ನರೇಗಾ ಕಾಮಗಾರಿ ಗುಣಮಟ್ಟ ಪರೀಶೀಲಿಸಿದ ಜಿಪಂ ಸಿಇಒ ಭರತ್‌ಎಸ್
ZP CEO Bharat S inspected the quality of NAREGA work
ಗಜೇಂದ್ರಗಡ 04: ಮಹಾತಾ ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನ ವಿವಿಧಗ್ರಾಮ ಪಂಚಾಯತಿಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಪರೀಶೀಲಿಸಲು ಗುರುವಾರ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕಅಧಿಕಾರಿ ಭರತ್ ಎಸ್ ಅವರು ಗಜೇಂದ್ರಗಡ ತಾಲೂಕಿನ ನಿಡಗುಂದಿ ಮತ್ತು ಮಾರನ ಬಸರಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿದರು.ನಿಡಗುಂದಿ ಗ್ರಾಮದ ಸೊಬಗಿನ ಅವರ ಹೊಲದಿಂದ ಕೆಂಪಯ್ಯನವರ ಹೊಲದವರೆಗೆ 2.20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ರಸ್ತೆ ಅಭಿವೃದ್ಧಿ ಕಾರ್ಯವನ್ನು ಪರೀಶೀಲಿಸಿದರು. ಈ ವೇಳೆ ರಸ್ತೆ ನಿರ್ಮಾಣದಲ್ಲಿ ಕ್ರಿಯಾ ಯೋಜನೆಯಂತೆ ರಸ್ತೆ ನಿರ್ಮಾಣ ಕಾರ್ಯ ನಡೆದಿದಿಯೇಎಂಬುದನ್ನು ಕಡತ ಪರೀಶೀಲಿಸಿ ತಿಳಿದುಕೊಂಡರು. ಬಳಿಕ ಗ್ರಾಮದ ಸಂಜೀವಿನಿ ವರ್ಕ್ ಶೆಡ್ ಮತ್ತು ಸಿಸಿ ರಸ್ತೆ ನಿರ್ಮಾಣ ಹಾಗೂ ಸರ್ಕಾರಿ ಕಾಲೇಜಿನಲ್ಲಿ ನಿರ್ಮಿಸಿದ ಪಿಂಕ್ ಶೌಚಾಲಯ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಪರೀಶೀಲಿಸಿ ಗುಣಮಟ್ಟದ ಬಗ್ಗೆ ಅವಲೋಕಿಸಿದರು.
ಮಾರಣಬಸರಿಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಗ್ರಾಮದಲ್ಲಿ ನಿರ್ಮಿಸಲಾದ ನೂತನ ಗ್ರಂಥಾಲಯ ಕಟ್ಟಡಕ್ಕೆ ಸಿಇಒ ಅವರು ಭೇಟಿ ನೀಡಿದರು. ಈ ವೇಳೆ ಗ್ರಂಥಾಲಯದ ಪುಸ್ತಕಗಳ ಸಂಗ್ರಹಕೋಣೆ, ಓದುಗರಿಗೆ ಅನುಕೂಲಕರವಾಗಿರುವ ಪಿಠೋಪಕರಣಗಳ ಗುಣಮಟ್ಟ, ಗ್ರಂಥಾಲಯದಲ್ಲಿ ತಂತ್ರಜ್ಞಾನ ಅಳವಡಿಕೆ ಕಾರ್ಯ ಸೇರಿದಂತೆ ಹಲವು ಮಾಹಿತಿಯನ್ನು ಗ್ರಂಥಪಾಲಕರಿಂದ ಪಡೆದುಕೊಂಡರು. ಬಳಿಕ ಗ್ರಾಮದ ಮೊಹರಂ ರಸ್ತೆ ಅಭಿವೃದ್ಧಿ, ಗ್ರಾಮದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ನೂತನ ಶಾಲಾ ಕಟ್ಟಡವನ್ನು ಪರೀಶೀಲಿಸಿದರು.ಇದೇ ವೇಳೆ ನರೇಗಾ ಕಾಮಗಾರಿಗಳಿಂದ ಗ್ರಾಮಸ್ಥರಿಗೆ ಅನುಕೂಲತೆಯಾಗಿರುವ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯವನ್ನು ಭರತ್‌ಎಸ್, ಅವರು ಪಡೆದುಕೊಂಡರು.
ಬಾಕ್ಸ್:ನರೇಗಾ ಕಾಮಗಾರಿಗಳ ಜೊತೆಗೆ ಭರತ್‌ಎಸ್, ಅವರು ಸರ್ಕಾರಿ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಶೈಕ್ಷಣೀಕ ಚಟುವಟಿಕೆಗಳ ಬಗ್ಗೆ ಸಂವಾದ ನಡೆಸಿದರು. ಕಾಲಕಾಲೇಶ್ವರಗ್ರಾಮದ ಮುರಾರ್ಜಿದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದದ ವೇಳೆ 9 ನೇ ತರಗತಿಯ ವಿದ್ಯಾರ್ಥಿಯೊಬ್ಬಳು ಸಿಇಒ ಅವರ ಗಮನಸೆಳೆದಳು.9 ನೇ ತರಗತಿಯಲ್ಲಿ 98ಅ ಪರಿಶತ ಸಾಧನೆ ಮಾಡಿದ್ದಾಳೆ.ಅಂತ ವಸತಿ ನಿಲಯದ ಶಿಕ್ಷಕರು ಸಿಇಒ ಅವರಿಗೆ ವಿದ್ಯಾರ್ಥಿಯನ್ನು ಪರಿಚಯಿಸಿದರು.ಈ ವೇಳೆ ವಿದ್ಯಾರ್ಥಿಗೆ ಸಿಇಒ ಅವರು, 10 ನೇ ತರಗತಿಯಲ್ಲಿ ಜಿಲ್ಲೆಗೆ ಪ್ರಥಮಳಾಗಿ ತೇರ್ಗಡೆ ಹೊಂದುವಂತೆ ಹರಿಸಿದರು.ಜಿಲ್ಲೆಗೆ ಪ್ರಥಮ ಬೇಡ ಸರ್, ರಾಜ್ಯಕ್ಕೆ ಪ್ರಥಮ ಬರುತ್ತೇನೆಎಂದು ಭರವಸೆ ನೀಡಿ ಸಿಇಒ ಅವರನ್ನು ಆಕರ್ಷಿಸಿದಳು. ವಿದ್ಯಾರ್ಥಿಯ ಮಾತು ಕೇಳಿ ನಾನೇ ಚಿಕ್ಕವನಾದೇ ಎಂದು ಆ ವಿದ್ಯಾರ್ಥಿಗೆ ಬೆನ್ನು ತಟ್ಟಿ ಶುಭ ಕೋರಿದರು.ಬಳಿಕ ವಸತಿ ನಿಯಲದಕಟ್ಟಡ ಪರೀಶೀಲಿಸಿ ವಿದ್ಯಾರ್ಥಿಗಳಿಗೆ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆಯೇ ಎಂದು ತಿಳಿಯಲು ಸ್ವತಃ ವಿದ್ಯಾರ್ಥಿಗಳೊಂದಿಗೆ ಕ್ಲಾಸ್ ನಲ್ಲಿ ಕುಳಿತು ಶಿಕ್ಷಕರ ಪಾಠ ಆಲಿಸಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಉಪಹಾರ ಸವಿದು ವಸತಿ ನಿಲಯದ ಆಹಾರ ಗುಣಮಟ್ಟ ಮತ್ತು ವಸತಿ ನಿಲಯದ ಕಟ್ಟಡ ಪರೀಶೀಲಿಸಿದರು. ಬಳಿಕ ತಾಲೂಕಿನ ಶಿಕ್ಷಕರಿಗೆ ಜಿಲ್ಲೆಯ ಫಲಿತಾಂಶ ಹೆಚ್ಚಿಸಲ ಸೂಚನೆ ನೀಡಿದರು.ಈ ಸಂದರ್ಭದಲ್ಲಿಗಜೇಂದ್ರಗಡತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಂಜುಳಾ ಹಕಾರಿ, ಸಹಾಯಕ ನಿರ್ದೇಶಕ ಬಸವರಾಜ ಬಡಿಗೇರ, ಕ್ಷೇತ್ರ ಶಿಕ್ಷಣಾಧಿಕಾರಿ ಫಣಿಬಂದ, ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕರು, ತಾಲೂಕಿನ ನರೇಗಾ ಸಿಬ್ಬಂದಿ ವರ್ಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 