ಮೊದಲ ಬಾರಿ ಫೈನಲ್ ಪ್ರವೇಶಿಸಿ ಇತಿಹಾಸ ನಿಮರ್ಿಸಿದ ಕ್ರೊವೇಷಿಯಾ
ಮಾಸ್ಕೋ: ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಕ್ರೊವೇಷಿಯಾ ತಂಡ ಫೈನಲ್ಗೆ ಎಂಟ್ರಿ ನೀಡಿದೆ. ಈ ಮೂಲಕ ಇದೇ ಮೊದಲ ಬಾರಿ ಫಿಫಾ ವಿಶ್ವಕಪ್ ಫೈನಲ್ಗೇರಿ ಇತಿಹಾಸ ನಿಮರ್ಿಸಿದೆ.
ರಷ್ಯಾದ ಲುಜ್ನಿಕ್ ಸ್ಟೇಡಿಯಂನಲ್ಲಿ ನಡೆದ ಫಿಫಾ ವಿಶ್ವಕಪ್ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ತಂಡವನ್ನು ಕ್ರೊವೇಷಿಯಾ 2-1 ಗೋಲುಗಳ ಅಂತರದಿಂದ ಸೋಲಿಸಿತು.
ಎರಡೂ ತಂಡಗಳು ಬಲಿಷ್ಠವಾಗಿದ್ದರಿಂದ ಪಂದ್ಯ ತೀವ್ರ ಹಣಾಹಣೆಗೆ ಸಾಕ್ಷಿಯಾಯಿತು. ಪಂದ್ಯದ ಮೊದಲಾರ್ಧದಲ್ಲೇ ಫ್ರೀಕಿಕ್ನಲ್ಲಿ ಕೀರನ್ ಟ್ರಿಪ್ಪಿರ್ ಗೋಲು ಗಳಿಸಿ ಇಂಗ್ಲೆಂಡ್ ತಂಡಕ್ಕೆ ಆರಂಭಿಕ ಮುನ್ನಡೆ ತಂದಿದ್ದರು. ಬಳಿಕ 68ನೇ ನಿಮಿಷದಲ್ಲಿ ಕ್ರೊವೇಷಿಯಾದ ಇವಾನ್ ಪೆರಿಸಿಕ್ ಗೋಲು ಗಳಿಸಿದರು. ಈ ಮೂಲಕ 1-1ರಿಂದ ಉಭಯ ತಂಡಗಳು ಸಮಬಲ ಸಾಧಿಸಿದವು.
ನಿಗದಿತ ಅವಧಿಯಲ್ಲಿ ಎರಡೂ ತಂಡಗಳು 1-1 ಗೋಲು ಗಳಿಸಿದ್ದರಿಂದ ನೀಡಲಾದ ಹೆಚ್ಚುವರಿ ಸಮಯದಲ್ಲಿ 109ನೇ ನಿಮಿಷದಲ್ಲಿ ಕ್ರೊವೇಷಿಯಾದ ಮಾರಿಯೋ ಮ್ಯಾಂಡುಚುಕಿಕ್ ಗೋಲು ಹೊಡೆದು ತಂಡಕ್ಕೆ ಮುನ್ನಡೆ ತಂದಿತ್ತರು.
ಬಳಿಕ ಇಂಗ್ಲೆಂಡ್ ತಂಡ ಗೋಲು ಗಳಿಸುವ ತಂತ್ರಗಳನ್ನು ಕ್ರೊವೇಷಿಯಾ ವಿಫಲಗೊಳಿಸಿತು. ಅಂತಿಮವಾಗಿ 2-1ರಿಂದ ಕ್ರೊವೇಷಿಯಾ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿತು.
ಈಗಾಗಲೇ ಫ್ರಾನ್ಸ್ ತಂಡ ಕೂಡ ಫೈನಲ್ಗೆ ಬಂದಿದೆ.
ಭಾನುವಾರ ನಡೆಯುವ ಫೈನಲ್ನಲ್ಲಿ ಫ್ರಾನ್ಸ್ ಹಾಗೂ ಕ್ರೊವೇಷಿಯಾ ಮುಖಾಮುಖಿಯಾಗಲಿವೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 