ಹೂವಿನಹಡಗಲಿ: ಬಿಜೆಪಿ ಗೆಲುವು ಸಂಭ್ರಮಾಚರಣೆ

ಲೋಕದರ್ಶನ ವರದಿ

ಹೂವಿನಹಡಗಲಿ 09: ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೆ ದೊಡ್ಡ ಗೆಲುವು ಸಿಕ್ಕಿದೆ. 12ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರಿಂದ ಪಟ್ಟಣದ ಶಾಸ್ತ್ರಿ ವೃತ್ತದಲ್ಲಿ ಇಲ್ಲಿನ ಬಿಜೆಪಿ ಪಕ್ಷದ ಮುಖಂಡರು,ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸುವ ಮೂಲಕ ಸೋಮವಾರ ವಿಜಯೋತ್ಸವ ಆಚರಿಸಿದರು. 

ಈ ಸಂದರ್ಭದಲ್ಲಿ  ಜಿಲ್ಲಾ ಪ್ರಧಾನ ಕಾರ್ಯದಶರ್ಿ ಹೆಚ್.ಪೂಜಪ್ಪ ಮಾತನಾಡಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಮುಖಭಂಗವಾಗಿದ್ದು, 12ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವುನಿಂದ ಯಡಿಯೂರಪ್ಪ ಸರ್ಕಾರ ಸ್ಪಷ್ಟ ಬಹುಮತವನ್ನು ಪಡೆದಿದೆ ಎಂದರು.ಈ ಸಂದರ್ಭದಲ್ಲಿ ತಾ.ಪಂ.ಸದಸ್ಯ ಈಟಿ.ಲಿಂಗರಾಜ, ಮುಖಂಡರಾದ ಜಯಣ್ಣ, ಕಣದಾಳ ಶಂಕ್ರಪ್ಪ, ಲೋಕೇಶಮ ಮಹೇಂದ್ರ ಸೇರಿದಂತೆ ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.