ವಸತಿ ನಿಲಯಗಳಲ್ಲಿ ಮಕ್ಕಳಸ್ನೇಹಿ ವಾತಾವರಣ ನಿರ್ಮಾಣಕ್ಕೆ ಜಿಪಂ ಸಿ.ಇ.ಒ ರಾಹುಲ ಶಿಂಧೆ ಸೂಚನೆ
ZP CEO Rahul Shinde instructs to create a child-friendly environment in hostels
ಬೆಳಗಾವಿ, ಆ.26 : ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ವಿತರಣೆ ಹಾಗೂ ಮಕ್ಕಳ ವಸತಿ ನಿಲಯಗಳಲ್ಲಿ ಮಕ್ಕಳಸ್ನೇಹಿ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಜಿಪಂ ಸಿ.ಇ.ಒ ರಾಹುಲ ಶಿಂಧೆ ಅವರು ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಮಕ್ಕಳ ಅಭಿವೃದ್ಧಿ ಸಂಬಂಧ ವಿವಿಧ ಇಲಾಖೆಗಳ ಪ್ರಗತಿ ಪರೀಶೀಲನೆ ಕುರಿತು ನಡೆದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆ ಮತ್ತು ತಾಲೂಕುಗಳಲ್ಲಿ ಇರುವ ಪೌಷ್ಠಿಕ ಪುನರ್ವಸತಿ ಕೇಂದ್ರ (ಎನ್.ಆರ್.ಸಿ) ಗಳಲ್ಲಿ ತೀವ್ರ ಅಪೌಷ್ಠಿಕ ಮಕ್ಕಳನ್ನು ದಾಖಲಿಸಿ ಸರಿಯಾದ ಚಿಕಿತ್ಸೆಯನ್ನು ನೀಡುವುದು. ಜಿಲ್ಲೆಯ ಎಲ್ಲಾ ಶಿಶು ಅಬಿವೃದ್ಧಿ ಯೋಜನಾಧಿಕಾರಿಗಳು ತೀವ್ರ ಅಪೌಷ್ಠಿಕ ಮಕ್ಕಳನ್ನು ಗುರುತಿಸಿ ಪೌಷ್ಠಿಕ ಪುನರ್ವಸತಿ ಕೇಂದ್ರಗಳಿಗೆ ದಾಖಲಿಸಲು ಕ್ರಮ ವಹಿಸಬೇಕು.
ಶಾಲೆ ಮತ್ತು ಅಂಗನವಾಡಿಗಳಿಂದ ಹೊರಗುಳಿದ ಮಕ್ಕಳನ್ನು ಗುರುತಿಸುವುದು ಮತ್ತು ಪ್ರವೇಶ ನೀಡಬೇಕು. ಕಾವಲು ಸಮಿತಿ ಸಭೆ ಮತ್ತು ಪಾಲಕ ಪೋಷಕ ಸಭೆಗಳನ್ನು ಮಾಸಿಕವಾಗಿ ಸರಿಯಾಗಿ ನಿರ್ವಹಿಸಬೇಕು. ಮಕ್ಕಳಿಗೆ ಮಾನಸಿಕ ಆರೋಗ್ಯದ ಸಂಬಂಧ ಆಪ್ತಸಮಾಲೋಚನೆ ಮೂಲಕ ಮಾನಸಿಕ ಆರೋಗ್ಯ ಸ್ವಸ್ಥವಾಗಿ ಇರುವಂತೆ ನೋಡಿಕೊಳ್ಳಬೇಕು. ಶಾಲೆ ಮತ್ತು ಅಂಗನವಾಡಿಗಳಲ್ಲಿ ಹಾಜರಾತಿ ಸರಿಯಾಗಿ ನಿರ್ವಹಿಸಬೇಕು. ಹಾಸ್ಟೆಲ್ಗಳಲ್ಲಿ ನಿಲಯ ಪಾಲಕರು ಸರಿಯಾದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಬಾಲ್ಯ ವಿವಾಹ ತಡೆಗಟ್ಟುವ ಕುರಿತಂತೆ ಎಲ್ಲಾ ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳು ಕ್ರಮವಹಿಸಬೇಕು. ಹಾಸ್ಟೆಲ್ಗಳಲ್ಲಿ ಕಮಿಟಿಗಳನ್ನು ರಚಿಸಬೇಕು. ಪ್ರತಿ ಗ್ರಾಮಸಭೆ, ವಾರ್ಡ ಸಭೆಗಳಲ್ಲಿ ಮಹಿಳಾ ಸಭೆ ಮತ್ತು ಮಕ್ಕಳ ಸಭೆಗಳನ್ನು ಕಡ್ಡಾಯವಾಗಿ ನಿರ್ವಹಿಸಬೇಕು. ವಿದ್ಯಾರ್ಥಿನಿಲಯಗಳಲ್ಲಿ ಸೀಲಿಂಗ ಮೇಲಿನ ಫ್ಯಾನ್ಗಳನ್ನು ತೆಗೆದು ಹಾಕಿ ಗೋಡೆಗೆ ಫ್ಯಾನ್ಗಳನ್ನ ಕಡ್ಡಾಯವಾಗಿ ಅಳವಡಿಸಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ. ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನಕುಮಾರ್ ಎಂ.ಎನ್, ಜಿಲ್ಲಾ ನಿರೂಪಣಾಧಿಕಾರಿ ಅಣ್ಣಪ್ಪ ಹೆಗಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಕಾಂಚನಾ ಅಮಠೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪರ್ವಿನ್, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ, ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 