ವಿಶ್ವ ಬಂಧುತ್ವ ಸಾರಿದ ರೇಣುಕಾಚಾರ್ಯರ ಸಂದೇಶ ದಾರಿದೀಪ: ರಂಭಾಪುರಿ ಶ್ರೀ
ಹುಬ್ಬಳ್ಳಿ 11: ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದ ವೀರಶೈವ ಧರ್ಮ ಸಂಸ್ಥಾಪನಾಚಾರ್ಯರಾದ ಜಗದ್ಗುರು ರೇಣುಕಾಚಾರ್ಯರ ವಿಶ್ವಬಂಧುತ್ವ ಸಾರಿದ ಸಂದೇಶ ಸರ್ವರಿಗೂ ದಾರಿದೀಪ ಎಂದು ಅವರು ತಾಲೂಕಿನ ರಂಭಾಪುರಿ ಜಗದ್ಗುರುಗಳವರ ಜನ್ಮ ಭೂಮಿ ಹಳ್ಳಿಯಾಳ ಗ್ರಾಮದಲ್ಲಿ ಜರುಗಿದ ಜಗದ್ಗುರು ರೇಣುಕಾಚಾರ್ಯ ರಥೋತ್ಸವ ಧರ್ಮ ಸಮಾರಂಭದಲ್ಲಿ ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಸುಖ ಸಮೃದ್ಧಿ ಬದುಕಿಗೆ ಧರ್ಮ ಪರಿಪಾಲನೆ ಮುಖ್ಯ. ಅರಿವು ಮತ್ತು ಆಚಾರಗಳ ಮೂಲಕ ಮಾನವನ ಬದುಕು ಶ್ರೀಮಂತಗೊಳ್ಳಬೇಕಾಗಿದೆ. ವೀರಶೈವ ಧರ್ಮದಲ್ಲಿ ಜಾತಿಗಿಂತ ನೀತಿ, ತತ್ವಕ್ಕಿಂತ ಆಚರಣೆಗೆ ವಿಶೇಷ ಮಹತ್ವ ಕೊಟ್ಟಿದ್ದಾರೆ. ಕಾಯಕ ಮತ್ತು ದಾಸೋಹದ ಮೂಲಕ ಬದುಕಿನಲ್ಲಿ ಶ್ರೇಯಸ್ಸನ್ನು ಕಾಣಲು ಸಾಧ್ಯವೆಂದು ಜಗದ್ಗುರು ರೇಣುಕಾಚಾರ್ಯರು ಸಾರಿದ್ದಾರೆ. ಹಳ್ಳಿಯಾಳ ಗ್ರಾಮದ ಸಕಲ ಸದ್ಭಕ್ತರು ಸೇರಿ ಜಗದ್ಗುರು ರೇಣುಕಾಚಾರ್ಯರ ನೂತನ ರಥ ನಿಮರ್ಿಸಿ ಜಾತ್ರೆ ನೆರವೇರಿಸುತ್ತಿರುವುದು ಸಂತೋಷದ ಸಂಗತಿ ಎಂದರು.
ಸುಳ್ಳ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾಯರ್ಯ ಸ್ವಾಮಿಗಳು ಮಾತನಾಡಿ ಮಾನವ ಜೀವನದಲ್ಲಿ ಒಂದು ಗುರಿ ಬೇಕು. ಆ ಗುರಿ ತಲುಪಿಸಲು ಗುರುವಿನ ಅವಶ್ಯಕತೆಯಿದೆ ಎಂದರು.
ಜಗದ್ಗುರು ರೇಣುಕಾಚಾರ್ಯ ಗುರುಕುಲದ ಸಾಧಕ ಗದಿಗೆಯ್ಯ ಹಿರೇಮಠರಿಂದ ವೇದಘೋಷ, ಗಂಗಾಧರಸ್ವಾಮಿ ಅವರಿಂದ ಭಕ್ತಿ ಗೀತೆ ಜರುಗಿತು. ಬಿ.ಡಿ. ನಾಗನಗೌಡರ ಸ್ವಾಗತಿಸಿದರು. ಗುರುನಾಥಗೌಡ ಮಾದಾಪುರ ನಿರೂಪಿಸಿದರು.
ಬೆಳಿಗ್ಗೆ ಲಿಂಗೋದ್ಭವ ಜಗದ್ಗುರು ರೇಣುಕಾಚಾರ್ಯ ಮಂಗಲ ಮೂತರ್ಿಗೆ ರುದ್ರಾಭಿಷೇಕ, ಅಷ್ಟೋತ್ತರ, ಮಹಾಮಂಗಲ ನೆರವೇರಿದವು. ಸಂಜೆ ಜಗದ್ಗುರು ರೇಣುಕಾಚಾರ್ಯ ರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 