ಅಮೇರಿಕೆಯಿಂದ 14000 ಕೋ ರೂ ರಕ್ಷಣಾ / ಹೆಲಿಕಾಪ್ಟರ್ ಖರೀದಿ
ನವದೆಹಲಿ 16, ಭಾರತೀಯ ಸೇನಾ ಬಲವರ್ಧನೆ ಮತ್ತು ಸೇನೆ ಆಧುನೀಕರಣಕ್ಕೆ ಮುಂದಾಗಿರುವ ಕೇಂದ್ರ ಸಕರ್ಾರ ಇದೀಗ ಅಮೆರಿಕದಿಂದ ಸುಮಾರು 14,000 ಕೋಟಿ ರೂ. ರಕ್ಷಣಾ ಮತ್ತು ಶಸ್ತ್ರಸಜ್ಜಿತ ಹೆಲಿಕಾಪ್ಟರ್ ಖರೀದಿಗೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ರಷ್ಯಾ ಜತೆ ಎಸ್-400 ಟ್ರಯಂಫ್ ಕ್ಷಿಪಣಿ ಖರೀದಿಯ ಬೆನ್ನಲ್ಲೇ ಭಾರತದ ವಿರುದ್ಧ ಅಮೆರಿಕ ಮುನಿಸಿಕೊಂಡು ನಿರ್ಬಂಧ ಹೇರುವ ಮಾತನಾಡಿತ್ತು. ಇದರ ಬೆನ್ನಲ್ಲೇ ಇದೀಗ ಭಾರತ ಸಕರ್ಾರ ಅಮೆರಿಕವನ್ನು ಸಂತೈಸುವ ಪ್ರಯತ್ನ ಮಾಡಿದೆ.
ಅಮೆರಿಕದಿಂದ ಸುಮಾರು 14,000 ಕೋಟಿ ರೂ. ರಕ್ಷಣಾ ಮತ್ತು ಶಸ್ತ್ರಸಜ್ಜಿತ ಹೆಲಿಕಾಪ್ಟರ್ ಖರೀದಿಗೆ ಮುಂದಾಗಿದೆ ಎನ್ನಲಾಗಿದೆ.
ಅಮೆರಿಕದ ಸಿಕೋಸ್ಕಿ ಲಾಕ್ ಹೀಡ್ ಮಾಟರ್ಿನ್ ನಿಮರ್ಾಣದ ಬಹುಪಯೋಗಿ ಎಂಎಚ್-60 ರೋಮಿಯೋ ಹೆಲಿಕಾಪ್ಟರ್ಗಳನ್ನು ಭಾರತ ಖರೀದಿಸಲು ಮುಂದಾಗಿದ್ದು, ಈ ಚಾರ್ಪ ಗಳು ಟಾಪರ್ೆಡೋ ಮತ್ತು ಕ್ಷಿಪಣಿ ವ್ಯವಸ್ಥೆಯನ್ನು ಹೊಂದಿವೆ. ಅಂತೆಯೇ ಆಗಸದಿಂದಲೇ ಶತೃಪಾಳಯದ ಜಲಾಂತಗರ್ಾಮಿ ನೌಕೆಗಳನ್ನು ಕಂಡು ಹಿಡಿದು ದಾಳಿ ನಡೆಸುವ ಸಾಮಥ್ರ್ಯ ಹೊಂದಿವೆ. ಈ ಹೆಲಿಕಾಪ್ಟರ್ಗಳ ಖರೀದಿಗೆ ಮುಂದಾಗಿರುವ ಭಾರತ, ಅವುಗಳನ್ನು 2020-24ರೊಳಗೆ ಒದಗಿಸಿಕೊಡುವಂತೆ ಬೇಡಿಕೆ ಸಲ್ಲಿಸಲಿದೆ ಎನ್ನಲಾಗಿದೆ. ಈಗಾಗಲೇ ಸಾಗರದಲ್ಲಿ ಚೀನಾದ ಜಲಾಂತಗರ್ಾಮಿ ನೌಕೆಗಳು ನಿರಂತರ ಕಣ್ಗಾವಲು ಇರಿಸಿದ್ದು, ದೇಶದ ಜಲಪರಿಧಿಯನ್ನೂ ಪ್ರವೇಶಿಸಲು ಯತ್ನಿಸುತ್ತವೆ. ಹೀಗಾಗಿ ಚೀನಾದ ಹಾರಾಟಕ್ಕೆ ಮಿತಿ ಹಾಕಲು ಮತ್ತು ದೇಶದ ಸಾಗರ ರಕ್ಷಣೆ, ನೌಕಾಪಡೆಯ ಬಲವರ್ಧನೆಗೆ ಎಂಎಚ್-60 ಬಹುಪಯೋಗಿ ಹೆಲಿಕಾಪ್ಟರ್ನ ಅವಶ್ಯಕತೆಯಿದ್ದು, ಅಮೆರಿಕದೊಂದಿಗೆ ಸಕರ್ಾರ ಶೀಘ್ರ ಒಪ್ಪಂದ ಅಂತಿಮಗೊಳಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 