ಹೊಸರಿತ್ತಿ: ವಿವಿಧ ಅಂಗಡಿಗಳ ಮೇಲೆ ದಾಳಿ ದಂಡ ವಸೂಲಿ

ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಸೋಮವಾರ  ಹಾವೇರಿ ತಾಲೂಕು ಹೊಸರಿತ್ತಿಯ ಆಯ್ದ 10  ಅಂಗಡಿಗಳ ಮೇಲೆ ದಾಳಿ ನಡೆಸಿ ರೂ.500 ದಂಡ ವಸೂಲಿ ಮಾಡಿದೆ.

ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟಮಾಡುತ್ತಿರುವ ಅಂಗಡಿ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿ ಕಲಂ-4ರಡಿಯಲ್ಲಿ ಎಂಟು ಹಾಗೂ ಕಲಂ 6ಬಿ  ಅಡಿಯಲ್ಲಿ ಎರಡು ಅಂಗಡಿ ಸೇರಿ 10 ಅಂಗಡಿಗಳ ಮಾಲೀಕರಿಂದ 500 ರೂ. ದಂಡ ವಸೂಲಿ ಮಾಡಲಾಗಿದೆ.

ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ.ಸಂತೋಷ ವಿ.ದಡ್ಡಿ ಹಾಗೂ ದಾದಾಪೀರ ಹುಲಿಕಟ್ಟಿ,  ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ಹಿರಿಯ ಆರೋಗ್ಯ ಸಹಾಯಕ ಪಿ.ಎನ್. ಪಾಟೀಲ, ಪೊಲೀಸ್ ಠಾಣೆಯ  ವಿ.ಡಿ.ದೊಡ್ಡಮನಿ ಇತರರು  ಉಪಸ್ಥಿತರಿದ್ದರು.