ಪೂರಕ ಮಾಹಿತಿಯೊಂದಿಗೆ ಹಾಜರಾಗಲು ಅಧಿಕಾರಿಗಳಿಗೆ ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ
ZP CEO Muhammad Haris Sumer instructs officials to appear with additional information
ಬಳ್ಳಾರಿ 15: ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು ಜಿಲ್ಲಾ ಪ್ರವಾಸ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರೀಶೀಲನಾ ಸಭೆ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳು ಕಡ್ಡಾಯವಾಗಿ ಪೂರಕ ಮಾಹಿತಿ ಮತ್ತು ಅಂಕಿಅಂಶಗಳೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮೇ 18 ರಂದು ಕರ್ನಾಟಕ ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ಆಯೋಗದ ಅಧ್ಯಕ್ಷರ ಭೇಟಿ ಹಿನ್ನಲೆ ಅಂಗವಾಗಿ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನದ ಕಳೆದ ಮೂರು ವರ್ಷಗಳ ಪ್ರಗತಿ ವರದಿ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಕಾಮಗಾರಿಗಳ ವಿವರಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಎಸ್ಸಿಎಸ್ಪಿ-ಟಿಎಸ್ಪಿ ಅನುದಾನವನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ, ನಿಗದಿತ ಅವಧಿಯೊಳಗೆ ಸಮರ್ಕವಾಗಿ ಬಳಕೆ ಮಾಡಬೇಕು. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಮತ್ತು ವಿತರಿಸಲಾದ ಸೌಲಭ್ಯಗಳ ಬಗ್ಗೆ ನಿಖರವಾದ ಅಂಕಿಅಂಶಗಳನ್ನು ಒದಗಿಸಬೇಕು ಎಂದು ಹೇಳಿದರು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಫಲಾನುಭವಿಗಳಿಗೆ ಯಾವುದೇ ಸೌಲಭ್ಯ ನೀಡುವಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು.
ಇದಕ್ಕಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಆನ್ ಲೈನ್ ಮೂಲಕವೇ ಅರ್ಜಿ ಆಹ್ವಾನಿಸಬೇಕು. ಇದಕ್ಕಾಗಿ ‘ಎನ್‌ಐಸಿ’ ಯುನಿಟ್ ಇದ್ದು, ಆನ್ ಲೈನ್ ಪ್ರಕ್ರಿಯೆಗೆ ಅನುವು ಮಾಡಿಕೊಡಲಿದ್ದಾರೆ ಎಂದು ತಿಳಿಸಿದರು.ಜಿಲ್ಲೆಯ ವಿವಿಧ ನಗರ- ಸ್ಥಳೀಯ ಸಂಸ್ಥೆಗಳಲ್ಲಿ ಎಸ್ಸಿಎಸ್ಪಿ-ಟಿಎಸ್ಪಿ ಅನುದಾನ ಬಳಕೆಯಾಗದೇ ಇರುವುದು ಕಂಡುಬಂದಿದ್ದು, ಸಂಬಂಧಿಸಿದ ಮುಖ್ಯಾಧಿಕಾರಿಗಳಿಗೆ ಹಾಗೂ ಜಿಲ್ಲಾ ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಮಾತನಾಡಿ, ಆಯೋಗದ ಅಧ್ಯಕ್ಷರ ಭೇಟಿಯ ಸಂದರ್ಭದಲ್ಲಿ ಸ್ಥಳೀಯ ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭೇಟಿ ಮಾಡಿ ತಮ್ಮ ಕುಂದುಕೊರತೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಈ ಕುರಿತು ಸಾಕಷ್ಟು ಪ್ರಚಾರ ಕೈಗೊಳ್ಳಬೇಕು. ಆಯೋಗದ ಅಧ್ಯಕ್ಷರ ಭೇಟಿ ಮಾಹಿತಿ ಕುರಿತು ಜನಪ್ರತಿನಿಧಿಗಳಿಗೆ ಗಮನಕ್ಕೆ ತರಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದ್ದಿನ್, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 