ಜಹೀರ್ ಹಮ್ಜವಿಗೆ ಕರುನಾಡ ಭೂಷಣ ಪ್ರಶಸ್ತಿ
ಲೋಕದರ್ಶನ ವರದಿ
ಕೊಪ್ಪಳ: ಪಕ್ಕದ ಗೋವಾ ರಾಜ್ಯದ ಸಾಕಳಿ ನಗರದಲ್ಲಿ ಇದೇ ನವ್ಹಂಬರ್: 03 ರಂದು ಜರುಗಲಿರುವ ಗೋವಾ ಕನ್ನಡಿಗರ ಸಾಂಸ್ಕೃತಿಕ ಸಂಭ್ರಮ ಹಾಗೂ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕೊಡಮಾಡುವ ಕರುನಾಡ ಭೂಷಣ ಪ್ರಶಸ್ತಿಗೆ ಕೊಪ್ಪಳದ ಸ್ಟಾರ ಚಿತ್ರಮಂದಿದಲ್ಲಿ ಕಾರ್ಯನಿರ್ವಹಿಸುತ್ತೀರುವ ಚಿತ್ರ ಪ್ರದರ್ಶಕ(ಆಪರೇಟರ್) ಸೈಯದ್ ಜಹೀರ್ ಹುಸೇನ್ ಹಮ್ಜವಿ ರವರು ಆಯ್ಕೆಗೊಂಡಿದ್ದಾರೆ.
ನವ್ಹಂಬರ್: 03 ರಂದು ಸಾಕಳಿ ನಗರದಲ್ಲಿ ಜರುಗುವ ಕಾರ್ಯಕ್ರಮದ ಉದ್ಘಾಟನೆಯನ್ನು ಗೋವಾ ರಾಜ್ಯದ ಮುಖ್ಯಮಂತ್ರಿ ಪ್ರಮೋದ ಸಾವಂತ್ ನೆರವೇರಿಸಲಿದ್ದು ವಿವಿಧ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಕೊಪ್ಪಳದ ಸ್ಟಾರ ಚಿತ್ರಮಂದಿದಲ್ಲಿ ಕಳೆದ ಐದು ದಶಕದಿಂದ ಕಾರ್ಯನಿರ್ವಹಿಸುತ್ತೀರುವ ಚಿತ್ರ ಪ್ರದರ್ಶಕ(ಆಪರೇಟರ್) ಸೈಯದ್ ಜಹೀರ್ ಹುಸೇನ್ ಹಮ್ಜವಿ ಅವರ ಉತ್ತಮ ಹಾಗೂ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕಾರ್ಯಕ್ರಮದ ಸಂಘಟಕ ಮಹೇಶಬಾಬು ಸುರ್ವೇ ಮತ್ತು ಆಯ್ಕೆ ಸಮಿತಿ ಸಂಚಾಲಕ ಶಿವಬಾಲಸ್ವಾಮಿರವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋವಾದಲ್ಲಿ ಜರುಗುವ ಕನ್ನಡ ರಾಜ್ಯೋತ್ಸವದಲ್ಲಿ ನವ್ಹಂಬರ್: 03ರಂದು ಜರುಗುವ ಸಾಂಸ್ಕೃತಿಕ ಸಂಭ್ರಮಾಚರಣೆಯಲ್ಲಿ ಕೊಪ್ಪಳದ ಸೈಯದ್ ಜಹೀರ್ ಹುಸೇನ್ ಹಮ್ಜವಿ ಕರುನಾಡ ಭೂಷಣ ಪ್ರಶಸ್ತಿ ಲಭಿಸಿರುವದಕ್ಕೆ ಜಿಲ್ಲೆಯ ವಿವಿಧ ಸಂಘಟನೆಗಳು ಹರ್ಷವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 