ಯುವಶಕ್ತಿಯೇ ಭಾರತದ ಭವಿಷ್ಯ: ರಾಜಶೇಖರ್ ಪಟ್ಟಣಶೆಟ್ಟಿ
Youth power is India's future: Rajashekhar Pattanashetti
ಬಳ್ಳಾರಿ, ಆ.16: ವಿದ್ಯಾರ್ಥಿಗಳು ಉತ್ತಮ ಶಿಕ್ಷಣದೊಂದಿಗೆ ಶಿಸ್ತು, ದೇಶಪ್ರೇಮ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡು ದೇಶದ ಪ್ರಗತಿಗೆ ಶ್ರಮಿಸಬೇಕು ಎಂದು ರಾಜಶೇಖರ್ ಪಟ್ಟಣಶೆಟ್ಟಿ ಹೇಳಿದರು.
ನಗರದ ಶ್ರೀ ವಾಸವಿ ಶಾಲೆಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನಗಳನ್ನು ಸ್ಮರಿಸಿ, ಮಾತೃಭೂಮಿಯ ಮೇಲಿನ ಅಭಿಮಾನ ಬೆಳೆಸಿಕೊಳ್ಳಬೇಕು. ಪುಸ್ತಕದ ಜ್ಞಾನವು ಜೀವನ ಮೌಲ್ಯಗಳೊಂದಿಗೆ ಬೆರೆತಾಗ ಮಾತ್ರ ಶಕ್ತಿಶಾಲಿ ರಾಷ್ಟ್ರ ನಿರ್ಮಾಣ ಸಾಧ್ಯ ಎಂದರು.
ಶ್ರೀ ವಾಸವಿ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷ ಜಿತೇಂದ್ರ ಪ್ರಸಾದ್ ಮಾತನಾಡಿ, ಸೈನಿಕನ ಧೈರ್ಯ, ವಿಜ್ಞಾನಿಯ ಸಂಶೋಧನೆ, ರೈತನ ಬೆವರು ಹಾಗೂ ಶಿಕ್ಷಕರ ಮಾರ್ಗದರ್ಶನ ಸೇರಿದಂತೆ ಪ್ರತಿಯೊಂದು ಪ್ರಾಮಾಣಿಕ ಪ್ರಯತ್ನವೂ ದೇಶಸೇವೆಯೇ ಎಂದರು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಿಂಡರ್ಗಾರ್ಟನ್ ಮತ್ತು ಪ್ರಾಥಮಿಕ ವಿಭಾಗದ ಮಕ್ಕಳು ಸೈನಿಕರು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ವೇಷದಲ್ಲಿ ಗಮನ ಸೆಳೆದರು. ವಿದ್ಯಾರ್ಥಿಗಳ ಪಥಸಂಚಲನ ಹಾಗೂ ದೇಶಭಕ್ತಿ ಗೀತೆಗೆ ನೀಡಿದ ನೃತ್ಯ ಪ್ರದರ್ಶನ ವಿಶೇಷ ಮೆಚ್ಚುಗೆ ಪಡೆಯಿತು.
ಶ್ರೀ ವಾಸವಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ವಿಠ್ಠ ಕೃಷ್ಣಕುಮಾರ್, ಕಾರ್ಯದರ್ಶಿ ಪಿ.ಎನ್. ಸುರೇಶ್, ಖಜಾಂಚಿ ಬಿಂಗಿ ಸುರೇಶ್ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 