ಜೈದ್ ಖಾನ್ ಕಲ್ಟ್ ಚಲನಚಿತ್ರ ಅದ್ಧೂರಿ ಪ್ರಾರಂಭ
Zaid Khan's cult film gets a grand opening
ಕೊಪ್ಪಳ 24: ಇಲ್ಲಿನ ಶಾರದಾ ಚಿತ್ರಮಂದಿರದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ನಟನೆಯ ಕಲ್ಟ್ ಚಿತ್ರವನ್ನು ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಜಾಂಜ್ ಮೇಳದೊಂದಿಗೆ ಆರಂಭ ಮಾಡಲಾಯಿತು. ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಮಂಜುನಾಥ ಜಿ. ಗೊಂಡಬಾಳ, ಚಿತ್ರ ಸಾಹಿತಿ ಮಹಾಂತೇಶ ಮಲ್ಲನಗೌಡರ, ಚಿತ್ರ ನಿರ್ದೇಶಕ ಬಸವರಾಜ ಕೊಪ್ಪಳ, ಮುಖಂಡರಾದ ನಾಗರಾಜ ಮೇಟಿ ಇತರರು ಇದ್ದರು. ನಂತರ ಮಾಜಿ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಅವರ ನೇತೃತ್ವದಲ್ಲಿ ನೂರಾರು ಜನರು ಚಲನಚಿತ್ರ ವೀಕ್ಷಿಸಿದರು. ಕಲ್ಟ್ ಚಿತ್ರ ಯುವ ನಟ ಜೈದ್ ಖಾನ್ ಅವರ ಎರಡನೇ ಚಿತ್ರವಾಗಿದ್ದು ಚಿತ್ರದಲ್ಲಿ ಖ್ಯಾತ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ವಿಶೇಷ ಪಾತ್ರದಲ್ಲಿ ನಟಿಸಿದ್ದು, ಮಲೈಕಾ ನಾಯಕಿಯಾಗಿ ನಟಿಸಿದ್ದಾರೆ. ಜನೇವರಿ 23 ರಂದು ರಾಜ್ಯಾದ್ಯಂತ ಪ್ರದರ್ಶನ ಕಂಡಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 