ಬೆಳಗಾವಿ 17, ಜಿಲ್ಲೆಯಲ್ಲಿ ಅನಾವೃಷ್ಟಿಯಿಂದ ಮುಂಗಾರು ಬೆಳೆಹಾನಿ ಆಗಿರುವ ಕುರಿತು ಒಂದು ವಾರದೊಳಗೆ ಕೇಂದ್ರ ಸಕರ್ಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲೆಗೆ ಭೇಟಿ ನೀಡಿದ್ದ ಕೇಂದ್ರ ಅಧ್ಯಯನ ತಂಡದ ಮುಖ್ಯಸ್ಥ ಹಾಗೂ ಪಶು ಸಂಗೋಪನೆ ಇಲಾಖೆಯ ನಿದರ್ೇಶಕ ಮಹೇಶ್ ಹೇಳಿದರು.
ಸವದತ್ತಿ ತಾಲ್ಲೂಕಿನ ಹೂಲಿಕಟ್ಟಿ ಕ್ರಾಸ್ ಬಳಿಯ ಹೊಲದಲ್ಲಿ ಹಾನಿಗೊಳಗಾಗಿರುವ ಹತ್ತಿ ಮತ್ತು ಸೂರ್ಯಕಾಂತಿ ಬೆಳೆಯನ್ನು ಪರಿಶೀಲಿಸಿದ ಬಳಿಕ ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು.
ಜಿಲ್ಲೆಯ ವಿವಿಧ ಕಡೆಗಳಲ್ಲಿ ಬೆಳೆಹಾನಿ ಪರಿಶೀಲನೆ ನಡೆಸಲಾಗಿದ್ದು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಮಾರ್ಗಸೂಚಿಯ ಪ್ರಕಾರ ಕೇಂದ್ರ ಸಕರ್ಾರಕ್ಕೆ ವರದಿ ಸಲ್ಲಿಸಲಾಗುವುದು.
ಬೆಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ನೀಡುವ ಸಮಗ್ರ ವರದಿ ಹಾಗೂ ಕ್ಷೇತ್ರ ಭೇಟಿ ವೇಳೆ ಅಧ್ಯಯನ ತಂಡ ಕಂಡುಕೊಂಡ ಪರಿಸ್ಥಿತಿಯನ್ನು ಆಧರಿಸಿ ವರದಿಯನ್ನು ಸಿದ್ಧಪಡಿಸಲಾಗುತ್ತದೆ.
ಬೆಂಗಳೂರಿನಲ್ಲಿ ಸೋಮವಾರ(ನ.19) ಕೇಂದ್ರ ಬರ ಅಧ್ಯಯನ ತಂಡದ ಮುಖಸ್ಯರ ಜತೆ ಸಭೆ ನಡೆಯಲಿದ್ದು, ಒಟ್ಟಾರೆ ರಾಜ್ಯದ ಪರಿಸ್ಥಿತಿ ಕ್ರೋಢೀಕರಿಸಿ ಸಿದ್ಧಪಡಿಸುವ ವರದಿಯನ್ನು ಭಾರತ ಸಕರ್ಾರಕ್ಕೆ ಕಳುಹಿಸಲಾಗುತ್ತದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಜಿಲ್ಲೆಯಲ್ಲಿ ಅನಾವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿಯನ್ನು ವಿವರಿಸಿದರು.
ಜಿಲ್ಲೆಯ ಸವದತ್ತಿ ಹಾಗೂ ರಾಮದುರ್ಗ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಇಂದು ಭೇಟಿ ನೀಡಿದ ಕೇಂದ್ರ ಬರ ಅಧ್ಯಯನ ತಂಡದ ಅಧಿಕಾರಿಗಳು ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬೆಳೆ ಹಾನಿಯನ್ನು ಪರಿಶೀಲಿಸಿದರು.
ಗೊರಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಶಿಡೋಣಿ ಗ್ರಾಮದ ಈರಬಸವ್ವ ಕೆಂಚನಗೌಡ್ರ ಅವರ 2.29 ಎಕರೆ ಜಮೀನಿನಲ್ಲಿ ನಾಶಗೊಂಡಿರುವ ಸೂರ್ಯಕಾಂತಿ ಬೆಳೆಯನ್ನು ಕೇಂದ್ರ ಬರ ಅಧ್ಯಯನ ತಂಡದ ಸದಸ್ಯರು ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಈರಬಸವ್ವ ಕೆಂಚನಗೌಡ್ರ, ಬೀಜ, ಗೊಬ್ಬರ, ಬಿತ್ತನೆ ಆಳಿನ ಕೂಲಿ, ಕಳೆಕಸ ತೆಗೆಯಲು ಒಟ್ಟಾರೆ ಈ ಬಾರಿ 15 ಸಾವಿರ ರೂಪಾಯಿ ಖಚರ್ಾಗಿದೆ. ಬೆಳೆ ನಷ್ಟದಿಂದ ಒಂದು ವರ್ಷದ ಶ್ರಮ ಮತ್ತು ಹಣ ಎರಡೂ ವ್ಯರ್ಥವಾಗಿದೆ. ಇದೇ ರೀತಿ ಕಳೆದ ಐದು ವರ್ಷದಿಂದ ಬರ ಪರಿಸ್ಥಿತಿಯಿಂದ ಬೆಳೆ ಹಾನಿಯಾಗುತ್ತಿದೆ ಎಂದು ಅಳಲು ತೋಡಿಕೊಂಡರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ರಾಮಚಂದ್ರನ್, ಕೃಷಿ ಇಲಾಖೆಯ ಜಂಟಿ ನಿದರ್ೇಶಕ ಜಿಲಾನಿ ಮೊಖಾಶಿ, ತೋಟಗಾರಿಕೆ ಇಲಾಖೆಯ ಉಪನಿದರ್ೇಶಕ ರವೀಂದ್ರ ಹಕಾಟಿ, ಬೈಲಹೊಂಗಲ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಮತ್ತಿತರರು ಉಪಸ್ಥಿತರಿದ್ದರು.