ಡಾ.ಬಿ.ಆರ್.ಅಂಬೇಡ್ಕರ್ ಜಗತ್ತಿನ ಶ್ರೇಷ್ಠ ಸಮಾಜ ಚಿಂತಕ: ಜಿಲ್ಲಾಧಿಕಾರಿ
ಹಾವೇರಿ14: ಸಾಮಾಜಿಕ ನ್ಯಾಯ, ಸಮ ಸಮಾಜದ ಪ್ರತಿಪಾದನೆಯ ಮೂಲಕ ಎಲ್ಲರಿಗೂ ಸಮಾನವಾದ ಹಕ್ಕುಗಳನ್ನು ಕಲ್ಪಿಸಲು ಶ್ರಮಿಸಿದ ಜಗತ್ತಿನ ಶ್ರೇಷ್ಠ ಸಮಾಜ ಚಿಂತಕ ಹಾಗೂ ಜ್ಞಾನಿ, ಸ್ಕಾಲರ್ ಡಾ.ಬಿ.ಆರ್.ಅಂಬೇಡ್ಕರ್ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಬಣ್ಣಿಸಿದರು.
ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಲಾದ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜಯಂತಿಯ ಸರಳ ಸಮಾರಂಭದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆಮಾಡಿ ಅವರು ಮಾತನಾಡಿದರು.
ಕಾಮರ್ಿಕರು, ಮಹಿಳೆಯರು, ದಲಿತರು, ಶೋಷಿತರಿಗೆ ಪ್ರತ್ಯೇಕ ಸ್ಥಾನಮಾನಗಳು, ರಾಜಕೀಯ ಪ್ರಾತಿನಿತ್ಯದ ಮೂಲಕ ಸಮಾಜ ಮುಖ್ಯ ವಾಹಿನಿಗೆ ತರಬೇಕು ಎಂಬುದು ಅವರ ಕಾಳಜಿಯಾಗಿತ್ತು. ಈ ಕಾರಣಕ್ಕಾಗಿ ನಿರಂತರ ಹೋರಾಟ ಮಾಡಿದರು. ಅಸ್ಪೃಶ್ಯತಾ ನಿವಾರಣೆ, ದಮನಿತರಿಗೆ ವಿಶೇಷ ಪ್ರಾತಿನಿತ್ಯಕ್ಕಾಗಿ ಶ್ರಮಿಸಿದರು. ಸಂವಿಧಾನಬದ್ಧವಾಗಿ ಸಮಾನ ಹಕ್ಕುಗಳನ್ನು ದೊರಕಿಸಿಕೊಡಲು ಶ್ರಮಿಸಿದರು ಎಂದು ಹೇಳಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಅದ್ಬುತವಾದ ಜ್ಞಾನದ ಪ್ರತಿರೂಪ, ಅವರ ಅದ್ಭುತವಾದ ಪ್ರತಿಭೆ, ಜ್ಞಾನದ ಫಲವಾಗಿ ಅತ್ಯುತ್ತಮವಾದ ಭಾರತ ಸಂವಿಧಾನ ರಚನೆಯಾಗಿದೆ. ಸಾಮಾಜಿಕ ಸಮಾನತೆ, ಜಾತ್ಯಾತೀತ ತತ್ವಗಳು ಎಲ್ಲರಿಗೂ ಸಮಾನ ಹಕ್ಕುಗಳು ದೊರೆಯುವಂತೆ ಸಂವಿಧಾನ ರಚನೆಯಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿ.ಪಂ.ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಕೆ.ಲೀಲಾವತಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಎಂದರೆ ಭಾರತ ಸಂವಿಧಾನ- ಭಾರತ ಸಂವಿಧಾನವೆಂದರೆ ಅಂಬೇಡ್ಕರ್ ಎಂಬ ಮಾತು ಜನಜನಿತವಾಗಿದೆ. ತುಳಿತಕ್ಕೊಳಗಾದವರ ಏಳ್ಗೆಗಾಗಿ ಶ್ರಮಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಸಿದ್ಧಾಂತಗಳು ಸಮಾಜದ ಆದರ್ಶಗಳಾಗಬೇಕು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾಜರ್ುನ ಬಾಲದಂಡಿ, ಸಮಾಜ ಕಲ್ಯಾಣ ಇಲಾಖೆ ಉಪನಿದರ್ೆಶಕರಾದ ಶ್ರೀಮತಿ ಚೈತ್ರಾ ಇತರ ಅಧಿಕಾರಿಗಳು ಹಾಗೂ ಸಮಾಜದ ವಿವಿಧ ಮುಖಂಡರು ಭಾಗವಹಿಸಿದ್ದರು
ಪುತ್ಥಳಿಗೆ ಮಾಲಾರ್ಪಣೆ: ಇದಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಮಾಲಾರ್ಪಣೆ ಮಾಡಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾಜರ್ುನ ಬಾಲದಂಡಿ, ಉಪವಿಭಾಗಾಧಿಕಾರಿ ಎನ್.ತಿಪ್ಪೇಸ್ವಾಮಿ ,ಸಮಾಜ ಕಲ್ಯಾಣ ಇಲಾಕೆ ಉಪನಿದರ್ೆಶಕಿ ಚೈತ್ರಾ, ತಹಶೀಲ್ದಾರ ಶಿವಕುಮಾರ, ತಾ.ಪಂ.ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಅನ್ನಪೂರ್ಣ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 