ಬೆಂಗಳೂರು,ನ.19- ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವುದು, ರೈತರ ಸಂಪೂರ್ಣ ಸಾಲಮನ್ನಾ, ರೈತರ ಬೆಳೆಗಳಿಗೆ ಸೂಕ್ತ ಬೆಲೆ ಘೋಷಣೆ, ಗ್ರಾಮೀಣ ಪ್ರದೇಶಕ್ಕೆ ವಿಶೇಷ ಆಥರ್ಿಕ ಪ್ಯಾಕೇಜ್ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಾಡಿನ ಅನ್ನದಾತರು ಇಂದು ರಾಜಧಾನಿ ಬೆಂಗಳೂರಿಗೆ ಲಗ್ಗೆ ಹಾಕುವ ಮೂಲಕ ದೋಸ್ತಿ ಸಕರ್ಾರಕ್ಕೆ ಬಿಸಿ ಮುಟ್ಟಿಸಿದ್ದಾರೆ.
ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ಬಿಜಾಪುರ, ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ರೈತರು ತಕ್ಷಣವೇ ಸಕರ್ಾರ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.
ರಾಜ್ಯ ರೈತ ಸಂಘಟನೆ, ಕಬ್ಬು ಬೆಳೆಗಾರರ ಸಂಘ, ಹಸಿರುಸೇನೆ ಸೇರಿದಂತೆ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಶಕ್ತಿ ಪ್ರದರ್ಶನ ನಡೆಸಿ ಸಕರ್ಾರಕ್ಕೆ ಬಿಸಿ ಮುಟ್ಟಿಸಿದರು.
ಕಳೆದ ರಾತ್ರಿ ಹಾಗೂ ಬೆಳಗೆಯಿಂದಲೇ ಬೆಂಗಳೂರಿಗೆ ಆಗಮಿಸಿದ ರೈತರು ಮೆಜೆಸ್ಟಿಕ್ ಸಮೀಪವಿರುವ ರೈಲ್ವೆ ನಿಲ್ದಾಣದ ಬಳಿ ಜಮಾವಣೆಗೊಂಡಿದ್ದರು. ಬಳಿಕ ಮೆಜೆಸ್ಟಿಕ್ನಿಂದ ಆನಂದರಾವ್ ವೃತ್ತದ ಫ್ಲೈಓವರ್ ಮೂಲಕ ಕೆ.ಆರ್.ವೃತ್ತದಿಂದ ವಿಧಾನಸೌಧಕಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರಾದರೂ ಪೊಲೀಸರು ಅದನ್ನು ವಿಫಲಗೊಳಿಸಿದರು.
ಮೆಜೆಸ್ಟಿಕ್ನಿಂದ ಮೆರವಣಿಗೆ ಹೊರಟ ರೈತರು ರಾಜ್ಯ ಮತ್ತು ಕೇಂದ್ರ ಸಕರ್ಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು.
ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸದೆ ಅನ್ನದಾತನ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ರಾಜ್ಯ ಮತ್ತು ಕೇಂದ್ರ ಸಕರ್ಾರಗಳ ವಿರುದ್ಧ ರೈತರು ಹಿಡಿಶಾಪ ಹಾಕಿದರು.
ತಕ್ಷಣವೇ ನಮ್ಮೆಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು, ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸದಿದ್ದರೆ ಮುಂಬರುವ ಚುನಾವಣೆಗಳಲ್ಲಿ ಎಲ್ಲ ರಾಜಕೀಯ ಪಕ್ಷಗಳಿಗೂ ತಕ್ಕ ಪಾಠ ಕಲಿಸಲಿದ್ದೇವೆ ಎಂದು ರೈತರು ಎಚ್ಚರಿಸಿದರು.
ಸಿಎಂ ವಿರುದ್ದ ಕೆಂಡ ಕಾರಿದ ರೈತರು:
ಇನ್ನು ನಿನ್ನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರತಿಭಟನಾನಿರತ ಮಹಿಳೆಯ ವಿರುದ್ಧ ಆಡಿದ ಮಾತಿಗೆ ರೈತ ಮುಖಂಡರು ಕಿಡಿಕಾರಿದರು. ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವ ಕುಮಾರಸ್ವಾಮಿ ಅವರು ಮಹಿಳೆ ಬಗ್ಗೆ ಇಷ್ಟು ತುಚ್ಛವಾಗಿ ಮಾತನಾಡುವ ಅಗತ್ಯವಿರಲಿಲ್ಲ. ರೈತರು ಯಾವುದೇ ಪಕ್ಷಕ್ಕೂ ಸೇರಿರುವುದಿಲ್ಲ. ಜೆಡಿಎಸ್ಗೆ ಮತ ಹಾಕಿಲ್ಲ ಎಂಬ ಕಾರಣಕ್ಕಾಗಿ ಈ ರೀತಿ ಮಾತನಾಡಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಮೊದಲು ಕುಮಾರಸ್ವಾಮಿ ಈ ಬಗ್ಗೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ನಾಳೆ ನಡೆಯಲಿರುವ ಕಬ್ಬು ಬೆಳೆಗಾರರ ಸಭೆಗೆ ನಾವ್ಯಾರು ಭಾಗವಹಿಸುವುದಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ಮಹಿಳೆಯರ ಬಗ್ಗೆ ಈ ರೀತಿ ಮಾತನಾಡುವ ಮೂಲಕ ತಮ್ಮ ಕೀಳು ಅಭಿರುಚಿಯನ್ನು ಹೊರ ಹಾಕಿದ್ದಾರೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು