ಬೆಂಗಳೂರು, ಏ 24 ಶಾಸಕ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣ ಸಂಬಂಧ ಕಂಪ್ಲಿ ಶಾಸಕ ಗಣೇಶ್ ಅವರಿಗೆ ರಾಜ್ಯ ಹೈಕೋರ್ಟ್ ಬುಧವಾರ ಷರತ್ತು ಬದ್ಧ ಜಾಮೀನು ಮುಂಜೂರು ಮಾಡಿದೆ. ಈಗಲ್ಟನ್ ರೆಸಾಟ್ರ್ನಲ್ಲಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹಾಗೂ ಕಂಪ್ಲಿ ಶಾಸಕ ಗಣೇಶ್ ಹೊಡೆದಾಡಿಕೊಂಡಿದ್ದರು. ಆಗ ಆನಂದ್ ಸಿಂಗ್ ಮಾರಣಾಂತಿಕವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಹಲ್ಲೆಯಿಂದಾಗಿ ಕಣ್ಣು ಮತ್ತು ತಲೆಗೆ ತೀವ್ರ ಪೆಟ್ಟಾಗಿದ್ದ ಆನಂದ್ ಸಿಂಗ್ ಅವರನ್ನು ಅಪೋಲೋ ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ಘಟನೆ ಸಂಬಂಧ ಶಾಸಕ ಗಣೇಶ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಗೊಳಿಸಲಾಗಿತ್ತು. ನಂತರ, ಶಾಸಕ ಗಣೇಶ್ ತಲೆ ಮರೆಸಿಕೊಂಡಿದ್ದರು. ಬಿಡದಿ ಪೊಲೀಸರು ತೀವ್ರ ಹುಡುಕಾಟ ನಡೆಸಿ ಅಂತಿಮವಾಗಿ ಅವರನ್ನು ಫೆ. 20 ರಂದು ಗುಜರಾತ್ನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಜಾಮೀನು ಪಡೆಯಲು ಕಂಪ್ಲಿ ಗಣೇಶ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲೂ ಪ್ರಯತ್ನ ನಡೆಸಿದ್ದರು. ಆದರೆ, ಅವರ ಜಾಮೀನು ಅರ್ಜಿ ಅಲ್ಲಿ ತಿರಸ್ಕಾರವಾಗಿತ್ತು. ಇದಾದದ ಬಳಿಕ ಕಂಪ್ಲಿ ಗಣೇಶ್ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಹೈ ಕೋಟರ್್ ಏಕ ಸದಸ್ಯ ಪೀಠ ಗಣೇಶ್ಗೆ ಷರತ್ತುಬದ್ದ ಜಾಮೀನು ಮುಂಜೂರು ಮಾಡಿದೆ.