ಲೋಕದರ್ಶನ ವರದಿ
ಹೂವಿನಹಡಗಲಿ 10: ಪಟ್ಟಣದ ಆಂಜನೇಯ ದೇವಸ್ಥಾನದ ಬಳಿ ಭಾನುವಾರ ಬೆಳಿಗ್ಗೆ 9ಗಂಟೆಗೆ ಆರೋಗ್ಯ ಇಲಾಖೆಯಿಂದ ಮೊದಲ ಹಂತದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.
0-5ವರ್ಷದೊಳಗಿನ ಮಕ್ಕಳಿಗೆ ಪೋಷಕರು ತಪ್ಪದೇ ಲಸಿಕೆ ಹಾಕಿಸುವಂತೆ ಮನವಿ ಮಾಡಲಾಯಿತು. ಕಾರ್ಯಕ್ರಮದ ಯಶಸ್ವಿಗೆ ಆರೋಗ್ಯ ಇಲಾಖೆ ಸೇರಿದಂತೆ ಹಲವು ಕಡೆ ಲಸಿಕೆ ಕೇಂದ್ರಗಳನ್ನು ತೆರೆಯಲಾಗಿದೆ. ಬಸ್ ನಿಲ್ದಾಣ, ಸಂತೆ ಮೊದಲಾದ ಜನಬಿಡಿ ಸ್ಥಳಗಳಲ್ಲಿ ಲಸಿಕೆ ಕೇಂದ್ರ ತೆರೆಯಲಾಗಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಯೊಂದಿಗೆ ಅಂಗನವಾಡಿ, ಆಶಾ ಕಾರ್ಯಕರ್ತರು ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ತಾ.ಪಂ.ಇಒ ಯು.ಎಚ್.ಸೋಮಶೇಖರ, ಪುರಸಭೆ ಅಧ್ಯಕ್ಷೆ ಮಧಾನ ಬೀ, ಮುಖಂಡ ವಾರದಗೌಸಮೊಹಿದ್ದೀನ್, ಜ್ಯೋತಿ ಮಲ್ಲಣ್ಣ, ಸೋಗಿ ಹಾಲೇಶ, ಸೊಪ್ಪಿನ ಮಂಜುನಾಥ, ಅಂಗನವಾಡಿ ಮೇಲ್ವಿಚಾರಕಿ ಹನುಮಕ್ಕ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.