ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ
Youth Congress protests against NEET question paper leak and petrol, diesel price hike
ಲೋಕದರ್ಶನ ವರದಿ
ಕಾರವಾರ 16 : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಉತ್ತರ ಕನ್ನಡ (ಕಾರವಾರ) ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಕಾರವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಗಳಾದ ಹನೀಫ್ ಖುರೇಶಿ ಮಾತನಾಡಿ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕೇಂದ್ರದ ಬಿಜೆಪಿ ಸರ್ಕಾರ ಹಾಳು ಮಾಡಿತು ಎಂದು ಟೀಕಿಸಿದರು.
ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಸಂಯೋಜಕ ಸೈಯದ್ ಅಶ್ರಫ್ ಮಾತನಾಡಿ ನೀಟ್ ಹಗರಣ ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆ ಯಾಗುತ್ತಿದೆ .ಕೇಂದ್ರ ಶಿಕ್ಷಣ ಸಚಿವರ ವೈಫಲ್ಯಕ್ಕೆ ನೀಟ್ ಹಗರಣ ಸಾಕ್ಷಿ. ಸಚಿವರು ರಾಜೀನಾಮೆ ನೀಡಬೇಕು ಎಂದರು. ನೀಟ್ ಹಗರಣ ವಿದ್ಯಾರ್ಥಿಗಳ ಕುಟುಂಬದ ಆತಂಕಕ್ಕೆ ಕಾರಣವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ. ಇತ್ತೀಚಿನ ವರ್ಷಗಳಲ್ಲಿ ನೀಟ್ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ . ವಿಶೇಷವಾಗಿ ಹೊರ ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆಗಳು ಪರೀಕ್ಷೆಗಿಂತ ಮೊದಲೇ ಸೋರಿಕೆಯಾಗಿವೆ ಎಂಬ ವರದಿಗಳು ಬಂದಿವೆ. ಸುಮಾರು 22 ಲಕ್ಷ ಅಧಿಕ ವಿದ್ಯಾರ್ಥಿಗಳ ಭವಿಷ್ಯವನ್ನು ಕೇಂದ್ರ ಸರ್ಕಾರ ಹಾಳು ಮಾಡಿದೆ .
ದೇಶದ ಅತ್ಯಂತ ದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮೇಲಿರುವ ವಿಶ್ವಾಸಾರ್ಹತೆ ಕಡಿಮೆಯಾಗುತ್ತಿದೆ. ಬಡ ವಿದ್ಯಾರ್ಥಿಗಳ ಭವಿಷ್ಯವನ್ನು ಕೇಂದ್ರ ಸರ್ಕಾರ ಹಾಳು ಮಾಡಿದೆ. ಶ್ರೀಮಂತರ ಮಕ್ಕಳು ದುಡ್ಡು ಕೊಟ್ಟು ಡಾಕ್ಟರ್, ಇಂಜಿನಿಯರ್ ಹುದ್ದೆಗಳನ್ನು ಪಡೆಯುತ್ತಿದ್ದಾರೆ ಎಂದು ಅಪಾದಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಮೋದ್ ಸಿರ್ಸಿಕರ್, ಜಿಲ್ಲಾಉಪಾಧ್ಯಕ್ಷರಾದ ಹರೀಶ್ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾದ ಕಾವ್ಯಾನಂದ ನಾಯ್ಕ್, ಶಿರಸಿ ಅಸೆಂಬ್ಲಿ ಅಧ್ಯಕ್ಷರಾದ ಯೋಗಾನಂದ ನಾಯ್ಕ್, ಕುಮಟಾ ಅಸೆಂಬ್ಲಿ ಅಧ್ಯಕ್ಷ ವೈಭವ ನಾಯ್ಕ್ ,
ಭಟ್ಕಳ ಬ್ಲಾಕ್ ಅಧ್ಯಕ್ಷ ತೇಜಸ್ ನಾಯ್ಕ , ಕುಮಟಾ ಬ್ಲಾಕ್ ಅಧ್ಯಕ್ಷರಾದ ವೇಕಟೇಶ ನಾಯ್ಕ್, ಕಾರವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರವಿಂದ್ ಕಲ್ಗುಟ್ಕರ್, ಉಪಾಧ್ಯಕ್ಷರಾದ ಬಾಬು ಶೇಕ್, ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾದ ದಿಲ್ ಶಾದ್, ಸ್ನೇಹಾ ,ಸಾಹಿರಾ, ಮಮ್ತಾಜ್, ದೇವಾನಂದ್ , ಇಕ್ಬಾಲ್ ಸೈಯದ್, ಮೆಹಬೂಬ್ ಸೈಯದ್, ಸೂರಜ್ ಕುರಂಕರ್, ರವಿಕಾಂತ್ ತಳೇಕರ್, ವಿಶ್ವನಾಥ್ ಕಲ್ಗುಟ್ಕರ್, ನೇಹಾ ಹಬೀಬ್, ಚಂದ್ರಕಾಂತ್ ನಾಯ್ಕ್,ಸಲೀಂ ಶೇಖ್, ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು ....
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 