ಮಕ್ಕಳ ರಕ್ಷಣೆಗೆ ಸಂಬಂಧಿಸಿದ ದೂರುಗಳಿಗೆ ಸ್ಪಂದಿಸಲು ಸೂಚನೆ

ವಿಜಯಪುರ:07 ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಸ್ವೀಕರಿಸಲಾಗುವ ದೂರುಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಮಕ್ಕಳ ಸಹಾಯವಾಣಿ ಸಲಹಾ ಸಮೀತಿ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಜಿಲ್ಲಾ ಮಕ್ಕಳ ಸಹಾಯವಾಣಿ 1098ಗೆ ದೂರು ಬಂದ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಮಕ್ಕಳ ರಕ್ಷಣೆ, ಪೋಷನೆ ಹಾಗೂ ಆರೈಕೆಗೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.

ಮಕ್ಕಳ ರಕ್ಷಣೆಗೆ ಸಂಬಂಧಪಟ್ಟಂತೆ ದೂರುಗಳನ್ನು ಗಂಭೀರವಾಗಿ ಪರಿಗಣಿಸಬೇಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಸಂಬಂಧಪಟ್ಟ ಸಂಸ್ಥೆಗಳ ಮೂಲಕ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ತಕ್ಷಣ ಕಾಯರ್ಾಚರಣೆ, ರಕ್ಷಣೆ, ಆರೈಕೆ ಹಾಗೂ ಪುನರ್ವಸತಿಗೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

ಬಾಲ್ಯವಿವಾಹಕ್ಕೆ ಸಂಬಂಧಿಸಿದಂತೆ ತಕ್ಷಣ ಪ್ರಕರಣ ದಾಖಲಿಸಬೇಕು ಬೀದಿ ಮಕ್ಕಳ ಅವಶ್ಯಕತೆಗಳನ್ನು ಪರಿಗಣಿಸಿ ಸೂಕ್ತ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು ದೌರ್ಜಜ್ಯಕ್ಕೆ, ಅನ್ಯಾಯಕ್ಕೆ ,ಮಾನಸಿಕ ತೊಂದರೆಗೆ, ಬಾಲ ಕಾಮರ್ಿಕತೆಗಳಿಗೆ, ಏಡ್ಸ್ಗೆ ಒಳಗಾದ, ವಿಶೇಷ ಅಗತ್ಯತೆಉಳ್ಳ ಹಾಗೂ ಕಾಣೆಯಾದ ಮಕ್ಕಳ ಸಮಸ್ಯಗಳಗೆ ತಕ್ಷಣ ಸ್ಪಂದಿಸುವುದರ ಜೊತೆಗೆ ಆರೋಗ್ಯದ ಸಹಾಯವನ್ನು ದೊರಕಿಸಬೇಕು ಮಕ್ಕಳ ಸಮಸ್ಯಗಳ ಬಗ್ಗೆ ಹಾಗೂ ಮುನ್ನೆಚ್ಚರಿಕೆಗಳ ಬಗ್ಗೆ ಹಾಗೂ ಮಕ್ಕಳ ಹಕ್ಕುಗಳ ಮತ್ತು ಸಹಾಯವಾಣಿ ಬಗ್ಗೆ ಅವಶ್ಯಕ ಅರಿವು ಮೂಡಿಸುವಂತೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದರ್ೆಶಕರಾದ ಅಶೋಕ ಕೆಲವಡಿ ಸ್ವಾಗತಿಸಿದರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದಶರ್ಿಗಳಾದ ಶ್ರೀ ಪ್ರಭಾಕರ ರಾವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಶ್ರೀ ರಾಜಕುಮಾರ ಯರಗಲ್ಲ, ಮಕ್ಕಳ ಸಹಾಯವಾಣಿ 1098 ಜಿಲ್ಲಾ ಸಂಯೋಜನ ಸುನಂದಾ ತೊಳಬಂದಿ, ವಾಸುದೇವ ತೋಳಬಂದಿ ಹಾಗೂ ಇತರರು ಉಪಸ್ಥಿತರಿದ್ದರು.