ಹಾವೇರಿ:ಜ.25: ಸಂವಿಧಾನ ಪ್ರಜೆಗಳಿಗೆ ಮತದಾನ ಹಕ್ಕನ್ನು ನೀಡಿದೆ. ಭವಿಷ್ಯದ ಪ್ರಜೆಗಳಾದ ಯುವ ಸಮೂಹ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕ ಸುಭದ್ರ ಹಾಗೂ ಸದೃಢ ರಾಷ್ಟ್ರ ನಿಮರ್ಾಣಕ್ಕೆ ಮುಂದಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿ.ಜೆ.ಎಂ. ಎ.ವಿ.ಪಾಟೀಲ ಅವರು ಅವರು ಹೇಳಿದರು.
ಭಾರತ ಚುನಾವಣಾ ಆಯೋಗದ, ಹಾವೇರಿ ಜಿಲ್ಲಾಡಳಿತದ ಸಹಯೋಗದಲ್ಲಿ ಶನಿವಾರ ನಗರದ ಜಿಲ್ಲಾ ಗುರುಭವನದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮತದಾನದಲ್ಲಿ ಎಲ್ಲರೂ ಭಾಗವಹಿಸುವ ಕುರಿತಂತೆ ಭಾರತ ಚುನಾವಣಾ ಆಯೋಗ ಮತದಾರರಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕಾರಣ 18 ವರ್ಷ ತುಂಬಿದ ಎಲ್ಲರೂ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸುವ ಮೂಲಕ ನಿಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಮಾತನಾಡಿ, ವಿಶ್ವದ ಕೆಲವು ದೇಶಗಳಲ್ಲಿ ರಾಜರ ಕಾಳ್ವಿಕೆ ಇನ್ನೂ ಜೀವಂತವಾಗಿದೆ. ಆದರೆ ಭಾರತ ಪ್ರಜಾಪ್ರಭುತ್ವ ದೇಶವಾಗಿದೆ. ಪ್ರಜಾಪ್ರಭುತ್ವದಲ್ಲಿ ಯುವ ಜನತೆಯ ಪಾತ್ರ ಬಹಳ ಮುಖ್ಯವಾಗಿದೆ. 18 ವರ್ಷ ಪೂರೈಸಿದ ಯುವ ಸಮೂಹ ಮತದಾನ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು ಹಾಗೂ ಸಂವಿಧಾನ ಶಾಸನಬದ್ಧವಾಗಿ ನೀಡಿರುವ ಮತದಾನದ ಹಕ್ಕನ್ನು ಚಲಾಯಿಸಬೇಕು. 1950ಲ್ಲಿ ಭಾರತ ಚುನಾವಣಾ ಆಯೋಗದ ಸ್ಥಾಪನೆಗೊಂಡಿತು, ಸುವ್ಯವಸ್ಥಿತ, ನ್ಯಾಯ ಸಮ್ಮತ ಚುನವಣೆ ನಡೆಸುವುದು ಆಯೋಗದ ಮುಖ್ಯ ಉದ್ದೇಶವಾಗಿದೆ. ಯಾವುದೇ ಒತ್ತಡಗಳಿಲ್ಲದೆ ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿಕೊಂಡರು.
ಅಪರ ಜಿಲ್ಲಾಧಿಕಾರಿ ಅಪರ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ ಅವರು ಪ್ರಾಸಸ್ತಾವಿಕವಾಗಿ ಮಾತನಾಡಿ, 1950 ರಲ್ಲಿ ಭಾರತ ಚುನಾವಣಾ ಆಯೋಗ ಸ್ಥಾಪನೆಗೊಂಡಿತು. 1950ರ ಪೂರ್ವ ಚುನಾವಣೆ ಮತದಾನ ಪ್ರಮಾಣ ಶೇ.15 ಹಾಗೂ 16%ರಷ್ಟು ಇದ್ದದನ್ನು ಪರಿಗಣಿಸಿ ಮತದಾನದ ವಯೋಮಾನವನ್ನು 22 ರಿಂದ 18 ವರ್ಷಕ್ಕೆ ಇಳಿಸುವ ಮೂಲಕ ಮಹತ್ತರ ತಿದ್ದುಪಡಿ ತರಲಾಯಿತು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ರಾಷ್ಟ್ರ, ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಇಂದು ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತಿದೆ. 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವ ಮೂಲಕ ಮತದಾನ ಪ್ರಕ್ರಿಯೆಲ್ಲಿ ಭಾಗವಹಿಸಬೇಕು. ಜಿಲ್ಲೆಯಲ್ಲಿ ಮಿಂಚಿನ ಮತದಾನ ನೋಂದಣಿ ಮೂಲಕ 24 ಸಾವಿರ ಯುವ ಮತದಾರರನ್ನು ನೋಂದಾಯಿಸಲಾಗಿದೆ. ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ಕರೆ ನೀಡಿದರು.
ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಸಿ.ಪಾವಲಿ ಅವರು ಮಾತನಾಡಿ, ಮತದಾನದ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ 2011 ರಿಂದ ಮತದಾನ ದಿನ ಆಚರಿಸಲಾಗುತ್ತಿದೆ. ದೇಶದಲ್ಲಿ ಹೊಸ ಕ್ರಾಂತಿಗಳಾಗಲು ಯುವ ಮತದಾರರಿಂದ ಮಾತ್ರ ಸಾಧ್ಯ. ಸುಭದ್ರ ಸಕರ್ಾರ ನಿರ್ಮಾಣದ ದೃಷ್ಟಿಯಿಂದ ಯುವ ಮತದಾರರು ದಿಟ್ಟ ಹೆಜ್ಜೆ ಇಡಬೇಕು ಎಂದು ಸಲಹೆ ನೀಡಿದರು.
ಪ್ರತಿಜ್ಞಾವಿಧಿ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ದೇಸಾಯಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ಮತದಾರರ ನೊಂದಣಿ ಪ್ರಕ್ರಿಯೆಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಬಿ.ಎಲ್.ಓ., ಇ.ಎಲ್.ಸಿ.ಗಳನ್ನು ಸನ್ಮಾನಿಸಲಾಯಿತು. ಮತದಾರ ದಿನಾಚರಣೆ ಕುರಿತು ಶಾಲಾ-ಕಾಲೇಜು ವಿದ್ಯಾರ್ಥಿ ಗಳಿಗೆ ಏರ್ಪಡಿಸಲಾದ ಪ್ರಬಂಧ, ರಸಪ್ರಶ್ನೆ ಹಾಗೂ ನಾಟಕ ಸ್ಪಧರ್ೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯಕಾರ್ಯದಶರ್ಿಗಳಾದ ಶ್ರೀಮತಿ ಕೆ.ಶ್ರೀವಿದ್ಯಾ, ಜಿಲ್ಲಾ ವಕೀಲರ ಸಂಘದ ಕಾರ್ಯದಶರ್ಿ ಪಿ.ಎಂ.ಬೆನ್ನೂರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿದರ್ೆಶಕ ಪೀರಜಾದೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ನಗರಸಭೆ ಆಯುಕ್ತ ಬಸವರಾಜ ಜಿದ್ದಿ ಇತರರು ಉಪಸ್ಥಿತರಿದ್ದರು. ಚುನಾವಣಾ ತಹಶೀಲ್ದಾರ ಡಾ.ಪ್ರಶಾಂತ ನಾಲವಾರ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ತಹಶೀಲ್ದಾರ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಶಂಕರ ಜಿ.ಎಸ್. ವಂದಿಸಿದರ.