ಜಿ.ಪಂ. ಸಿಇಓ ರಿಷಿ ಆನಂದ ಅವರಿಗೆ ಸರ್ಕಾರದಿಂದ ಪ್ರಶಂಸನಾ ಪತ್ರ
Z.P. CEO Rishi Anand receives a letter of appreciation from the government
ವಿಜಯಪುರ ಜೂ.27: ವಿಜಯಪುರ ಜಿಲ್ಲೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಾದ ಮಣ್ಣಿನ ಫಲವತ್ತತೆಯ ರಾಷ್ಟ್ರೀಯ ಯೋಜನೆ ಎಸ್‌ಎಚ್‌ಸಿ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಆರ್‌ಕೆವಿವೈ) ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ರಾಷ್ಟ್ರೀಯ ತೋಟಗಾರಿಕಾ ಮಿಷನ್ ಎನ್‌ಎಚ್‌ಎಂ ಯೋಜನೆಗಳನ್ನು ಅತ್ಯುತ್ತಮವಾಗಿ ಅನುಷ್ಟಾನಗೊಳಿಸರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಗೆ ಪ್ರಶಂಸನಾ ಪತ್ರ ಲಭಿಸಿದೆ.
ದಿನಾಂಕ:14.05.2025 ರಂದು ಮಾನ್ಯ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ವಲಯ, ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆಯಲ್ಲಿ, ವಿಜಯಪುರ ಜಿಲ್ಲೆಯಲ್ಲಿ ಮಣ್ಣಿನ ಫಲವತ್ತತೆಯ ರಾಷ್ಟ್ರೀಯ ಯೋಜನೆ (ಎಸ್‌ಎಚ್‌ಸಿ), ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಆರ್‌ಕೆವಿವೈ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ, ಮತ್ತು ರಾಷ್ಟ್ರೀಯ ತೋಟಗಾರಿಕಾ ಮಿಷನ್, ಯೋಜನೆಗಳ ಅನುಷ್ಠಾನದಲ್ಲಿ ಗಣನೀಯ ಪ್ರಗತಿ ಸಾಧಿಸಿರುವುದನ್ನು ಗಮನಿಸಿ ಸಂಬಂಧಿಸಿದ ಸಾಧನೆ ಮಾಡಿದ ಅಧಿಕಾರಿಗಳಿಗೆ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಲು ತಿಳಿಸಿರುತ್ತಾರೆ. ಈ ಉತ್ತಮ ಪ್ರಗತಿಯನ್ನು ಸಾಧಿಸಲು ಇಲಾಖಾಧಿಕಾರಿಗಳು ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿಗಳ ಅಚಲವಾದ ಬದ್ಧತೆ, ನಿರಂತರ ಶ್ರಮ ಹಾಗೂ ಸಮನ್ವಯದ ಕಾರ್ಯಪದ್ಧತಿಗೆ ಶ್ಲಾಘನೆ ಸಲ್ಲಬೇಕು. ನಿಮ್ಮ ತಂಡದ ಈ ಉತ್ಸಾಹ ಹಾಗೂ ಕಠಿಣ ಪರಿಶ್ರಮವೇ ಇಂತಹ ಯಶಸ್ಸಿಗೆ ನಾಂದಿಯಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಭಾ.ಆ.ಸೇ ರವರು ಪ್ರಶಂಸನಾ ಪತ್ರದಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಭವಿಷ್ಯದಲ್ಲಿಯೂ ಇಂತಹುದೇ ಉತ್ಸಾಹದಿಂದ ಕಾರ್ಯ ನಿರ್ವಹಣೆಯನ್ನು ನೀರೀಕ್ಷಿಸಲಾಗುತ್ತಿದೆ. ಪ್ರಗತಿ ಪಥದಲ್ಲಿ ಜಿಲ್ಲೆಯ ಸಾಧನೆ ಇತರ ಜಿಲ್ಲೆಗಳಿಗೂ ಪ್ರೇರಣೆಯಾಗಿದೆ' ಎಂದು ಹೇಳಿದ್ದಾರೆ.
ಈ ವಿಶೇಷ ಸಾಧನೆಗಾಗಿ ಜಿ.ಪಂ ಸಿಇಓ ರಿಷಿ ಆನಂದ ಅವರು, ಈ ಉತ್ತಮ ಪ್ರಗತಿಯನ್ನು ಸಾಧಿಸಲು ಮತ್ತು ಗಮನಾರ್ಹ ಪ್ರಗತಿ ಸಾಧಿಸಲು ಕಾರಣವಾದ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕಠಿಣ ಪರಿಶ್ರಮ ಮತ್ತು ಸಹಕಾರಕ್ಕಾಗಿ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಮೆಚ್ಚುಗೆ ನಿಮ್ಮೆಲ್ಲರಿಗೂ ಸಲ್ಲುತ್ತದೆ. ಆದ್ದರಿಂದ, ನಿಮ್ಮೆಲ್ಲರಿಗೂ ಅಭಿನಂದನೆಗಳು ಮತ್ತು ಜಿಲ್ಲೆಯ ಮತ್ತಷ್ಟು ಅಭಿವೃದ್ಧಿ ಮತ್ತು ಪ್ರಗತಿಗೆ ಶುಭಾಶಯಗಳು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಉತ್ತಮ ಪ್ರಗತಿಯನ್ನು ಸಾಧಿಸಲು ಇಲಾಖಾಧಿಕಾರಿಗಳು ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿಗಳ ಅಚಲವಾದ ಬದ್ಧತೆ, ನಿರಂತರ ಶ್ರಮ ಹಾಗೂ ಸಮನ್ವಯದ ಕಾರ್ಯಪದ್ಧತಿಗೆ ಶ್ಲಾಘನೆ ಸಲ್ಲಬೇಕು. ನಿಮ್ಮ ತಂಡದ ಈ ಉತ್ಸಾಹ ಹಾಗೂ ಕಠಿಣ ಪರಿಶ್ರಮವೇ ಇಂತಹ ಯಶಸ್ಸಿಗೆ ನಾಂದಿಯಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಪ್ರಶಂಸನಾ ಪತ್ರದಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಭವಿಷ್ಯದಲ್ಲಿಯೂ ಇಂತಹುದೇ ಉತ್ಸಾಹದಿಂದ ಕಾರ್ಯ ನಿರ್ವಹಣೆಯನ್ನು ನೀರೀಕ್ಷಿಸಲಾಗುತ್ತಿದೆ. ಪ್ರಗತಿ ಪಥದಲ್ಲಿ ಜಿಲ್ಲೆಯ ಸಾಧನೆ ಇತರ ಜಿಲ್ಲೆಗಳಿಗೂ ಪ್ರೇರಣೆಯಾಗಿದೆ ಎಂದು ಹೇಳಿದ್ದಾರೆ.
ಈ ವಿಶೇಷ ಸಾಧನೆಗಾಗಿ ಜಿ.ಪಂ ಸಿಇಓ ರಿಷಿ ಆನಂದ ಅವರು ಈ ಉತ್ತಮ ಪ್ರಗತಿಯನ್ನು ಸಾಧಿಸಲು ಮತ್ತು ಗಮನಾರ್ಹ ಪ್ರಗತಿ ಸಾಧಿಸಲು ಕಾರಣವಾದ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕಠಿಣ ಪರಿಶ್ರಮ ಮತ್ತು ಸಹಕಾರಕ್ಕಾಗಿ ನಾನು ಹೃತೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಮೆಚ್ಚುಗೆ ನಿಮ್ಮೆಲ್ಲರಿಗೂ ಸಲ್ಲುತ್ತದೆ. ಆದ್ದರಿಂದ, ನಿಮ್ಮೆಲ್ಲರಿಗೂ ಅಭಿನಂದನೆಗಳು ಮತ್ತು ಜಿಲ್ಲೆಯ ಮತ್ತಷ್ಟು ಅಭಿವೃದ್ಧಿ ಮತ್ತು ಪ್ರಗತಿಗೆ ಶುಭಾಶಯಗಳು” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 