ಮುಂಬೈ 07: ಅತಿಥೇಯ ಇಂಗ್ಲೆಂಡ್ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗೆ ಅಲಭ್ಯರಾಗಿರುವ ಭಾರತ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಅವರು ಟೆಸ್ಟ್ ಸರಣಿಗೆ ಲಭ್ಯರಾಗಲಿದ್ದು, ಎರಡನೇ ಪಂದ್ಯದಿಂದ ಕಣಕ್ಕಿಳಿಯುವುದು ಖಚಿತವಾಗಿದೆ.
ಐಲರ್ೆಂಡ್ ವಿರುದ್ಧದ ಟಿ-20 ಸರಣಿ ವೇಳೆ ಬುಮ್ರಾ ಅವರ ಹೆಬ್ಬೆರಳಿಗೆ ಗಾಯವಾಗಿತ್ತು. ಹೀಗಾಗಿ ಶಸ್ತ್ರಚಿಕಿತ್ಸೆಗೊಳಗಾಗಿರುವ ಅವರು ಇಂಗ್ಲೆಂಡ್ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಜುಲೈ 4ರಂದು ಬುಮ್ರಾ ಅವರಿಗೆ ಚಿಕಿತ್ಸೆ ನೀಡಲಾಗಿತ್ತು.
ಆದರೆ ಚಿಕಿತ್ಸೆಯಿಂದ ಚೇತರಿಸಿಕೊಳ್ಳದ ಕಾರಣ, ವಿಶ್ರಾಂತಿಯ ಅಗತ್ಯವಿದೆ ಎಂದು ಭಾರತಕ್ಕೆ ಕಳುಹಿಸಲಾಗಿತ್ತು. ಬುಮ್ರಾ ಬದಲು ಏಕದಿನ ಸರಣಿಗೆ ಬಿಸಿಸಿಐ ಶಾದರ್ೂಲ್ ಠಾಕುರ್ ಅವರನ್ನು ಆಯ್ಕೆ ಮಾಡಿದೆ.
ಭಾರತ ತಂಡ ಇಂಗ್ಲೆಂಡ್ ಜೊತೆಗೆ ಒಟ್ಟು 5 ಟೆಸ್ಟ್ ಪಂದ್ಯಗಳನ್ನಾಡಲಿದ್ದು, ಆಗಸ್ಟ್ 1 ರಿಂದ ಆರಂಭವಾಗುವ ಮೊದಲ ಟೆಸ್ಟ್ ಪಂದ್ಯದಿಂದ ಬುಮ್ರಾ ಹೊರಗುಳಿಯಲಿದ್ದು, ಎರಡನೇ ಟೆಸ್ಟ್ಗೆ ಬುಮ್ರಾ ಭಾರತ ತಂಡ ಸೇರಲಿದ್ದಾರೆ.