ಯುವಶಕ್ತಿಯೇ ವಿಕಸಿತ ಭಾರತದ ಅಡಿಗಲ್ಲು: ಡಾ. ಸಂದೀಪ್ ಶ್ರೀವಾಸ್ತವ
Youth power is the cornerstone of a developed India: Dr. Sandeep Srivastava
ಲೋಕದರ್ಶನ ವರದಿ
ಬೆಳಗಾವಿ, ಆ. 3: ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ನಿರ್ದೇಶನದಂತೆ, ಕೆಎಲ್‌ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ (ಏಂಊಇಖ) ವಿಶ್ವವಿದ್ಯಾಲಯವು ಆಗಸ್ಟ್ 2ರಂದು ಪ್ರಧಾನಮಂತ್ರಿಯವರ ರಾಷ್ಟ್ರವ್ಯಾಪಿ ’ನಶಾಮುಕ್ತ ಯುವ ವಿಕಸಿತ ್ಣ್ಘೌಿಹಿ2026' ಅಭಿಯಾನದ ವರ್ಚುವಲ್ ಸಂವಾದ ಹಾಗೂ ಪ್ರತಿಜ್ಞಾ ಕಾರ್ಯಕ್ರಮದ ನೇರ್ರಸಾರವನ್ನು ಯಶಸ್ವಿಯಾಗಿ ಆಯೋಜಿಸಿತು.
ಬೆಳಗಾವಿಯ ಕೆಎಲ್‌ಇ ಶತಮಾನೋತ್ಸವ ಸಮಾವೇಶ ಕೇಂದ್ರದ ಡಾ. ಬಿ. ಎಸ್. ಜಿರ್ಗೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ವಿಕಸಿತ ಭಾರತದ ನಿರ್ಮಾಣಕ್ಕೆ ಮಾದಕ ವ್ಯಸನಗಳಿಂದ ಮುಕ್ತ, ದೈಹಿಕವಾಗಿ ಆರೋಗ್ಯವಂತ ಹಾಗೂ ಮಾನಸಿಕವಾಗಿ ಸದೃಢ ಯುವಜನರ ಅಗತ್ಯವನ್ನು ಒತ್ತಿ ಹೇಳಿದರು. **’ವಿಕಸಿತ ಭಾರತಕ್ಕಾಗಿ ಮಾದಕ ವ್ಯಸನಮುಕ್ತ ಯುವ ಸಂಕಲ್ಪ ಅಭಿಯಾನ’**ದ ಆಶಯವನ್ನು ಅವರು ವಿವರಿಸಿದರು. ದೇಶಾದ್ಯಂತ ಆಯ್ಕೆಗೊಂಡ 125 ಅಧಿಕೃತ ಕೇಂದ್ರಗಳಲ್ಲಿ ಕಾಹೇರ್ಗೂ ಅವಕಾಶ ದೊರೆತಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ.
ಈ ಸಂದರ್ಭದಲ್ಲಿ ಕಾಹೇರ್ನ ಕುಲಪತಿ ಡಾ. ಸಂದೀಪ್ ಶ್ರೀವಾಸ್ತವ ಅವರು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರನ್ನು ಉದ್ದೇಶಿಸಿ ಮಾತನಾಡಿ, ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು. ರಾಷ್ಟ್ರಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅವಕಾಶ ನೀಡಿದ ಪ್ರಧಾನಮಂತ್ರಿಯವರ ಕಚೇರಿ ಹಾಗೂ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯಕ್ಕೆ ಅವರು ಕೃತಜ್ಞತೆ ಸಲ್ಲಿಸಿದರು. ಯುವ ಸಬಲೀಕರಣ, ಆರೋಗ್ಯ ವೃದ್ಧಿ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ವಿವಿಧ ಕಾರ್ಯಕ್ರಮಗಳಿಗೆ ಕಾಹೇರ್ ಸದಾ ಬದ್ಧವಾಗಿರಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಕಾಹೇರ್ನ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಮನೋವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸಮೃದ್ಧಿ ವಿ. ಅವರು ಮಾದಕ ವ್ಯಸನ ತಡೆಗಟ್ಟುವಿಕೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಬಳಿಕ ಎಲ್ಲರೂ ’ನಶಾಮುಕ್ತ ಪ್ರತಿಜ್ಞೆ’ ಸ್ವೀಕರಿಸಿದರು. ಕಾಹೇರ್ನ ವಿವಿಧ ಘಟಕಗಳಿಂದ ಒಟ್ಟು 712 ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾದಕ ವ್ಯಸನಮುಕ್ತ ಜೀವನ ನಡೆಸುವ ಹಾಗೂ ಆರೋಗ್ಯಕರ, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ತಮ್ಮ ಕೊಡುಗೆ ನೀಡುವ ಸಂಕಲ್ಪ ಮಾಡಿದರು. ಕಾರ್ಯಕ್ರಮದ ಕೊನೆಯಲ್ಲಿ ಕಾಹೇರ್ನ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜಕರಾದ ಡಾ. ಅಶ್ವಿನಿ ಬಿ. ನರಸಣ್ಣವರ ವಂದನಾರೆ್ಣ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಗಣ್ಯರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಿಗೆ ಕೃತಜ್ಞತೆ ಅರ್ಿಸಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 