ಅಯ್ಯಪ್ಪ ದರ್ಶನಕ್ಕೆ ಗೆರಿಲ್ಲಾ ತಂತ್ರ ಉಪಯೋಗಿಸುತ್ತೇವೆ: ತೃಪ್ತಿ

ಪುಣೆ, ನ.17- ಮುಂದಿನ ಬಾರಿ ಯಾವುದೇ ರೀತಿಯ ಮುನ್ಸೂಚನೆ ನೀಡದೆ ಗೆರಿಲ್ಲಾ ತಂತ್ರ ಅನುಸರಿಸಿ ಶಬರಿಮಲೆಗೆ ಹೋಗಿ ಅಯ್ಯಪ್ಪನ ದರ್ಶನ ಪಡೆಯುತ್ತೇವೆ ಎಂದು ಮಹಿಳಾ ಕಾರ್ಯಕತರ್ೆ ತೃಪ್ತಿ ದೇಸಾಯಿ ಹೇಳಿದ್ದಾರೆ.

ಅಯ್ಯಪ್ಪ ದರ್ಶನಕ್ಕಾಗಿ ಕೇರಳಕ್ಕೆ ತೆರಳಿದ್ದ ತೃಪ್ತಿ ದೇಸಾಯಿ, ಅಯ್ಯಪ್ಪ ಭಕ್ತರ ಪ್ರತಿಭಟನೆಯಿಂದಾಗಿ ದರ್ಶನ ಮಾಡದೆ ಕೊಚ್ಚಿ ವಿಮಾನ ನಿಲ್ದಾಣದಿಂದ ಪುಣೆಗೆ ವಾಪಸ್ ಆಗಿದ್ದಾರೆ. ಈ ವೇಳೆ ಮಾತನಾಡಿದ ಅವರು, ಈ ಬಾರಿ ನಾವು ಶಬರಿಮಲೆಗೆ ಹೋಗುವುದಕ್ಕೂ ಮೊದಲು ಘೋಷಣೆ ಮಾಡಿಕೊಂಡಿದ್ದೆವು. ಆದರೆ, ಮುಂದಿನ ಬಾರಿ ಹೋಗುವಾಗ ಸದ್ದಿಲ್ಲದೆ ಹೋಗುತ್ತೇವೆ. ಗೆರಿಲ್ಲಾ ತಂತ್ರ ಅನುಸರಿಸುತ್ತೇವೆ. ಪೊಲೀಸರೂ ನಮಗೆ ಬೆಂಬಲ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಕೇರಳ ಪೊಲೀಸರು ಸಂಪೂರ್ಣ ರಕ್ಷಣೆ ನೀಡುವ ಭರವಸೆ ನೀಡಿದ್ದಾರೆ. ಮುಂದಿನ ಬಾರಿ ಬಂದಾಗ ಭದ್ರತೆ ಒದಗಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ನಮ್ಮಿಂದ ಅಲ್ಲಿ ಅಶಾಂತಿ ಉಂಟಾಗದಿರಲೆಂದು ನಾವು ಹಿಂದಿರುಗಿದ್ದೇವೆ. ನಾವು ದೇವರ ದರ್ಶನಕ್ಕೆ ಆಗಮಿಸುತ್ತಿರುವುದಾಗಿ ಘೋಷಣೆ ಮಾಡಿ ಕೇರಳಕ್ಕೆ ಹೊರಟಿದ್ದರಿಂದಲೇ ನಮ್ಮ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಮುಂದಿನ ಬಾರಿ ನಾವು ಘೋಷಣೆಯನ್ನೇ ಮಾಡುವುದಿಲ್ಲ. ಗೆರಿಲ್ಲಾ ತಂತ್ರ ಬಳಸಿಕೊಂಡು ದರ್ಶನಕ್ಕೆ ಹೋಗುತ್ತೇವೆ.

ಅಲ್ಲಿನ ಪ್ರತಿಭಟನಾಕಾರರು ಸಂಘರ್ಷಕ್ಕಿಳಿದಿದ್ದರು. ಗೂಂಡಾಗಳಂತೆ ವತರ್ಿಸುತ್ತಿದ್ದರು. ಅವರು ತಮ್ಮನ್ನು ಅಯ್ಯಪ್ಪನ ಭಕ್ತರು ಎಂದು ಹೇಳಿಕೊಳ್ಳುತ್ತಾರೆ. ಆದರೆ, ಅಸಹ್ಯ ನಿಂದನೆ, ಬೆದರಿಕೆ ಹಾಕುವ ಅವರು ಅಯ್ಯಪ್ಪನ ಭಕ್ತರು ಎನಿಸಲಿಲ್ಲ. ಒಂದು ವೇಳೆ ನಾವು, ಶಬರಿಮಲೆಯ ತಪ್ಪಲಿನ ನಿಳಕ್ಕಲ್ಗೆ ತಲುಪಿದ್ದೇ ಆದರೆ, ನಾವು ದರ್ಶನ ಪಡೆದೇ ಬರುತ್ತೇವೆ ಎಂಬ ಭಯದಿಂದ ಪ್ರತಿಭಟನಾಕಾರರು ನಮ್ಮನ್ನು ವಿಮಾನ ನಿಲ್ದಾಣದಲ್ಲೇ ತಡೆದರು.

ಸುಪ್ರೀಂ ಕೋಟರ್್ ಆದೇಶ ಪಾಲನೆಗೆ ಸಮಯಬೇಕು:  ಅಯ್ಯಪ್ಪ ದೇಗುಲದ ದೇವಸ್ವಂ ಮಂಡಳಿ ಹೇಳಿಕೆ

ಕೊಚ್ಚಿ, ನ.17- ವಿಶ್ವವಿಖ್ಯಾತ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿರುವಂತೆಯೇ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲದ ದೇವಸ್ವಂ ಮಂಡಳಿ ಸುಪ್ರೀಂ ಕೋಟರ್್ ಆದೇಶ ಪಾಲನೆಗೆ ಸಮಯಬೇಕಿದೆ ಎಂದು ಹೇಳಿದೆ.

ಪ್ರಸ್ತುತ ಪರಿಸ್ಥಿತಿಯಲ್ಲಿ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸುವುದು ಅಸಾಧ್ಯ ಎಂದು ಪರೋಕ್ಷವಾಗಿ ಹೇಳಿದೆ. 

ಮಹಿಳಾ ಪ್ರವೇಶದ ವಿರುದ್ಧ ಹೆಚ್ಚುತ್ತಿರುವ ಜನಾಕ್ರೋಶದ ಹಿನ್ನೆಲೆಯಲ್ಲಿ ದೇವಸ್ವಂ ಮಂಡಳಿ ಈ ನಿಧರ್ಾರಕ್ಕೆ ಬಂದಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆ ಕೂಡ ಒಮ್ಮತದ ತೀಮರ್ಾನಕ್ಕೆ ಬರದೆ ವಿಫಲವಾಗಿತ್ತು. ಇದೇ ಕಾರಣಕ್ಕೆ ಕೇರಳ ಸಕರ್ಾರ ಸುಪ್ರೀಂ ಕೋಟರ್್ ಆದೇಶ ಪಾಲನೆಗಾಗಿ ಸಮಯಾವಕಾಶ ಕೇಳುವ ಸಾಧ್ಯತೆಯೂ ಇದೆ.

ಅಲ್ಲದೆ, ಇದೇ ಗುರುವಾರದಿಂದ ಶಬರಿಮಲೆ ಯಾತ್ರೆ ಆರಂಭವಾಗಲಿದ್ದು, ಎರಡು ತಿಂಗಳ ಯಾತ್ರಾವಧಿಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವುದು ಕೇರಳ ಸಕರ್ಾರದ ಮುಂದಿರುವ ದೊಡ್ಡ ಸವಾಲಾಗಿದೆ. ಅದರ ನಡುವೆ ಮಹಿಳೆಯರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸುವುದರಿಂದ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ ಎಂಬ ಕಾರಣಕ್ಕೆ ಕೇರಳ ಸಕರ್ಾರ ಈ ವಿಚಾರದಲ್ಲಿ ಹಿಂದೇಟು ಹಾಕಿದೆ.

ಇಂದು ಕೇರಳ ಬಂದ್: ಏತನ್ಮಧ್ಯೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಹಿಂದೂ ಐಕ್ಯವೇದಿಕೆಯ ರಾಜ್ಯಾಧ್ಯಕ್ಷರಾದ ಕೆ.ಪಿ.ಶಶಿಕಲಾ ಅವರನ್ನು ಬಂಧಿಸಿರುವ ಕೇರಳ ಪೊಲೀಸರ ನಡೆಯನ್ನು ಖಂಡಿಸಿ ಶಬರಿಮಲೆ ಕ್ರಿಯಾ ಸಮಿತಿ ಇಂದು ಕೇರಳದಾದ್ಯಂತ ಬಂದ್ಗೆ ಕರೆ ನೀಡಿದೆ.

ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ತಮ್ಮ ಪ್ರತಿಭಟನೆಗೆ ಬೆಂಬಲ ನೀಡುವಂತೆ ಮನವಿ ಮಾಡಿದೆ. ಕಳೆದ ರಾತ್ರಿ ಸನ್ನಿಧಾನಂ ಬಳಿ ಪ್ರತಿಭಟನೆ ನಡೆಸಲು ತೆರಳುತ್ತಿದ್ದ ಕೆ.ಪಿ.ಶಶಿಕಲಾ ಅವರನ್ನು ಪೊಲೀಸರು ಮರಕ್ಕೊಟ್ಟಂ ಬಳಿ ಬಂಧಿಸಿದ್ದರು.

ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಕ ಭದ್ರತೆ ಒದಗಿಸಲಾಗಿದೆ.