ಧಾರವಾಡ 16: ಪೌರಾಡಳಿತ ಸಚಿವರಾಗಿದ್ದ ಸಿ.ಎಸ್. ಶಿವಳ್ಳಿ ಅವರು ಅಕಾಲಿಕವಾಗಿ ಕಳೆದ ಮಾ. 22 ರಂದು ನಿಧನ ಹೊಂದಿದ ಕಾರಣ, ಅವರು ಪ್ರತನಿಧಿಸುತ್ತಿದ್ದ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಏ. 22 ರಂದು ಅಧಿಸೂಚನೆ ಪ್ರಕಟವಾಗಲಿದೆ. ಕ್ಷೇತ್ರದಲ್ಲಿ 97457 ಪುರುಷರು, 91820 ಮಹಿಳೆಯರು ಹಾಗೂ 4 ಜನ ತೃತೀಯ ಲಿಂಗಿಗಳು ಸೇರಿ ಒಟ್ಟು 189281 ಮತದಾರರಿದ್ದಾರೆ. ಏ. 19 ರ ವರೆಗೂ ಮತದಾರರ ಪಟ್ಟಿಗೆ ಹೆಸರು ಸೇರಿಸಿಕೊಳ್ಳಲು ಅವಕಾಶವಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಬೆಳಿಗ್ಗೆ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಏ. 22 ರಿಂದ 29 ರ ವರೆಗೆ ನಾಮಪತ್ರ ಸಲ್ಲಿಕೆಗ ಅವಕಾಶವಿದೆ. ಏ.30 ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಮೇ 2 ರವರೆಗೆ ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಅವಕಾಶವಿದೆ. ಮೇ. 19 ರವಿವಾರದಂದು ಮತದಾನ ನಡೆಯಲಿದೆ. ಮೇ.23 ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಮೇ.27 ರೊಳಗಾಗಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ 214 ಮತಗಟ್ಟೆಗಳಿರುತ್ತವೆ. ಮಾದರಿ ನೀತಿ ಸಂಹಿತೆಯು ಈಗಾಗಲೇ ಜಾರಿಯಲ್ಲಿದೆ. ಈಗಾಗಲೇ ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆ ಜಾರಿಯಲ್ಲಿರುವುದರಿಂದ 70-ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಎಂಸಿಸಿ ಹಾಗೂ ಚುನಾವಣಾ ವೆಚ್ಚ ಸಂಬಂಧಿಸಿದ ತಂಡಗಳು ಮುಂದುವರೆಯಲಿವೆ. 18 ಸೆಕ್ಟರ್ ಅಧಿಕಾರಿಗಳು, 6 ಸ್ಟ್ಯಾಟಿಕ್ ಸವರ್ೆಲೆನ್ಸ್ ತಂಡಗಳು, 1 ವಿಡಿಯೋ ವೀಕ್ಷಣಾ ತಂಡ, 3 ವಿಡಿಯೋ ಸವರ್ೆಲೆನ್ಸ್ ತಂಡ, 6 ಫೈಯಿಂಗ್ ಸ್ಕ್ವಾಡ್ ತಂಡಗಳು ಹಾಗೂ ಚುನಾವಣಾ ವೆಚ್ಚ ನಿರ್ವಹಣೆಗಾಗಿ 4 ತಂಡಗಳನ್ನು ರಚಿಸಲಾಗಿದೆ. ವಿವಿಧ ಸಮಿತಿಗಳ ಎಲ್ಲ ನೋಡಲ್ ಅಧಿಕಾರಿಗಳು ಉಪಚುನಾವಣೆಯ ಕರ್ತವ್ಯವನ್ನು ನಿರ್ವಹಿಸಲು ನಿದರ್ೆಶನ ನೀಡಲಾಗಿದೆ.
ಮತದಾರರ ಪಟ್ಟಿಗೆ ಹೆಸರು ಸೇರಿಸಿಕೊಳ್ಳಲು ಏಪ್ರಿಲ್ 19 ರ ವರೆಗೆ ಅವಕಾಶ: ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದ ಮತದಾರರ ಯಾದಿಯಲ್ಲಿ ಹೆಸರು ಸೇರ್ಪಡೆ ಮಾಡಲು ಏ.19 ರ ವರೆಗೆ ಅವಕಾಶವಿದೆ. ಕ್ಷೇತ್ರದ ವ್ಯಾಪ್ತಿಯ ಮತದಾರರು ಈ ಅವಕಾಶ ಬಳಸಿಕೊಳ್ಳಬೇಕು. ಮತದಾನಕ್ಕೆ ಚುನಾವಣಾ ಆಯೋಗ ನೀಡಿರುವ ಗುರುತಿನ ಚೀಟಿ ಅಥವಾ ಇತರ 11 ಪಯರ್ಾಯ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ತೋರಿಸಿ ಮತ ಚಲಾಯಿಸಬಹುದು.
ಮತದಾನಕ್ಕೆ ಅವಶ್ಯವಿರುವ ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಕ್ಷೇತ್ರಕ್ಕೆ 321 ಬ್ಯಾಲೆಟ್ ಯೂನಿಟ್ಗಳು, 278 ಕಂಟ್ರೋಲ್ ಯೂನಿಟ್ಗಳು ಹಾಗೂ 278 ವಿವಿಪ್ಯಾಟ್ ವಿದ್ಯುನ್ಮಾನ ಮತಯಂತ್ರಗಳ ಬೇಡಿಕೆಯ ಪ್ರಸ್ತಾವನೆಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ. ಮತಕ್ಷೇತ್ರದಲ್ಲಿ 256 ಪುರುಷ ಮತ್ತು 3 ಮಹಿಳೆಯರು ಸೇರಿ ಒಟ್ಟು 259 ಸೇವಾ ಮತದಾರರು ಇದ್ದಾರೆ. ವಿಧಾನಸಭೆ ಉಪ ಚುನಾವಣೆಗೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೆಶಕರನ್ನು ಚುನಾವಣಾಧಿಕಾರಿಗಳನ್ನಾಗಿ ನೇಮಿಸಲು ಕೋರಿ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ವಿವರಿಸಿದರು.
ಲೋಕಸಭಾ ಚುನಾವಣೆಗೆ ಸಿದ್ಧತೆಗಳು ತೃಪ್ತಿಕರ: ಬರುವ ಏಪ್ರಿಲ್ 23 ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆ ಮತದಾನ ಕಾರ್ಯಕ್ಕೆ ಜಿಲ್ಲೆಯಾದ್ಯಂತ ನಡೆದಿರುವ ಸಿದ್ಧತೆಗಳು ಸಮರ್ಪಕವಾಗಿದೆ. ಕೇಂದ್ರ ಚುನಾವಣಾ ಆಯೋಗದ ವೀಕ್ಷಕರು ಕೂಡಾ ತೃಪ್ತಿ ವ್ಯಕ್ತಪಡಿಸಿದ್ದಾರೆ. ಹೆಚ್ಚುವರಿಯಾಗಿ ಬೇಕಾಗಿದ್ದ 2247 ಇವಿಎಂ ಮತ್ತು ವಿವಿಪ್ಯಾಟ್ ಮತಯಂತ್ರಗಳು ಈಗಾಗಲೇ ಬಂದಿವೆ. ಏಪ್ರಿಲ್ 22 ರಂದು ಎಲ್ಲ ವಿಧಾನಸಭಾ ಕೇತ್ರದ ಕೇಂದ್ರಸ್ಥಾನಗಳಲ್ಲಿ ಮಸ್ಟರಿಂಗ್ ಕಾರ್ಯ ನಡೆಯಲಿದೆ. ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿ ಮತಗಟ್ಟೆಗಳಿಗೆ ತೆರಳಲು 383 ಮಾರ್ಗಗಳನ್ನು ಗುರುತಿಸಲಾಗಿದೆ. ಎಲ್ಲಾ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗುತ್ತಿದೆ. ಮತಯಂತ್ರಗಳ ಪ್ರಥಮ ಹಂತದ ಪರೀಕ್ಷೆ (ಎಫ್ಎಲ್ಸಿ) ಮುಕ್ತಾಯವಾಗಿದೆ. ಜಿಲ್ಲೆಯಲ್ಲಿ 263 ಸೂಕ್ಷ್ಮ ಮತ್ತು 343 ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.
ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿವರ್ಾಹಕ ಅಧಿಕಾರಿ ಡಾ. ಬಿ.ಸಿ. ಸತೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಅಪರ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ ಹಾಗೂ ಮತ್ತಿರರು ಉಪಸ್ಥಿತರಿದ್ದರು.