ಕಾಂಗ್ರೆಸ್ ಅಧ್ಯಕ್ಷರಾಗಿ ಜಮೀರ ಭಕ್ಷಿ ನೇಮಕ

 

ವಿಜಯಪುರ 06:   ಕನರ್ಾಟಕ ಪ್ರದೇಶ ಕಾಂಗ್ರೆಸ್ ಕಮೀಟಿಯ ರಾಜ್ಯಾಧ್ಯಕ್ಷರಾದ ಡಾ. ಜಿ.ಪರಮೇಶ್ವರ ರವರು ವಿಜಯಪುರ ನಗರ ಬ್ಲಾಕ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಜಮೀರ ಭಕ್ಷಿ ಅವರಿಗೆ ನೇಮಕ ಮಾಡಿ ಆದೇಶಿಸಿದ್ದಾರೆ. ಅದರ ಅಂಗವಾಗಿ ಇಂದು ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾಯರ್ಾಲಯದಲ್ಲಿ ನೂತನ ವಿಜಯಪುರ ನಗರ ಬ್ಲಾಕ ಕಾಂಗ್ರೆಸ್ ಅಧ್ಯಕ್ಷರಾಗಿ ಜಮೀರ ಬಕ್ಷಿ ಅವರಿಗೆ ಜಿಲ್ಲಾಧ್ಯಕ್ಷರಾದ ರವಿಗೌಡ ಪಾಟೀಲ ಅವರು ಪಕ್ಷದ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರವಿಗೌಡ ಪಾಟೀಲ ಮಾತನಾಡಿ, ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರ ಬಕ್ಷಿ ಅವರು ಮುಂಬರುವ ಲೋಕಸಭಾ ಚುನಾವಣೆ, ಮಹಾನಗರ ಪಾಲಿಕೆ ಚುನಾವಣೆಗಳನ್ನು ಮುಂದಿಟ್ಟುಕೊಂಡು ಸಕ್ರಿಯವಾಗಿ ಪಕ್ಷ ಸಂಘಟನೆ ಹಾಗೂ ಪಕ್ಷಕ್ಕೆ ಅಧಿಕಾರ ತಂದುಕೊಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಹೇಳಿದರು. ಕಾಂಗ್ರೆಸ್ ಮುಖಂಡ ಅಬ್ದುಲಹಮೀದ ಮುಶ್ರೀಫ ಮಾತನಾಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಜಮೀರ ಬಕ್ಷಿ ಅವರಿಗೆ ಅಭಿನಂದಿಸುತ್ತ, ಜಮೀರ ಭಕ್ಷಿ ಅವರು ಪಕ್ಷ ಸಂಘಟನೆ ಹಾಗೂ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಪಕ್ಷ ಅವರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಜವಾಬ್ದಾರಿ ನೀಡಿದೆ. ಅವರು ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಾರೆಂದು ಅವರು ಹೇಳಿದರು.ನೂತನ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಜಮೀರ ಭಕ್ಷಿ ಮಾತನಾಡಿ, ನನಗೆ ನೀಡಿರುವ ಈ ಜವಾಬ್ದಾರಿಯನ್ನು ನಾನು ಸಮರ್ಥವಾಗಿ ನಿಭಾಯಿಸುತ್ತೇನೆ. ಮುಂಬರುವ ದಿನಗಳಲ್ಲಿ ನಗರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸುವುದಾಗಿ ಪಕ್ಷದ ಮುಖಂಡರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ವೈಜನಾಥ ಕಪರ್ೂರಮಠ, ಚಾಂದಸಾಬ ಗಡಗಲಾವ, ಪರವೇಜ ಚಟ್ಟರಕಿ, ಅಜೀತಸಿಂಗ ಪರದೇಸಿ, ಮಾಜಿ ವಿಡಿಎ ಅಧ್ಯಕ್ಷ ಆಜಾದ ಪಟೇಲ, ಮಹಿಳಾ ಜಿಲ್ಲಾ ಕಾಂಗ್ರೆಸ್ ಅ