ಜಿಲ್ಲಾ ಪಂಚಾಯತ್ ಸಿಇಓ ರಿಷಿ ಆನಂದ ಅವರಿಂದ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ: ಕಾಮಗಾರಿ ಪರೀಶೀಲನೆ
ZPCEO Rishi Anand visits various Gram Panchayats: Inspection of works
ವಿಜಯಪುರ ಜುಲೈ 26: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಸಿಂದಗಿ, ಆಲಮೇಲ ಮತ್ತು ಇಂಡಿ ತಾಲೂಕುಗಳಿಗೆ ಭೇಟಿ ನೀಡಿ ಜಲ ಜೀವನ ಮಿಷನ್ ಯೋಜನೆಯಡಿ ಅನುಷ್ಠಾನಗೊಂಡ ಪ್ರತಿ ಮನೆ ಮನೆಗೆ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಗಳನ್ನು ಪರೀಶೀಲನೆ ನಡೆಸಿದರು.
ಸಿಂದಗಿ ತಾಲೂಕಿನ ರಾಂಪುರ ಪಿ.ಎ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಂಪುರ ಪಿ.ಎ ಮತ್ತು ಗಣಿಹಾರ ಗ್ರಾಮ ಹಾಗೂ ಆಲಮೇಲ ತಾಲೂಕಿನ ಕೋರಹಳ್ಳಿ, ಹೂವಿನಹಳ್ಳಿ ಹಾಗೂ ವಿಬೂತಿಹಳ್ಳಿ ಗ್ರಾಮ ಮತ್ತು ಇಂಡಿ ತಾಲೂಕಿನ ಮರಸನಹಳ್ಳಿ, ಸಾಲೋಟಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂದಿರಾ ನಗರ, ಬಬಲಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಬಲಾದ ಮತ್ತು ಹಲಗುಣಕಿ ಮತ್ತು ಹೊರ್ತಿ ಗ್ರಾಮಗಳಲ್ಲಿ ಸಂಚರಿಸಿ, ಪ್ರತಿ ಮನೆ ಮನೆಗೆ ಗಂಗೆ ಕಾರ್ಯಕ್ರಮದಡಿ ಅನುಷ್ಠಾನಗೊಂಡ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರೀಶೀಲನೆ ನಡೆಸಿದರು. ನಳದ ಮೂಲಕ ನೀರು ಪ್ರತಿದಿನ ಪೂರೈಕೆ ಆಗುತ್ತಿರುವ ಕುರಿತು ವಿಚಾರಿಸಿ, ಖುದ್ದಾಗಿ ಪರೀಶೀಲಿಸಿದರು. ಗ್ರಾಮಗಳಲ್ಲಿ ಅನುಷ್ಠಾನಗೊಂಡ ಜಲ ಜೀವನ ಮಿಷನ್ ಯೋಜನೆಯಡಿ ಉತ್ತಮ ಕಾಮಗಾರಿ ಪೂರ್ಣಗೊಂಡಿದ್ದು ಅದನ್ನು ಸಾರ್ವಜನಿಕರು ಮನೆಗೆ ಅಳವಡಿಸಿರುವ ನಳ ಸಂಪರ್ಕದ ಕುರಿತು ಸ್ಥಳೀಯ ಫಲಾನುಭವಿಗಳ ಜೊತೆ ಚರ್ಚಿಸಿ, ನೀರನ್ನು ಪೋಲು ಮಾಡದೆ ವ್ಯವಸ್ಥಿತವಾಗಿ ಬಳಕೆ ಮಾಡಬೇಕು ಎಂದು ಸಾರ್ವಜನಿಕರಿಗೆ ತಿಳಿಸಿದರು.
ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀರನ್ನು ಪೂರೈಕೆ ಮಾಡುವ ಪೂರ್ವದಲ್ಲಿ ನಿಯಮಿತವಾಗಿ ನೀರು ಪರೀಕ್ಷಿಸಲು ಹಾಗೂ ಒಎಚ್‌ಟಿ ಟ್ಯಾಂಕ ಅನ್ನು ನಿಯಮಿತವಾಗಿ ಸ್ವಚ್ಛಗೊಳಿಸಲು ಹಾಗೂ ಕ್ಲೋರಿನೇಷನ್ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಂಬಂಧ ಪಟ್ಟ ಸಹಾಯಕ ಕಾರ್ಯನಿರ್ವಾಹಕ ನೀರು ಕಲುಷಿತವಾಗದಂತೆ ಮುಂಜಾಗೃತೆ ವಹಿಸುವಂತೆ ಸೂಚಿಸಿದರು. ಪ್ರತಿ ಮನೆಗೆ ನೀರು ಸರಿಯಾದ ಪ್ರಮಾಣದಲ್ಲಿ ಬರುವುದನ್ನು ಖಾತ್ರಿ ಪಡಿಸಿಕೊಂಡು ನಂತರ ಅದನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲು ಸೂಚಿಸಿದರು. ಗ್ರಾಮ ಪಂಚಾಯಿತಿಗೆ ಈ ಯೋಜನೆ ಹಸ್ತಾಂತರಗೊಂಡ ನಂತರ ಯೋಜನೆಯನ್ನು ಸರಿಯಾಗಿ ನಿರ್ವಹಣೆ ಮಾಡುವುದು ಗ್ರಾಮ ಪಂಚಾಯತಿಯ ಜವಾಬ್ದಾರಿಯಾಗಿದೆ ಎಂದು ಸ್ಥಳದಲ್ಲಿದ್ದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯಿತಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಗಮನಿಸಿದರು ಅದಕ್ಕೆ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇವರು ಈಗಾಗಲೇ 220 ಶುದ್ದ ಕುಡಿಯುವ ನೀರಿನ ಘಟಕಗಳನ್ನು ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಲಾಗಿದ್ದು, ದುರಸ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಅಂದಾಜು ಪತ್ರಿಕೆ ತಯಾರಿಸಲಾಗಿದ್ದು ಮುಂಬರುವ ದಿನಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗುವುದೆಂದು ತಿಳಿಸಿದರು. ಎಲ್ಲ ಗ್ರಾಮಗಳ ಭೇಟಿಯ ಸಂದರ್ಭದಲ್ಲಿ ಓವರ್ ಹೆಡ್ ಟ್ಯಾಂಕ್‌ಗಳನ್ನು ಪ್ರತಿ ಹದಿನೈದು ದಿನಕ್ಕೊಮ್ಮೆ ಸ್ವಚ್ಛತೆ ಮಾಡುವಂತೆ ಪಿಡಿಓ ಹಾಗೂ ನೀರುಗಂಟಿ ಸಿಬ್ಬಂದಿಗಳಿಗೆ ಸೂಚಿಸಿದರು. ಪ್ರಸ್ತುತ ಮಳೆಗಾಲ ಸಂದರ್ಭವಾಗಿರವುದರಿಂದ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುವ ಮೂಲಕ ಗ್ರಾಮೀಣ ಜನರ ಆರೋಗ್ಯ ಕಾಪಾಡಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗದಂತೆ ನಿರ್ವಹಣೆ ಮಾಡುವಂತೆ ಸಂಬಂಧಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಇಂಡಿ ಅರ್ಜುಣಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಅಳವಡಿಸಿರುವ ಎಎಒ ಕಾಮಗಾರಿ ವೀಕ್ಷಿಸಿ ಕಾರ್ಯಾತ್ಮಕ ನಳ ಸಂಪರ್ಕ ಪರೀಶೀಲನೆ ಮಾಡಿದರು.ಸಾಲೋಟಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಿದ ಸಿ.ಸಿ ರಸ್ತೆ ಕಾಮಗಾರಿ, ಗ್ರಾಮಗಳಲ್ಲಿನ ಕುಡಿಯುವ ನೀರಿನ ಮೂಲಗಳ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕೆಂದು ತಿಳಿಸಿ, ನೀರಿನ ಟ್ಯಾಂಕಗಳ ಸ್ವಚ್ಛತೆ ಬಗ್ಗೆ ಹೆಚ್ಚು ಗಮನ ವಹಿಸಿ ಹಾಗೂ ಜಲ ಜೀವನ ಮಿಷನ್ ಯೋಜನೆಯಡಿ ಬಾಕಿ ಉಳಿದ ಗ್ರಾಮಗಳ ಕಾಮಗಾರಿಗಳನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಿ ಜನರಿಗೆ ನಳ ಸಂಪರ್ಕ ಒದಗಿಸಿ ನೀರು ಪೂರೈಕೆಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ನಿರ್ದೇಶನ ನೀಡಿದರು.
ಇದೇ ವೇಳೆ ಹೊರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ಗಳಿಗೆ ಭೇಟಿ ನೀಡಿ ಮನೆಮನೆಗೆ ಅಳವಡಿಸಿರುವ ಜಲ ಜೀವನ ಮಿಷನ್ ಯೋಜನೆಯಡಿಲ್ಲಿನ ನಳ ಸಂಪರ್ಕದ ವ್ಯವಸ್ಥೆ ಕುರಿತು ಮಾಹಿತಿ ನೀಡಿದರು. ಗ್ರಾಮಸ್ಥರ ಕುಂದು ಕೊರತೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಬಸವರಾಜ ಕುಂಬಾರ, ಇಂಡಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಭೀಮಾಶಂಕರ ಕನ್ನೂರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ತಾರನಾಥ್ ರಾಠೋಡ, ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕರಾದ ಸಿದ್ದರಾಮ ಅಂಕಲಗಿ, ನಿತ್ಯಾನಂದ ಯಲಗೋಡ, ಆರ್. ಎಸ್ ಬಂಡಿ , ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶಶಿಧರ್ ಮೆಡೆದಾರ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಕಲ್ಮೇಶ ಜಾನಮಟ್ಟಿ, ಅಮಸಿದ್ದ ಹರಿಜನ ಮತ್ತು ಪ್ರಭಾವತಿ ಕುಂಬಾರ, ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮುತ್ತಪ್ಪ ಜಾಡರ, ಶ್ರೀಶೈಲ ಬಿರಾದಾರ, ಸಿದರಾಯ ಬಿರಾದಾರ ಸೇರಿದಂತೆ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 