ಸಿಇಓ ಅವರಿಂದ ಮತಯಂತ್ರಗಳ ಬಳಕೆಯ ಪ್ರಾತ್ಯಕ್ಷಿಕೆ
ಹಾವೇರಿ08: ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತ ಇವರ ಸಹಯೋಗದಲ್ಲಿ ಹಾವೇರಿ ಕೆ.ಎಸ್.ಆರ್.ಟಿ.ಸಿ. (ಡಿಪೋ)ಘಟಕದಲ್ಲಿ ಸಿಬ್ಬಂದಿ ವರ್ಗದವರಿಗೆ ಶುಕ್ರವಾರ ಮತದಾರರ ಜಾಗೃತಿ ಅಂಗವಾಗಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಪ್ರತಿಜ್ಞಾವಿಧಿ ಬೋಧಿಸಿದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳಾದ ಕೆ.ಲೀಲಾವತಿ ಅವರು ಸಾರಿಗೆ ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿ, ಇದೇ ಎ. 23 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಸಾರಿಗೆ ಸಿಬ್ಬಂದಿಗಳು ತಪ್ಪದೇ ಮತದಾನಮಾಡಿ ತಮ್ಮ ಸಂವಿಧಾನ ಬದ್ಧ ಹಕ್ಕನ್ನು ಚಲಾಯಿಸಿ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಿಬ್ಬಂದಿಗಳಿಗೆ ಸ್ವತಃ ಮತಯಂತ್ರ ಬಳಕೆ ಕುರಿತಂತೆ ಪ್ರಾತ್ಯಕ್ಷಿಕೆ ನೀಡಿದರು. ಸಾರಿಗೆ ವಾಹನಗಳಿಗೆ ಮತದಾನ ಜಾಗೃತಿಯ ಭಿತ್ತಿಪತ್ರಗಳನ್ನು ಅಂಟಿಸಿದರು.
ತಾಲೂಕ ಪಂಚಾಯತಿ ಕಾರ್ಯನಿವರ್ಾಹಕ ಅಧಿಕಾರಿ ಅನ್ನಪೂರ್ಣ ಮುದುಕಮ್ಮನವರ, ಜಿಲ್ಲಾ ಪಂಚಾಯತಿ ಸಿಬ್ಬಂದಿ ವರ್ಗದವರು, ಸೆಕ್ಟರ್ ಅಧಿಕಾರಿಗಳು, ತಾಲ್ಲೂಕು ಪಂಚಾಯತ ಸಿಬ್ಬಂದಿ ವರ್ಗದವರು ಹಾಗೂ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿ ವರ್ಗದವರು ಹಾಜರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 