ಕಂಪ್ಲಿ: ಒಬಿಸಿ ಹಾಸ್ಟೆಲ್ ಆರಂಭಕ್ಕೆ ಆಗ್ರಹಿಸಿ ಪ್ರತಿಭಟನೆ

ಲೋಕದರ್ಶನ ವರದಿ

ಕಂಪ್ಲಿ 06: ಬಡ ಪ್ರತಿಭಾವಂತ ವಿದ್ಯಾಥರ್ಿಗಳಿಗೆ ಸಕರ್ಾರ ಒಬಿಸಿ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ಎಐಡಿಎಸ್ಒ ಕಾರ್ಯಕರ್ತರು ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಿಂದ ತಹಸಿಲ್ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. 

ಪಟ್ಟಣದ ಸರ್ಕಾರಿ  ಪಾಲಿಟೆಕ್ನಿಕ್ ಸೇರಿ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗಕ್ಕಾಗಿ ಬೇರೆ ತಾಲೂಕು ಹಾಗೂ ಜಿಲ್ಲೆಗಳಿಂದ ಅನೇಕ ವಿದ್ಯಾಥರ್ಿಗಳು ದಾಖಲಾಗಿದ್ದಾರೆ. ಒಂದು ಪ.ಜಾ/ಪ.ಪಂ ಹಾಸ್ಟೆಲ್ ಇದ್ದು ಎಲ್ಲ ವಿದ್ಯಾರ್ಥಿಗಳಿಗೆ ಸೀಟು ದೊರಕುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು  ತಿಂಗಳಿಗೆ ಸಾವಿರಾರು ರೂ. ಕೊಟ್ಟು ಬಾಡಿಗೆ ಮನೆಯಲ್ಲಿ ಇರುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಒಬಿಸಿ ಹಾಸ್ಟೆಲ್ ತೆರೆಯುವ ಮೂಲಕ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ತಹಸಿಲ್ ಕಚೇರಿ ಸ್ಥಾನಿಕ ಅಧಿಕಾರಿ ಎ.ಬಸವರಾಜ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. 

ಸಂಘಟನೆ ಜಿಲ್ಲಾ ಕಾರ್ಯದಶರ್ಿ ಜಿ.ಸುರೇಶ್, ಜಂಟಿ ಕಾರ್ಯದರ್ಶಿ  ರವಿಕಿರಣ್, ಕೆ.ರವಿಕುಮಾರ್, ಮಾರೇಶ್, ಮಹೇಶ್, ಸ್ವಾಮಿ, ರಾಜ್, ಪಂಪಾಪತಿ, ಮನೋಹರ, ಉಮೇಶ್, ಜಯರಾಜ್ ಹಾಗೂ ಪಟ್ಟಣದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು  ಪಾಲ್ಗೊಂಡಿದ್ದರು.