ಮತದಾನದಲ್ಲಿ ನಿರ್ಭಿತರಾಗಿ ಮತ ಚಲಾಯಿಸಿ: ಲೀಲಾವತಿ

ಲೋಕದರ್ಶನವರದಿ

ರಾಣೇಬೆನ್ನೂರು 24 : ಪ್ರಜಾಪ್ರಭುತ್ವದಲ್ಲಿ ಧೃಢ ವಿಶ್ವಾಸವುಳ್ಳ ಭಾರತದ ಪೌರರಾದ ನೀವು ದೇಶದ ಪ್ರಜಾತತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯಲು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭಿತರಾಗಿ ಮತ ಚಲಾಯಿಸಬೇಕು ಎಂದು ಜಿಪಂ ಮುಖ್ಯಕಾರ್ಯ ನಿವರ್ಾಹಕ ಅಧಿಕಾರಿ ಕೆ.ಲೀಲಾವತಿ ಹೇಳಿದರು.

   ರವಿವಾರ  ನಗರದ ರೈಲ್ವೆ ನಿಲ್ದಾಣದಲ್ಲಿ ವ್ಯವಸ್ಥಿತ ಮತದಾರರ ಜಾಗೃತಿ ಮತ್ತು ಮತದಾನದಲ್ಲಿ ಭಾಗವಹಿಸುವಿಕೆ ಕುರಿತ ವಿವಿಪ್ಯಾಟ್ ಸ್ವಿಪ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರಣೆಗಳ ದಾಕ್ಷೀಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸಬೇಕು ಎಂದರು.

    ಪ್ರತಿಯೊಬ್ಬ ಪ್ರಜೆಯು ಚುನಾವಣೆಯಲ್ಲಿ ಸ್ವಯಂಪ್ರೇರಿತರಾಗಿ ಮತಗಟ್ಟೆಗೆ ತೆರಳಿ ಮತ ಚಲಾಯಿಸಬೇಕು, ಅಂದಾಗ ಮಾತ್ರ ಪ್ರಜಾಪ್ರಭುತ್ವ ಗಟ್ಟಿಗೊಳ್ಳತ್ತದೆ,  ನೀವಷ್ಟೆ ಮತ ಚಲಾಯಿಸದೆ ಮನೆಯಲ್ಲಿಯ ಎಲ್ಲ ಮತದಾರರು ಮತ್ತು ಅಕ್ಕಪಕ್ಕದ ಮನೆಯವರಿಗೆ ಮತ ಚಲಾಯಿಸಲು ಪ್ರೇರೇಪಿಸಬೇಕು ಎಂದರು.

    ಪ್ರಜಾಪ್ರಭುತ್ವ ಗಟ್ಟಿಗೊಳ್ಳಲು ಮತದಾನವಾಗಲು ಸಾಧ್ಯ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸರ್ವರೂ ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಬಾಗವಹಿಸಬೇಕು. ಒಂದು ಮತ ದೇಶದ ಪ್ರಗತಿಗೆ ಸಹಕಾರಿಯಾಗುವುದರ ಜೊತೆಗೆ ಮತ ನೀಡಿದ ತೃಪ್ತಿಯು ನಿಮಗಿರುತ್ತದೆ ಎಂದರು.

    ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶ್ರೀಧರ, ಜಾಫರ್ ಶರೀಪ್ ಸುತಾರ, ಸಿಡಿಪಿಓ ಶ್ರೀನಿವಾಸ್ ಆಲದತ್ತಿ, ತಾಪಂ ವ್ಯವಸ್ಥಾಪಕ ಬಸವರಾಜ ಶಿಡೆನೂರ, ಅಶೋಕ ನಾರಜ್ಜಿ, ಬಿ.ಪಿ.ಶಿಡೇನೂರ, ಪಿಡಿಓಗಳಾದ ರಂಗಪ್ಪ ಕೊರಕಲಿ, ನಾಗರಾಜ ಉಕ್ಕಡಗಾತ್ರಿ, ಗಾಯತ್ರಮ್ಮ ಹೊಸಂಗಡಿ, ತಿಪ್ಪೇಶ ಮೂಗಾನವರ, ಆರಾಧ್ಯಮಠ,  ಸೇರಿದಂತೆ ಅಂಗನವಾಡಿ ಮತ್ತು ಆಶಾ ಕಾರ್ಯಕತರ್ೆಯರು ಇದ್ದರು.

    ಇದೇ ಸಂದರ್ಭದಲ್ಲಿ ಇಲ್ಲಿನ ದೊಡ್ಡಪೇಟೆಯ ತರಕಾರಿ ಮಾರುಕಟ್ಟೆ, ಬಸ್ ನಿಲ್ದಾಣ ಮತ್ತು ವಿವಿಧ ಮಾರುಕಟ್ಟೆಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.