ನ. 27 ರಿಂದ ಯುವಜನೋತ್ಸವ ‘ಶಕ್ತಿ ಸಂಭ್ರಮ’

ಯುನಿವೆರ್ಸಿಟಿ ಲೋಗೋ

ವಿಜಯಪುರ 25: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಇದೇ ನವೆಂಬರ್ 27 ರಿಂದ 29 ರವರೆಗೆ ಮೂರು ದಿನಗಳ ಕಾಲ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ ‘ಶಕ್ತಿ ಸಂಭ್ರಮ’ ಹಮ್ಮಿಕೊಳ್ಳಲಾಗಿದೆ. 

ದಿ.27 ರಂದು ಬೆಳಿಗ್ಗೆ 11:00 ಗಂಟೆಗೆ ವಿವಿಯ ಆಡಳಿತ ಭವನದ ಮುಂಭಾಗದಲ್ಲಿ ನಿರ್ಮಿಸಿರುವ ವಿಶೇಷ ವೇದಿಕೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಮಹಾವಿದ್ಯಾಲಯಗಳ ಯುವಜನೋತ್ಸವ ‘ಶಕ್ತಿ ಸಂಭ್ರಮ’ ಉದ್ಘಾಟಿಸಲಿದ್ದಾರೆ. ನಗರ ಶಾಸಕರಾದ ಬಸನಗೌಡ ಆರ್ ಪಾಟೀಲ್ (ಯತ್ನಾಳ್) ಅಧ್ಯಕ್ಷತೆ ವಹಿಸಲಿದ್ದಾರೆ.  

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೃಹತ್ ಮತ್ತು ಮಾಧ್ಯಮ ಕೈಗಾರಿಕೆ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಡಾ.ಎಂ.ಬಿ. ಪಾಟೀಲ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌. ಪಾಟೀಲ,  ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ ತುಳಸಿಮಾಲ ಭಾಗವಹಿಸಲಿದ್ದಾರೆ.  

ಕಾರ್ಯಕ್ರಮದಲ್ಲಿ ಸಂಸದರಾದ ರಮೇಶ ಚಂ ಜಿಗಜಿಣಗಿ, ಡಾ.ಸುಧಾ ಮೂರ್ತಿ, ಶಾಸಕರಾದ ಅಪ್ಪಾಜಿ ಸಿ. ಎಸ್‌. ನಾಡಗೌಡ, ಯಶವಂತರಾಯಗೌಡ ವ್ಹಿ. ಪಾಟೀಲ, ವಿಠ್ಠಲ ಧೋಂಡಿಬಾ ಕಟಕಧೋಂಡ, ಭೀಮನಗೌಡ ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೊಳಿ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಬಿ. ಹುಕ್ಕೇರಿ, ಹಣಮಂತ ಆರ್‌. ನಿರಾಣಿ, ಸುನೀಲಗೌಡ ಬಿ. ಪಾಟೀಲ, ಪಿ.ಎಚ್‌.ಪೂಜಾರ, ಕೇಶವ ಪ್ರಸಾದ ಎಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ತೊರವಿ ಗ್ರಾಮ ಪಂಚಾಯತ ಅಧ್ಯಕ್ಷೆ ಪದ್ಮಾಬಾಯಿ ರೇವಣಸಿದ್ದಪ್ಪ ನಡಗಡ್ಡಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 

ಸಮಾರೋಪ ಸಮಾರಂಭ: 

ಇದೇ ದಿ.29 ರಂದು ಮಧ್ಯಾಹ್ನ 12.30 ಗಂಟೆಗೆ ವಿವಿಯ ಆಡಳಿತ ಭವನದ ಮುಂಭಾಗದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಸಂಘದ ಅಧ್ಯಕ್ಷ ಡಾ. ಜಾವೀದ ಜಮಾದಾರ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್‌.ಎಂ.ಚಂದ್ರಶೇಖರ ಭಾಗವಹಿಸಲಿದ್ದಾರೆ ಎಂದು ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ. ಶಾಂತಾದೇವಿ ಟಿ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.