ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಕರೆ
Youth Congress office bearers called for party organization from booth level
ಲೋಕದರ್ಶನ ವರದಿ
ಹಾನಗಲ್ 13: ಸಮಾಜದಲ್ಲಿ ಸೌಹಾರ್ದತೆ, ಸಂವಿಧಾನದ ಮೌಲ್ಯಗಳು, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಆಶಯಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಕರ ಮೇಲಿದೆ. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಒತ್ತು ನೀಡಿ ಕಾರ್ಯ ನಿರ್ವಹಿಸಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಯುವ ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಅವರು ಪದವಿ ಎನ್ನುವುದು ಅಧಿಕಾರ ಅನುಭವಿಸುವ ಸಾಧನವಲ್ಲ, ಅದು ಜನರ ಸೇವೆ ಮಾಡುವ ಜವಾಬ್ದಾರಿ.
ಪ್ರತಿಯೊಬ್ಬರ ನೂತನ ಪದಾಧಿಕಾರಿಗಳು ಸಹ ಪಕ್ಷದ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಜೊತೆಗೆ ಬಡವರು, ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕಿದೆ. ಬೂತ್ ಮಟ್ಟದಿಂದ ಸಂಘಟನೆ ಚುರುಕುಗೊಳಿಸಿ, ಯುವಕರನ್ನು ಪಕ್ಷದತ್ತ ಸೆಳೆಯುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವಂತೆ ಕಿವಿಮಾತು ಹೇಳಿದರು.
ಯುವ ಕಾಂಗ್ರೆಸ್ ತಾಲೂಕಾಧ್ಯಕ್ಷ ಸಂತೋಷ ದುಂಡಣ್ಣನವರ ಮಾತನಾಡಿ, ಪಕ್ಷ ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳೋಣ. ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ಕೆಲಸ ಮಾಡುವ ನಿಟ್ಟಿನಲ್ಲಿ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಶ್ರಮಿಸಲಾಗುವುದು. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪಕ್ಷದ ವಿಚಾರಧಾರೆಗಳನ್ನು ಮನೆ, ಮನೆಗಳಿಗೆ ತಲುಪಿಸುವ ಕೆಲಸ ಮಾಡಲು ಸಂಕಲ್ಪಿಸೋಣ ಎಂದರು.
ಇದೇ ಸಂದರ್ಭದಲ್ಲಿ ಹಾನಗಲ್ ಬ್ಲಾಕ್ ಅಧ್ಯಕ್ಷ ಅಬ್ದುಲ್‌ರಹೀಮ್ ಹಾಳೂರ, ಅಕ್ಕಿಆಲೂರು ಬ್ಲಾಕ್ ಅಧ್ಯಕ್ಷ ಅರುಣ ಮಣ್ಣಮ್ಮನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜ ಬಾಗಸರ, ಇರ್ಫಾನ್ ಮಿಠಾಯಿಗಾರ, ಕಾರ್ಯದರ್ಶಿಗಳಾದ ದ್ಯಾಮಣ್ಣ ಲಮಾಣಿ, ಪ್ರಭು ಬೊಮ್ಮಣ್ಣನವರ, ಶಿವರಾಜ ಹಿರೋಜಿ ಅವರಿಗೆ ನೇಮಕಾತಿ ಪತ್ರ ವಿತರಿಸಲಾಯಿತು.
ಪದಾಧಿಕಾರಿಗಳಾದ ಪ್ರವೀಣ ಹಿರೇಮಠ, ಇರ್ಫಾನ್ ಇನಾಂದಾರ, ಖಾಲಿದ್ ಶೇಷಗಿರಿ, ಶಶಿಧರ ಭೈರಕ್ಕನವರ, ಲೋಹಿತ್ ಕಾಟಣ್ಣನವರ, ಅಮನ್, ಮುಸ್ತಫಾ, ಖಾದರ, ಹನುಮಂತ, ಅಲ್ತಾಫ್, ಶಾನು ಶಿರಹಟ್ಟಿ ಸೇರಿದಂತೆ ಇನ್ನೂ ಹಲವರು ಇದ್ದರು.
ಆಗಸ್ಟ್ 6ರ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ. ಶಿವಕುಮಾರ್
ರಾಜಸ್ಥಾನದ ಬಾಲೋತ್ರಾ-ಜೋಧ್ಪುರ ಹೆದ್ದಾರಿಯಲ್ಲಿ ಎಸ್ಯುವಿ-ಡಂಪರ್ ಡಿಕ್ಕಿ: ಐವರು ಸಾವು, ಮೂವರಿಗೆ ಗಾಯ
ಬಕ್ಕಖಾಲಿ ಕರಾವಳಿಯಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿಯಲ್ಲಿ 9 ಮೀನುಗಾರರ ಶವ ಪತ್ತೆ; 6 ಮಂದಿಗಾಗಿ ಶೋಧ ಮುಂದುವರಿಕೆ
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ 