ಯುವಕರು ಕಾಯಕ ನಿಷ್ಠೆ ಅಳವಡಿಸಿಕೊಳ್ಳಲಿ: ಶಾಸಕ ವಿಶ್ವಾಸ ವೈದ್ಯ
Youth should adopt dedication to work: MLA Vishwas Vaidya
ಸವದತ್ತಿ 17: ನಗರದ ತಾಲೂಕು ಆಡಳಿತದ ತಹಶೀಲ್ದಾರರ ಕಾರ್ಯಾಲಯದಲ್ಲಿ ಶ್ರೀ ವಿಶ್ವಕರ್ಮ ಜಯಂತಿಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಶಾಸಕ ವಿಶ್ವಾಸ ವೈದ್ಯ ಹಾಗೂ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ಅವರು ಸಮಾಜದ ಮುಖಂಡರೊಂದಿಗೆ ಶ್ರೀ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ನಂತರ ಮಾತನಾಡಿದ ಶಾಸಕ ವಿಶ್ವಾಸ ವೈದ್ಯ, ಶ್ರೀ ವಿಶ್ವಕರ್ಮರು ಶಿಲ್ಪಕಲೆ, ವಿಜ್ಞಾನ ಮತ್ತು ಸೃಜನಶೀಲತೆಯ ಸಂಕೇತವಾಗಿದ್ದು, ವಿಶ್ವಕರ್ಮ ಸಮುದಾಯವು ತಾಂತ್ರಿಕತೆ, ಕರಕುಶಲ ಹಾಗೂ ನಿರ್ಮಾಣ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿದೆ ಎಂದರು.
ಯುವಜನತೆ ವಿಶ್ವಕರ್ಮರ ಸೃಜನಶೀಲತೆ ಮತ್ತು ಕಾಯಕ ನಿಷ್ಠೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮುದಾಯದ ಅಭಿವೃದ್ಧಿ ಹಾಗೂ ಕುಶಲಕರ್ಮಿಗಳ ಸಬಲೀಕರಣಕ್ಕಾಗಿ ಸರ್ಕಾರ ಒದಗಿಸುವ ಸೌಲಭ್ಯಗಳನ್ನು ಅರ್ಹರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ಮಾತನಾಡಿ, ಕಮ್ಮಾರ, ಅಕ್ಕಸಾಲಿಗ, ಬಡಗಿ, ಶಿಲ್ಪಿ ಹಾಗೂ ಕಾಂಸ್ಯಕಾರರು ಸಮಾಜದ ಅಭಿವೃದ್ಧಿಗೆ ನೀಡಿದ ಕೊಡುಗೆ ಸ್ಮರಣೀಯ. ವಿಶ್ವಕರ್ಮರ ಆದರ್ಶಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಗ್ರೇಡ್-2 ಎಂ.ಎನ್. ಮಠದ, ಗೀರೀಶ್ ಮುನವಳ್ಳಿ, ಸುರೇಶ ತುಪ್ಪದ ಸೇರಿದಂತೆ ಸಮಾಜದ ಗಣ್ಯರು, ಮುಖಂಡರು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 