ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಪರೀಶೀಲಿಸಿದ ಜಿಪಂ ಸಿಇಒ ರಿಷಿ ಆನಂದ
ZP CEO Rishi Anand inspects SSLC exam webcasting center
ಲೋಕದರ್ಶನ ವರದಿ
ವಿಜಯಪುರ,ಮಾ.18 : ಜಿಲ್ಲೆಯಲ್ಲಿ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಜಿಲ್ಲಾ ಪಂಚಾಯತಿಯ ಮಿನಿ ಸಬಾಭವನದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಬುಧವಾರ ಭೇಟಿ ನೀಡಿ ಪರೀಶೀಲನೆ ನಡೆಸಿದರು .
ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಯಾವುದೇ ಸಿಸಿಟಿವ್ಹಿ ಸ್ಥಗಿತಗೊಳ್ಳದಂತೆ ನಿಗಾ ವಹಿಸಬೇಕು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪಗಳು ಉಂಟಾಗದಂತೆ ಕಟ್ಟು-ನಿಟ್ಟಾಗಿ ನಡೆಸುವುದು. ಇದಕ್ಕೆ ಪೂರಕವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ವೆಬ್ ಕಾಸ್ಟಿಂಗ್ ಕೇಂದ್ರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಳಿಕ ವಿಜಯಪುರ ನಗರದ ಹೇಮರೆಡ್ಡಿ ಮಲ್ಲಮ್ಮ ಪ್ರೌಢ ಶಾಲೆ, ಪಿಡಿಜೆ ಪ್ರೌಢಶಾಲೆ, ಬಾಲಕರ ಮತ್ತು ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿದರು. ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಆಸನ ವ್ಯವಸ್ಥೆ, ಪರೀಕ್ಷಾ ಕೊಠಡಿ ಮೇಲ್ವಿಚಾರಕರ ನೇಮಕ, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ವ್ಯವಸ್ಥೆ, ಗಾಳಿ ಹಾಗೂ ಪ್ರಥಮ ಚಿಕಿತ್ಸಾ ವ್ಯವಸ್ಥೆಗಳು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು. ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೇ ಭಯ ಮುಕ್ತರಾಗಿ ಧೈರ್ಯದಿಂದ ಪರೀಕ್ಷೆಯನ್ನು ಬರೆಯುವಂತೆ ಕ್ರಮವಹಿಸಬೇಕು ಎಂದರು
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ, ಮುಖ್ಯ ಯೋಜನಾಧಿಕಾರಿಗಳಾದ ಸಿ. ಬಿ. ಕುಂಬಾರ, ಎಸ್‌ಎಸ್‌ಎಲ್‌ಸಿ ಜಿಲ್ಲಾ ನೋಡಲ್ ಅಧಿಕಾರಿಗಳಾದ ಟಿ. ಎಸ್. ಕೊಲ್ಹಾರ, ವೆಬ್ ಕಾಸ್ಟಿಂಗ್ ಕೇಂದ್ರದ ಮುಖ್ಯಸ್ಥರಾದ ರೇಣುಕಾ ಕಲಬುರ್ಗಿ, ಜಿಲ್ಲೆಯ ಎಲ್ಲಾ ವಲಯಗಳ ಮುಖ್ಯಸ್ಥರು ಹಾಗೂ ಪರೀಕ್ಷಾ ವೆಬ್ ಕಾಸ್ಟಿಂಗ್ ವೀಕ್ಷಕರು, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಪೋಲಿಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಹಾಗೂ ಇತರೆ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 