ಲೋಕದರ್ಶನ ವರದಿ
ಹೊಸಪೇಟೆ 18: ಬಿಜೆಪಿ ಅಭ್ಯಥರ್ಿಗೆ ಭಯಭೀತರಾದ ಕಾಂಗ್ರೆಸ್ ಈತನಕ ವಿಜಯನಗರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯಥರ್ಿಯನ್ನು ಅಂತಿಮಗೊಳಿಸಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಲೇವಡಿ ಮಾಡಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಈಗಾಗಲೇ ಮಾಜಿ ಸಚಿವ ಆನಂದ್ ಸಿಂಗ್ ಅವ ರನ್ನು ವಿಜ ಯನಗರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಿದೆ ಎಂದರು.
17 ಮಂದಿ ಶಾಸಕರು ಸಮಿಶ್ರ ಸರಕಾರದ ಆಡಳಿತಕ್ಕೆ ಬೇಸತ್ತು ಬಿಜೆಪಿಗೆ ಬಂದಿದ್ದು,17ರಲ್ಲಿ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯಥರ್ಿಗಳನ್ನು ಗೆಲ್ಲಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ. ಅಷ್ಟೂ ಸ್ಥಾನಗಳಲ್ಲಿ ಬಿಜೆಪಿ ಅಭ್ಯ ಥರ್ಿ ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.