ಬೆಂಗಳೂರು 22: ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ 7 ಜೆಡಿಎಸ್ ಮುಖಂಡರು ನಾಪತ್ತೆ, ಇಬ್ಬರ ಸಾವು
ಬೆಂಗಳೂರು 22: ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ 7 ಜನ ಜೆಡಿಎಸ್ ಮುಖಂಡರು , ಬಾಂಬ್ ದಾಳಿ ಬಳಿಕ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ಅಡಕಿಮಾರನಹಳ್ಳಿ ಗ್ರಾಮದ ಮಾರೇಗೌಡ, ಹಾರೋಕ್ಯಾತನಹಳ್ಳಿಯ ಪುಟ್ಟರಾಜು, ನೆಲಮಂಗಲ ತಾಲೂಕಿನ ಹೋವೇನಹಳ್ಳಿಯ ಶಿವಣ್ಣ, ಕಾಚನಹಳ್ಳಿ ಗ್ರಾಮದ ಲಕ್ಷ್ಮೀನಾರಾಯಣ, ಬೆಂಗಳೂರು 8ನೇ ಮೈಲಿಯ ಹನುಮಂತರಾಯಪ್ಪ, ದಾಸರಹಳ್ಳಿ ನಿವಾಸಿ ರಂಗಪ್ಪ ಮತ್ತು ತುಮಕೂರಿನ ರಮೇಶ್ ನಾಪತ್ತೆಯಾದವರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ವೀರಪ್ಪಮೊಯ್ಲಿ ಪರ ಮತ ಪ್ರಚಾರ ಮುಗಿಸಿದ ಬಳಿಕ ಇವರೆಲ್ಲ ಶ್ರೀಲಂಕಾಗೆ ಪ್ರವಾಸ ಕೈಗೊಂಡಿದ್ದು, ಅಲ್ಲಿಯ ಶಾಂಗ್ರಿಲ್ಲಾ ಹೋಟೆಲ್‌ನಲ್ಲಿ ತಂಗಿದ್ದರು.
ಆದರೆ, ಶ್ರೀಲಂಕಾದಲ್ಲಿ ನಡೆದ ಭೀಕರ ಬಾಂಬ್ ದಾಳಿ ಬಳಿಕ ಈ ಏಳು ಜನರ ಮೊಬೈಲ್ ಫೋನ್ ಸಂಪರ್ಕಕ್ಕೆ ಸಿಗುತ್ತಿಲ್ಲವಾಗಿದ್ದು, ಕುಟುಂಬಸ್ಥರು ಆತಂಕದಲ್ಲಿದ್ದಾರೆ.
ಬಾಂಬ್ ದಾಳಿಯಲ್ಲಿ ಹನುಮಂತರಾಯಪ್ಪ ಮತ್ತು ರಂಗಪ್ಪ ಎಂಬವರು ಸಾವನ್ನಪ್ಪಿದ್ದು, ಉಳಿದವರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಶ್ರೀಲಂಕಾದಲ್ಲಿ ಭಾನುವಾರ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290 ಮಂದಿ ಸಾವನ್ನಪ್ಪಿದ್ದು, 500ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 