ಅಗಸ್ಟಾ ವೆಸ್ಟ್ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣ: ಮಧ್ಯವತರ್ಿ ಜೇಮ್ಸ್ ಮೈಕಲ್ರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ದುಬೈ ಹೈಕೋಟರ್್ ಆದೇಶ

ದುಬೈ: ಅಗಸ್ಟಾ ವೆಸ್ಟ್ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣದ ಮಧ್ಯವತರ್ಿ ಹಾಗೂ ಬ್ರಿಟಿಷ್ ಉದ್ಯಮಿ ಕ್ರಿಶ್ಚಿಯನ್ ಜೇಮ್ಸ್ ಮೈಕಲ್ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ದುಬೈ ಹೈಕೋಟರ್್ ಆದೇಶ ನೀಡಿದೆ. 

ಅಗಸ್ಟಾ ವೆಸ್ಟ್ಲ್ಯಾಂಡ್ ಹೆಲಿಕಾಪ್ಟರ್ ಪ್ರಕರಣದ ತನಿಖೆ ಸಂಬಂಧ ಮೈಕಲ್ ಅವರನ್ನು ಭಾರತಕ್ಕೆ ಹಸ್ತಾಂತರಿಸಬೇಕೆಂದು ಭಾರತ ಸಕರ್ಾರ ಮನವಿ ಮಾಡಿತ್ತು. ಈ ಹಿನ್ನಲೆಯಲ್ಲಿ ಕೆಳಹಂತದ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ, ಮೈಕಲ್ ಪರ ವಕೀಲರು ಸಲ್ಲಿಸಿರುವ ಅಜರ್ಿಯನ್ನು ರದ್ದುಪಡಿಸಿ ಅವರನ್ನು ಭಾರತಕ್ಕೆ ಹಸ್ತಾಂತರ ಮಾಡಬಹುದು ಎಂದು ತಿಳಿಸಿದೆ. 

ಇಟಲಿ ಮೂಲದ ಫಿನ್ಮೆಕನಿಕಾದ ಬ್ರಿಟನ್ನ ಅಂಗಸಂಸ್ಥೆ ಅಗಸ್ಟಾ ವೆಸ್ಟ್ಲ್ಯಾಂಡ್ನಿಂದ ಗಣ್ಯರ ಸಂಚಾರಕ್ಕೆಂದು 12 'ಎಡಬ್ಲ್ಯೂ-101' ಕಾಪ್ಟರ್ಗಳನ್ನು ಖರೀದಿಸುವ ಒಪ್ಪಂದಕ್ಕೆ 2007ರಲ್ಲಿ  ಭಾರತ ಸಹಿ ಹಾಕಿತ್ತು. ನಂತರ ಈ ಒಪ್ಪಂದದಲ್ಲಿ 3,227 ಕೋಟಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಒಪ್ಪಂದ ಕುದುರಿಸುವ ಸಲುವಾಗಿ ಅಧಿಕಾರಿಗಳಿಗೆ ಕೋಟ್ಯಂತರ ರೂಪಾಯಿ ಲಂಚ ಪಾವತಿಸಲಾಗಿದೆ ಎಂಬ ಆರೋಪವಿತ್ತು. ಬಳಿಕ 2014ರ ಜನವರಿಯಲ್ಲಿ ಕೇಂದ್ರ ಸಕರ್ಾರ ಒಪ್ಪಂದವನ್ನು ರದ್ದುಗೊಳಿಸಿತ್ತು.ಈ ಹಗರಣಕ್ಕೆ ಸಂಬಂಧಿಸಿ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್.ಪಿ. ತ್ಯಾಗಿ ಸೇರಿದಂತೆ 72 ಜನರನ್ನು ಬಂಧಿಸಲಾಗಿತ್ತು.