಅಖಕ, ವಿವಿಧ ತಾಲೂಕಿನ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 