ಪರೀಕ್ಷಾ ವ್ಯವಸ್ಥೆ ಪರೀಶೀಲಿಸಿದ ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ

ಪರೀಕ್ಷಾ ವ್ಯವಸ್ಥೆ ಪರೀಶೀಲಿಸಿದ ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ Zilla Panchayat CEO Rishi Anand inspected the examination system

ವಿಜಯಪುರ 21 : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ವತಿಯಿಂದ ಭಾನುವಾರ ನಗರದಲ್ಲಿ ನಡೆದ  ನೀಟ್ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಭೇಟಿ ನೀಡಿ ಪರೀಶೀಲಿಸಿದರು. ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಸಿಕ್ಯಾಬ್ ಬಾಲಕರ ಮತ್ತು ಬಾಲಕಿಯರ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಿಗೆ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆಗಳ ಕುರಿತು  ಪರೀಶೀಲನೆ ನಡೆಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಕಲ್ಪಿಸಲಾಗಿರುವ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ನಿರ್ವಹಣೆ, ಪರೀಕ್ಷಾ ಕೊಠಡಿಗಳು, ಭದ್ರತಾ ವ್ಯವಸ್ಥೆಗಳು, ತುರ್ತು ಆರೋಗ್ಯ ಸೇವೆಗಳ ಲಭ್ಯತೆ ಸೇರಿದಂತೆ ವಿವಿಧ ವ್ಯವಸ್ಥೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತೊಂದರೆಯಾಗದ ರೀತಿ  ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಪರೀಕ್ಷಾ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿ ನಡೆಯಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. 

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳುವುದು ಹಾಗೂ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಅಗತ್ಯ ಮಾರ್ಗದರ್ಶನ ಒದಗಿಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ ಪರೀಕ್ಷೆ  ಯಶಸ್ವಿಗೊಳಿಸಲು ಸಹಕರಿಸಬೇಕು ಎಂದರು. 

ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಪರೀಕ್ಷಾ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿದರು.