ಗದಗ 27: ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಅರ್ಹ ಮತದಾರರು ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವುದರ ಮೂಲಕ ಚುನಾವಣಾ ಹಬ್ಬವನ್ನು ಆಚರಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ಸದಸ್ಯ ಕಾರ್ಯದಶರ್ಿ ಟಿ.ದಿನೇಶ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾ ಸ್ವೀಪ್ ಸಮಿತಿಯಿಂದ ಜರುಗಿದ ಹಿರಿಯ ನಾಗರಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾರತ ಚುನಾವಣಾ ಆಯೋಗದ ನಿದರ್ೇಶನದಂತೆ 18 ವರ್ಷ ಮೇಲ್ಪಟ್ಟ ಎಲ್ಲ ಅರ್ಹ ಮತದಾರರು ಮತವನ್ನು ಚಲಾಯಿಸಬೇಕು. ಇಂದಿನ ದಿನಮಾನಗಳಲ್ಲಿ ಮತಗಟ್ಟೆಗೆ ಹೋಗಿ ಮತದಾನ ಮಾಡುವರರ ಸಂಖ್ಯೆ ವಿರಳವಾಗುತ್ತಿದ್ದು ಅದರಲ್ಲೂ ನಗರ ಪ್ರದೇಶಗಳಲ್ಲಿ ಮತದಾನ ಮಾಡುವವರ ಸಂಖ್ಯೆ ತೀರ ಕಡಿಮೆಯಾಗಿದೆ. ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ಮತಗಟ್ಟೆಗೆ ತೆರಳಿ ಮತದಾನ ಮಾಡಲು ಅನುಕೂಲವಾಗುವಂತೆ ಮತಗಟ್ಟೆಗಳಲ್ಲಿ ಚುನಾವಣಾ ಆಯೋಗವು ವೀಲ್ ಚೇರಿನ ವ್ಯವಸ್ಥೆ ಹಾಗೂ ಅಂಧ ಮತದಾರರಿಗೆ ಮ್ಯಾಗ್ನಿಫಿಯರ್ ಗ್ಲಾಸಿನ ವ್ಯವಸ್ಥೆ ಮಾಡಿದ್ದು ಇದರ ಸಂಪೂರ್ಣ ಪ್ರಯೋಜನೆ ಪಡೆದು ವಿಕಲಚೇತನರು, ಹಿರಿಯ ನಾಗರಿಕರು ತಮ್ಮ ಹಕ್ಕನ್ನು ಚಲಾಯಿಸಲು ಮನವಿ ಮಾಡಿದರು. ಜಿಲ್ಲೆಯಲ್ಲಿ 10 ಸಾವಿರ ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ನೊಂದಣಿ ಮಾಡಲಾಗಿದ್ದು ಅರ್ಹ ಮತದಾರರು ತಮ್ಮ ಹಾಗೂ ತಮ್ಮ ಕುಟುಂಬದವರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ ಎಂಬುದನ್ನು ಖಚಿತಪಡಿಸಿಕೊಂಡು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸೂಚಿಸಿದ ಅವರು ಹಿರಿಯ ನಾಗರಿಕರು ಹಾಗೂ ತಮ್ಮ ಕುಟುಂಬದ ಅರ್ಹ ಮತದಾರರಿಗೆ ಮತದಾನದ ಜಾಗೃತಿ ಮೂಡಿಸಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಸಶಕ್ತ ಪ್ರಜಾಪ್ರಭುತ್ವ ನಿಮರ್ಾಣ ಮಾಡಲು ಟಿ.ದಿನೇಶ ಕರೇ ನೀಡಿದರು.
ವಿಕಲಚೇತನರ ಕಲ್ಯಾಣಾಧಿಕಾರಿ ಆಶು ನದಾಫ್, ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಬಿ.ಹೂಗಾರ, ಹಿರಿಯ ನೌಕರರ ಸಂಘದ ಅಧ್ಯಕ್ಷ ಕೆ.ಎಚ್. ಬೇಲೂರು, ಸದಸ್ಯ ಸುರೇಶ.ವಿ.ಕುಲಕಣರ್ಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.