ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ

bsy

ಬೆಂಗಳೂರು,ಮಾ 28: ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದಾಗಿ ಘೋಷಿಸಲಾಗಿರುವ 21 ದಿನಗಳ ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸರ್ಕಾರ ಅಗತ್ಯ ವ್ಯವಸ್ಥೆ ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತು ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, ಜನ ಸಾಮಾನ್ಯರಿಗೆ ಅಗತ್ಯವಾಗಿರುವ ಹಣ್ಣು ತರಕಾರಿ, ದಿನಸಿ ಪದಾರ್ಥಗಳು, ರೈತರಿಗೆ ಗೊಬ್ಬರ, ಬಿತ್ತನೆ ಬೀಜ, ಕೀಟ ನಾಶಕಗಳನ್ನು ಮನೆಯ ಆಸುಪಾಸಿನಲ್ಲೇ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.ಕೊರೋನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ೭೪ಕ್ಕೆ ಏರಿಕೆಯಾಗಿದ್ದು, ಲಾಕ್‌ಡೌನ್ ಆದೇಶವನ್ನು ಜನತೆ ಕಟ್ಟುನಿಟ್ಟಾಗಿ ಪಾಲಿಸಬೇಕಾದ್ದು ಅವಶ್ಯವಾಗಿದೆ ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.