ಮತದಾನ ಎನ್ನುವುದು ಪ್ರಜಾಪ್ರಭುತ್ವದ ಆಧಾರ ಸ್ತಂಭ: ಅನ್ನಪೂರ್ಣ
ಹಾವೇರಿ27 ಮತದಾನ ಎನ್ನುವುದು ಪ್ರಜಾ ಪ್ರಭುತ್ವದ ಆಧಾರ ಸ್ತಂಭ. ಈ ಸ್ತಂಭ ಗಟ್ಟಿಯಾಗಿರಬೇಕಾದರೆ ಮತದಾನದ ಪ್ರಮಾಣ ಹೆಚ್ಚಾಗಬೇಕಿದೆ ಅಂದಾಗ ಮಾತ್ರ ಪ್ರಜಾ ಪ್ರಭುತ್ವ ಯಶಸ್ಸಿ ಆಗಲು ಸಾಧ್ಯ ಎಂದು ತಾಲೂಕ ಪಂಚಾಯತಿ ವತಿಯಿಂದ ವಿಶೇಷ ವಿಕಲಚೇತನರ ತಾಲೂಕ ಮಟ್ಟದ ತ್ರೈಸಿಕಲ್ (ಬೈಸಿಕಲ್) ಜಾಥಾದ ಮೂಲಕ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ತಾಲೂಕ ಪಂಚಾಯತಿ ಕಾರ್ಯನಿವರ್ಾಹಕ ಅಧಿಕಾರಿಯಾದ ಅನ್ನಪೂರ್ಣ ಮುದುಕಮ್ಮನವರ ಬೈಕ ರ್ಯಾಲಿಗೆ ಚಾಲನೆ ನೀಡಿದರು.
ಪ್ರಜ್ಞಾವಂತ ಮತದಾರರು ಪ್ರಜಾ ಪ್ರಭುತ್ವದ ಮೂಲಭೂತ ಹಕ್ಕಾದ ಮತದಾನದಲ್ಲಿ ಕಡ್ಡಾಯವಾಗಿ ಪಾಲ್ಗೊಂಡು ದೇಶದ ಅಭಿವೃದ್ದಿಗೆ ಕೈಜೋಡಿಸಬೇಕಿದೆ ನಾವು ಮತದಾನ ಮಾಡುವುದಲ್ಲದೆ ನಮ್ಮ ಸುತ್ತಮುತ್ತಲಿನವರು ಮತದಾನ ಮಾಡಿದ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು.
ಮತದಾನದಿಂದ ದೂರ ಉಳಿದವರಿಗೆ ಮತದಾನದ ಮಹತ್ವಕುರಿತು, ತಿಳಿಹೇಳುವ ಮೂಲಕ ಮತದಾನ ಮಾಡುವಂತೆ ಪ್ರೇರೆಪಿಸಬೇಕು ಎಂದರು. ತಾಲೂಕಾ ವ್ಯಾಪ್ತಿಯಲ್ಲಿ ಮತದಾನ ಶೇಕಡಾ ಪ್ರಮಾಣ ಹೆಚ್ಚಿಸುವಲ್ಲಿ ಕಾಳಜಿವಹಿಸಬೇಕಿದೆ ಎಂದರು. ಇದೇ ಸಂದರ್ಭದಲ್ಲಿ ಮತದಾರರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಹಾವೇರಿ ಸಿದ್ದಪ್ಪ ವೃತ್ತದಲ್ಲಿ ಮತದಾನದ ಬಗ್ಗೆ ಘೋಷಣೆಗಳನ್ನು ಹೇಳುತ್ತಾ ನಂತರ ತಾಲೂಕ ಪಂಚಾಯತ ಆವರಣದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ವಿವಿ ಪ್ಯಾಟ ಪ್ರಾತ್ಯಕ್ಷಿಕೆಯನ್ನು ನೆಡಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕ ಸಿಬ್ಬಂದಿ ವರ್ಗದವರು, ಕಾರ್ಯಕತರ್ೆಯರು, ಅಂಗವಿಕಲರು,ಸಾರ್ವಜನಿಕರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 