ಪ್ರಧಾನಿ ಮೋದಿ ನೇತೃತ್ವದ ಆಡಳಿತ ತುತರ್ು ಪರಿಸ್ಥಿತಿಗಿಂತಲೂ ದಾರುಣವಾಗಿದೆ: ಅರುಣ ಶೌರಿ
ನವದೆಹಲಿ: ಪ್ರಸ್ತುತ ದೇಶದ ಪರಿಸ್ಥಿತಿ 1975-77ರ ನಡುವಿನ ತುತರ್ು ಪರಿಸ್ಥಿತಿಗಿಂತಲೂ ದಾರುಣವಾಗಿದೆ. ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರಿಗೆ ತಮ್ಮ ಕರ್ತವ್ಯದ ಬಗ್ಗೆ ಅನುಕಂಪ, ಅರಿವು ಇತ್ತು. ಆದರೆ ಇಂದಿನ ಪ್ರಧಾನಿ ಮೋದಿಯವರಿಗೆ ತಮ್ಮ ಕರ್ತವ್ಯದ ಬಗ್ಗೆ ಅನುಕಂಪವೇ ಇಲ್ಲ ಎಂದು ಖ್ಯಾತ ಪತ್ರಕರ್ತ ಮತ್ತು ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ಹೇಳಿದ್ದಾರೆ.
ಮುಂಬೈನಲ್ಲಿ ನಡೆದ ಟಾಟಾ ಸಾಹಿತ್ಯ ಹಬ್ಬದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 'ನ್ಯಾಯಾಂಗ ವ್ಯವಸ್ಥೆಯೊಳಗಿನ ಅಪಾಯ' ಎಂಬ ವಿಚಾರದ ಕುರಿತು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ವಿಪಕ್ಷಗಳೆಲ್ಲಾ ಒಗ್ಗೂಡಿ ಮುಂದಿನ 2019ರ ಲೋಕಸಭಾ ಚುನಾವಣೆಯಲ್ಲಿ ಹೋರಾಡಿದರೆ ಪ್ರಧಾನಿ ಮೋದಿಯ ಸವರ್ಾಧಿಕಾರಿ ಧೋರಣೆಗೆ ಬ್ರೇಕ್ ಹಾಕಬಹುದು ಎಂದು ಶೌರಿ ಕರೆ ನೀಡಿದ್ದಾರೆ.
ದೇಶದ ಇಂದಿನ ಪರಿಸ್ಥಿತಿಗಿಂತ 1975-77ರ ನಡುವಿನ ತುತರ್ು ಪರಿಸ್ಥಿತಿಯೇ ಮೇಲು ಎಂದೆನಿಸುತ್ತದೆ. ಏಕೆಂದರೆ ಅಂದು ಇಂದಿರಾಗಾಂಧಿ ಅವರಿಗೆ ತಮ್ಮ ಕೃತ್ಯದ ಬಗ್ಗೆ ಅನುಕಂಪವಿತ್ತು. ಆದರೆ ಈಗಿನ ಪ್ರಧಾನಿಗೆ ಅದಿಲ್ಲ. ಅಂದು ಇಂದಿರಾಗಾಂಧಿ ಸುಮಾರು 75 ಸಾವಿರ ಮಂದಿಯನ್ನು ಜೈಲಿಗಟ್ಟಿದ್ದರು. ಆದರೆ ಅದಕ್ಕೊಂದು ಮಿತಿ ಇತ್ತು. ಅದನ್ನು ಇಂದಿರಾಗಾಂಧಿ ದಾಟಿರಲಿಲ್ಲ. ಆದರೆ ಇಂದಿನ ಪ್ರಧಾನಿಗೆ ತಮ್ಮ ಕೃತ್ಯದ ಬಗ್ಗೆ ಅನುಕಂಪವೇ ಇಲ್ಲ. ದೇಶದ ಪ್ರಮುಖ ಸಂಸ್ಥೆಗಳನ್ನೇ ಬುಡಮೇಲು ಮಾಡ ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
2014ರ ಸಕರ್ಾರಿ ವಿರೋಧಿ ಅಲೆಯಲ್ಲಿ ಮೋದಿ ಗೆದ್ದಿರಬಹುದು. ಆದರೂ ಅವರ ಮತ ಗಳಿಕೆ ಕೇವಲ ಶೇ.31ರಷ್ಟು ಮಾತ್ರ. ಅಂದರೆ ಶೇ.69ರಷ್ಟು ಮಂದಿ ಮೋದಿ ವಿರುದ್ಧವಾಗಿ ಮತ ಹಾಕಿದ್ದಾರೆ. ಇದರಿಂದಲೇ ತಿಳಿಯುತ್ತದೆ ಜನತೆಗೂ ಮೋದಿ ಮೇಲೆ ಸಂಪೂರ್ಣ ವಿಶ್ವಾಸವಿಲ್ಲ ಎಂಬುದು.
ಒಂದು ವೇಳೆ ಕಾಂಗ್ರೆಸ್ ಸೇರಿದಂತೆ ಪ್ರಮುಖ ವಿಪಕ್ಷಗಳು ಒಗ್ಗಟ್ಟಾಗಿ ಲೋಕಸಭಾ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಿದರೆ 2019ರ ಚುನಾವಣೆಯಲ್ಲಿ ಖಂಡಿತಾ ಮೋದಿ ನೇತೃತ್ವದ ಬಿಜೆಪಿ ಸಕರ್ಾರವನ್ನು ಮಣಿಸಬಹುದು. ಒಂದು ವೇಳೆ ವಿಪಕ್ಷಗಳು ಈ ಬಗ್ಗೆ ಒಪ್ಪದಿದ್ದರೆ ವಿಪಕ್ಷಗಳ ಮತ ವಿಭಜನೆಯಾಗಿ ಮತ್ತೆ ಮೋದಿಗೆ ನೆರವಾಗುತ್ತದೆ. ಅದರಿಂದ ಈಗಿರುವ ದೇಶದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತದೆ ಎಂದು ಕಳವಳವ್ಯಕ್ತಪಡಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 