ಜಿಲ್ಲಾ ಆರೋಗ್ಯ ಸಂಘದ ಸಭೆಯಲ್ಲಿ ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ನಿರ್ದೇಶನ
ZP CEO Muhammad Haris Sumer's direction at the District Health Association meeting
ಲೋಕದರ್ಶನ ವರದಿ
ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಿ
ಬಳ್ಳಾರಿ 22: ಜಿಲ್ಲೆಯಲ್ಲಿ ಆರೋಗ್ಯ ಸೇವೆಗಳು ಪ್ರತಿಯೊಬ್ಬರಿಗೂ ಸರಿಯಾದ ಸಮಯದಲ್ಲಿ ಲಭ್ಯವಾಗಬೇಕು ಮತ್ತು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗುರುವಾರ ನಗರದ ಕೆಆರ್‌ಐಡಿಎಲ್ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಆರೋಗ್ಯ ಸುಧಾರಣೆಗೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಸಂಘದ ಸಭೆ ಜರುಗಿಸಿ ಅವರು ಮಾತನಾಡಿದರು.
*ಹೆಚ್ಚುವರಿ ‘ನಮ್ಮ ಕ್ಲಿನಿಕ್' ಸ್ಥಾಪನೆಗೆ ಪ್ರಸ್ತಾವನೆ:*
ಜಿಲ್ಲೆಯಲ್ಲಿ ಪ್ರಸ್ತುತ 20 ನಮ್ಮ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿವೆ. ನಗರ ಪ್ರದೇಶಗಳ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸಕಾಲದಲ್ಲಿ ಆರೋಗ್ಯ ಸೇವೆ ಸಿಗುವಂತಾಗಲು, ಅವಶ್ಯಕತೆ ಇರುವ ಕಡೆಗಳಲ್ಲಿ ಹೊಸ ನಮ್ಮ ಕ್ಲಿನಿಕ್‌ಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸುವಂತೆ ಸಿಇಒ ಸೂಚಿಸಿದರು.
*ತಾಯಿ-ಶಿಶು ಮರಣ ತಡೆಗೆ ಕ್ರಮ:*
ಗರ್ಭಿಣಿಯರ ದಾಖಲಾತಿಯನ್ನು ಕಡ್ಡಾಯವಾಗಿ 12 ವಾರಗಳ ಒಳಗಾಗಿ ಮಾಡಬೇಕು. ಇದರಿಂದ ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆಗಳಿದ್ದರೆ ಬೇಗನೆ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಮತ್ತು ತಾಯಿ-ಶಿಶು ಮರಣವನ್ನು ತಡೆಯಬಹುದು ಎಂದು ತಿಳಿಸಿದರು.
*ಶೇ.100 ಲಸಿಕಾ ಪ್ರಗತಿ ಸಾಧಿಸಿ:*
ಹೆರಿಗೆಯಾದ ತಕ್ಷಣ ಮಗುವಿಗೆ ನೀಡಲಾಗುವ ಬಿ.ಸಿ.ಜಿ., ಓರಲ್ ಪೋಲಿಯೋ ಹಾಗೂ ಹೆಪಟೈಟೀಸ್ ಬಿ ಲಸಿಕೆಗಳ ವಿತರಣೆಯಲ್ಲಿ ಶೇಕಡಾ 100ರಷ್ಟು ಪ್ರಗತಿ ಸಾಧಿಸಬೇಕು ಎಂದು ಕಟ್ಟುನಿಟ್ಟಿನ ಆದೇಶ ನೀಡಿದರು.
*ತೊಡಕಿನ ಗರ್ಭಿಣಿಯರ ಆರೈಕೆ:*
ಹೆಚ್ಚಿನ ಆರೋಗ್ಯ ಅಪಾಯ ಹೊಂದಿರುವ (ತೊಡಕಿನ) ಗರ್ಭಿಣಿಯರಿಗೆ ಪಿ.ಎಮ್.ಎಸ್.ಎಮ್.ಎ., ಇ.ಪಿ.ಎಮ್.ಎಸ್.ಎಮ್.ಎ ಹಾಗೂ ನಿಯಮಿತ ಆರೋಗ್ಯ ತಪಾಸಣೆಗಳ ಸಮಯದಲ್ಲಿ ವಿಶೇಷ ಆದ್ಯತೆ ನೀಡಿ ಚಿಕಿತ್ಸೆ ನೀಡಬೇಕು ಎಂದು ಅವರು ಸೂಚಿಸಿದರು.
*ಹಾಸ್ಟೆಲ್ ಮಕ್ಕಳ ಆರೋಗ್ಯ ತಪಾಸಣೆ:*
ಆರ್.ಬಿ.ಎಸ್.ಕೆ ವೈದ್ಯಕೀಯ ತಂಡವು ಜಿಲ್ಲೆಯ ಸುಮಾರು 80 ಹಾಸ್ಟೆಲ್‌ಗಳಿಗೆ ಪ್ರತಿ ತಿಂಗಳು ಕನಿಷ್ಠ ಒಂದು ಬಾರಿಯಾದರೂ ಭೇಟಿ ನೀಡಬೇಕು. ಅಲ್ಲಿನ ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯ ಶಿಕ್ಷಣ ನೀಡುವಂತೆ ನಿರ್ದೇಶನ ನೀಡಿದರು.
*ಮುಂಗಾರು ಮುನ್ನೆಚ್ಚರಿಕೆ ಹಾಗೂ ಜಾಗೃತಿ:*
ಮುಂಗಾರು ಮಳೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಸೊಳ್ಳೆಗಳಿಂದ ಹರಡುವ ಕಾಯಿಲೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಜೊತೆಗೆ ನಾಯಿ ಕಡಿತ ಮತ್ತು ಹಾವು ಕಡಿತದ ಕುರಿತು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ತಿಳಿಸಿದರು.
*ಕುಡಿಯುವ ನೀರು ಹಾಗೂ ಕ್ಷಯರೋಗ ತಪಾಸಣೆ:*
ಜಿಲ್ಲೆಯ ಕುಡಿಯುವ ನೀರಿನ ಮೂಲಗಳನ್ನು ನಿಯಮಿತವಾಗಿ ಪರೀಕ್ಷಿಸಬೇಕು ಮತ್ತು ಗ್ರಾಮ ಪಂಚಾಯತ್‌ಗಳೊಂದಿಗೆ ಸಮನ್ವಯ ಸಾಧಿಸಿ ವರದಿಗಳನ್ನು ಪರೀಶೀಲಿಸಬೇಕು. ಜಿಲ್ಲಾ ಆಸ್ಪತ್ರೆ, ಎಲ್ಲಾ ಸಾರ್ವಜನಿಕ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕ್ಷಯರೋಗ (ಟಿಬಿ) ತಪಾಸಣೆಯನ್ನು ವ್ಯಾಪಕವಾಗಿ ನಡೆಸಿ, ಆದಷ್ಟು ಬೇಗ ರೋಗ ಪತ್ತೆ ಹಚ್ಚಿ ಚಿಕಿತ್ಸೆ ಆರಂಭಿಸಲು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಯೋಜನಾ ಅಭಿವೃದ್ಧಿ ಅಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಅಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ವಿಭಾಗ ಅಧಿಕಾರಿ ಡಾ.ವೀರೇಂದ್ರ ಕುಮಾರ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ಆರೋಗ್ಯ ಅಧಿಕಾರಿಗಳು ಮತ್ತು ವಿವಿಧ ವೃಂದದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 