ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ: ಡಿಸಿ
Youth should cultivate stress management skills for success: DC
ವಿಜಯಪುರ 27: ನಾಡಿನ ಪಾರಂಪರಿಕ ಕಲೆ, ಜಾನಪದ ಹಾಗೂ ರಂಗಭೂಮಿ ಕಲೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವಲ್ಲಿ ಯುವಜನತೆಯ ಪಾತ್ರ ಮಹತ್ತರವಾದದ್ದು. 'ಯುವ ಸೌರಭ'ದಂತಹ ವೇದಿಕೆಗಳು ಗ್ರಾಮೀಣ ಹಾಗೂ ಉದಯೋನ್ಮುಖ ಕಲಾವಿದರಿಗೆ ಸೂಕ್ತ ಪ್ರೋತ್ಸಾಹ ನೀಡಲಿವೆ ಎಂದು ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸ್ಥಳೀಯ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ 'ಯುವ ಸೌರಭ' ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಯುವಪೀಳಿಗೆಯು ದೇಶದ ಸಂಸ್ಕೃತಿ, ಕಲೆ ಮತ್ತು ಜಾನಪದ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವಲ್ಲಿ ಇಂತಹ ವೇದಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಯುವಕರು ವ್ಯಾಸಂಗದ ಜೊತೆಗೆ ಸಾಂಸ್ಕೃತಿಕ ರಂಗದಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದ ಜಿಲ್ಲಾಧಿಕಾರಿಗಳು, ಪ್ರಸ್ತುತ ವಿದ್ಯಾರ್ಥಿಗಳ ಮೇಲೆ ಸಮಾಜ ಹಾಗೂ ಕುಟುಂಬದ ನೀರೀಕ್ಷೆಗಳು ಹೆಚ್ಚಿರುವುದರಿಂದ ಯಶಸ್ವಿ ಜೀವನಕ್ಕೆ ಗಮನ ಕೇಂದ್ರೀಕರಿಸುವುದು ಮತ್ತು ಒತ್ತಡ ನಿರ್ವಹಣೆ ಕಲಿಯುವುದು ಅತ್ಯಗತ್ಯ ಎಂದರು.
ಮೊಬೈಲ್ ಫೋನ್ ಅನ್ನು ಹಿತಮಿತವಾಗಿ ಬಳಸಿ, ದೈನಂದಿನ ಓದಿನಲ್ಲಿ ಧ್ಯಾನ ಮತ್ತು ಶಿಸ್ತನ್ನು ರೂಢಿಸಿಕೊಳ್ಳಬೇಕು. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಹಕೆಲಸದ ಸಾಮರ್ಥ್ಯ ಹೆಚ್ಚುತ್ತದೆ. ಇದು ಸೃಜನಶೀಲತೆ ಬೆಳೆಸುತ್ತದೆ.
ವಿದ್ಯಾರ್ಥಿಗಳಿಗೆ ಯಾವುದೇ ಮಾನಸಿಕ ಒತ್ತಡವಿದ್ದರೆ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ 'ಟೆಲಿಮನಸ್'ಗೆ ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಬಹುದು, ಇಲ್ಲಿ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ಅವರು ಕಿವಿಮಾತು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 