ಶೀಘ್ರ ತುಂಗಭದ್ರಾ ನದಿಯಿಂದ ನಗರಕ್ಕೆ ನೀರು: ಜಿಲ್ಲಾಧಿಕಾರಿ
ಹಾವೇರಿ27: ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ನೀರು ಹರಿಬಿಡಲಾಗಿದ್ದು, ಈಗಾಗಲೇ ರಾಣೇಬೆನ್ನೂರ ಗುತ್ತಲ ಭಾಗದ ಸಮೀಪ ನೀರು ಬಂದಿದೆ. ಶೀಘ್ರವೇ ಹಾವೇರಿ ನಗರ ಹಾಗೂ ರಾಣೇಬೆನ್ನೂರ ನಗರಕ್ಕೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಮಾಧ್ಯಮಗೋಷ್ಠಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಮಾಹಿತಿ ನೀಡಿದ ಅವರು, ರಾಣೇಬೆನ್ನೂರ ಹಾಗೂ ಗುತ್ತಲ ಪಂಪ್ಹೌಸ್ನಿಂದ ನೀರು ಪಂಪಿಂಗ್ ಆರಂಭಿಸಲಾಗಿದೆ. ಬುಧವಾರ ಅಥವಾ ಗುರುವಾರ ಹಾವೇರಿ ನಗರಕ್ಕೆ ನೀರು ಹರಿಸಲಾಗುವುದು ಎಂದು ತಿಳಿಸಿದರು.
ಹಾವೇರಿ ನಗರದ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಟಾಸ್ಕಪೋಸರ್್ ಹಾಗೂ ನಗರಸಭೆ ವತಿಯಿಂದ ಕೊರೆಸಲಾದ ಕೊಳವೆಬಾವಿಗಳಿಂದ ಓವರ್ ಟ್ಯಾಂಕ್ಗೆ ಸಂಪರ್ಕ ಕಲ್ಪಿಸುವ ಕುರಿತಂತೆ ಯೋಜನೆಯೊಂದನ್ನು ರೂಪಿಸಲಾಗುವುದು. ನಗರದಲ್ಲಿ 280ಕ್ಕೂ ಹೆಚ್ಚು ಕೊಳವೆಬಾವಿಗಳಿವೆ ಎಂದು ವಿವರಿಸಿದರು.
ಜಿಲ್ಲೆಯ ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಕೆ.ಲೀಲಾವತಿ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಬೇಸಿಗೆ ಸಂದರ್ಭದಲ್ಲಿ 165 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದು ಗುರುತಿಸಲಾಗಿದೆ. ಈ ಪೈಕಿ ಈಗಾಗಲೇ 46 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಗ್ರಾಮಗಳಿಗೆ 86 ಖಾಸಗಿ ಬೋರವೆಲ್ಗಳ ಮೂಲಕ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಈವರೆಗೆ ಟ್ಯಾಂಕರ್ ಮೂಲಕ ಯಾವ ಗ್ರಾಮಗಳಿಗೂ ನೀರು ಪೂರೈಸಿರುವುದಿಲ್ಲ. ಆದರೆ ಬ್ಯಾಡಗಿ ತಾಲೂಕು ಶಿಡೇನೂರ ಗ್ರಾಮಕ್ಕೆ ಖಾಸಗಿ ಕೊಳವೆಬಾವಿಯ ತಾಂತ್ರಿಕ ಸಮಸ್ಯೆಯಿಂದ ತಾತ್ಕಾಲಿಕವಾಗಿ ಒಂದು ವಾರ ಟ್ಯಾಂಕರ್ ಬಳಸಲಾಗಿದೆ. ಈಗ ಟ್ಯಾಂಕರ್ ಸರಬರಾಜು ನಿಲ್ಲಿಸಲಾಗಿದೆ ಎಂದು ವಿವರಿಸಿದರು.
ಎಪ್ರಿಲ್ ಮೇ ಮಾಹೆಯಲ್ಲಿ ಉಳಿದ 125 ಗ್ರಾಮಗಳಲ್ಲೂ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂದು ನಿರೀಕ್ಷಿಸಲಾಗಿದೆ. ಈಗಾಗಲೇ ಜಿಲ್ಲಾ ಪಂಚಾಯತ್ ಗ್ರಾಮೀಣ ಕುಡಿಯುವ ನೀರು ವಿಭಾಗದಿಂದ ಹಾಗೂ ಟಾಸ್ಕಪೋಸರ್್ ವತಿಯಿಂದ ಖಾಸಗಿ ಕೊಳವೆಬಾವಿಗಳನ್ನು ಗುರುತಿಸಲಾಗಿದೆ. ಸಕಾಲಕ್ಕೆ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲಾಗುತ್ತಿದೆ. ಯಾವುದೇ ಅನುದಾನದ ಕೊರತೆ ಇಲ್ಲ ಎಂದು ಅವರು ತಿಳಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 