ಜಿ.ಪಂ. ಸಿಇಓ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರೀಶೀಲನೆ
Z.P. CEO visits flood-affected areas and inspects
ಗದಗ 13: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಜಿಲ್ಲೆಯ ರೋಣ ತಾಲೂಕಿನ ಅಸೂಟಿ, ಹೊಳೆಆಲೂರು, ಮೆಣಸಗಿ, ಅಮರಗೋಳ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮದ ಜಮೀನು,ಮನೆ, ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದರು. ಅಲ್ಲಿನ ಜನರ ಸ್ಥಿತಿಗತಿ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಪರೀಶೀಲನೆ ನಡೆಸಿದರು.
ಸಂದರ್ಭಕ್ಕನುಸಾರ ಪ್ರವಾಹ ಪರಿಸ್ಥಿತಿಯನ್ನು ಅಧಿಕಾರಿ ಹಾಗೂ ಸಿಬ್ಬಂದಿಗಳ ಸ್ಥಳದಲ್ಲಿದ್ದು ಸಮರ್ಥವಾಗಿ ನಿರ್ವಹಣೆ ಮಾಡಬೇಕು. ಸಮಸ್ಯೆ ತಲೆದೂರಿದಲ್ಲಿ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳಬೇಕು.
ಪ್ರವಾಹ ಹಾಗೂ ಅತೀವೃಷ್ಟಿಯಿಂದ ಜನ ಜಾನುವಾರುಗಳ ಜೀವ ರಕ್ಷಣೆಗೆ ಪ್ರಥಮಾಧ್ಯತೆ ನೀಡಬೇಕು. ನಂತರದಲ್ಲಿ ಸಾರ್ವಜನಿಕರ ಆಸ್ತಿ ರಕ್ಷಣೆಗೆ ಅಧಿಕಾರಿ ವರ್ಗ ಮುಂದಾಗಬೇಕು. ತಗ್ಗು ಪ್ರದೇಶಗಳಲ್ಲಿನ ಜನಸಾಮಾನ್ಯರು ಸಾಧ್ಯವಾದಷ್ಟು ಸುರಕ್ಷಿತ ಸ್ಥಳಗಳಿಗೆ ತೆರಳಲು ಸ್ಥಳೀಯ ಅಧಿಕಾರಿಗಳು ಸೂಚಿಸಬೇಕು. ಒಟ್ಟಾರೆ ಇಲಾಖಾಧಿಕಾರಿಗಳ ಸಮನ್ವಯದೊಂದಿಗೆ ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಸರಿಯಾಗಿ ಕಾರ್ಯನಿರ್ವಹಿಸುವ ಮೂಲಕ ಕರ್ತವ್ಯಪ್ರಜ್ಞೆ ಮೆರೆಯಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಅಬ್ಬಿಗೇರಿಯ ಅಟಲ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಕುರಿತು ಪರೀಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ತಾಲೂಕ ಪಂಚಾ0ುತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 