ನವದೆಹಲಿ, ನ.19- ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನವದೆಹಲಿಯ ಕನರ್ಾಟಕ ವಾತರ್ಾ ಕೇಂದ್ರ ನೋಯಿಡಾ ಕನ್ನಡ ಕೂಟ ಹಾಗೂ ಜೆಎಸ್ಎಸ್ ತಾಂತ್ರಿಕ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ನೋಯಿಡಾದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಉದ್ಘಾಟಿಸಿದರು.
ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಸಾಮಾಜಿಕವಾಗಿ ಕನ್ನಡತನಕ್ಕೆ ಕನ್ನಡವೇ ಸರಿಸಾಟಿ. ಶಂಕರ ರಾಮಾನುಜ, ವಿದ್ಯಾರಣ್ಯ ಬಸವೇಶ್ವರ, ಭಕ್ತಿಪಂಥದ ಕನಕ- ಪುರಂದರಂತಹ ದಾಸ ಶ್ರೇಷ್ಠರು, ಪಂಪ, ರನ್ನ ಜನ್ನ, ಕುಮಾರವ್ಯಾಸರಂತಹ ಕವಿಪುಂಗವರಿಂದ ಆಧುನಿಕ ಅನೇಕಾನೇಕ ಸಾಹಿತಿಗಳು ತಮ್ಮದೆ ಆದ ರೀತಿಯಲ್ಲಿ ಕನ್ನಡ ಭಾಷೆ ಮತ್ತು ನಾಡನ್ನು ಶ್ರೀಮಂತಗೊಳಿಸಿದ್ದಾರೆ. ಅದನ್ನು ಉಳಿಸಿಕೊಂಡು ಮುನ್ನಡೆಸುವ ಜವಾಬ್ದಾರಿ ನಮ್ಮೆಲರದ್ದು ಎಂದು ಹನುಮಂತಯ್ಯ ಕರೆ ಕೊಟ್ಟರು. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥರಾದ ಡಾ.ಪುರುಷೋತ್ತಮ್ ಬಿಳಿಮಲೆ ಮಾತನಾಡಿ, ಕನ್ನಡದಲ್ಲಿ ಸೊಗಸಾದ ಶಬ್ಧ ಪದಪುಂಜಗಳಿವೆ. ಆದರೆ ಇತ್ತೀಚಿಗೆ ಕನ್ನಡದ ಟಿವಿ ಮಾಧ್ಯಮಗಳು ಇಂಗ್ಲಿಚ್ ಶಬ್ದಗಳನ್ನು ಹೆಚ್ಚಾಗಿ ಬಳಸುವ ಮೂಲಕ ಕನ್ನಡವನ್ನು ಕೊಲ್ಲುವ ಕೆಲಸ ಮಾಡುತ್ತಿವೆ ಎಂದು ವಿಷಾದಿಸಿದರು. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಮಂತ್ರಾಲಯದ ಜಂಟಿ ಕಾರ್ಯದಶರ್ಿ ಗಿರೀಶ್ ಹೊಸೂರ್, ಕನರ್ಾಟಕ ವಾತರ್ಾ ಕೇಂದ್ರದ ವಾತರ್ಾಧಿಕಾರಿ ಡಾ. ಗಿರೀಶ್ , ಜೆಎಸ್ಎಸ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಜಿ.ಬಿ.ಪಾಟೀಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಪ್ರಸಿದ್ಧ ಹಿನ್ನೆಲೆ ಗಾಯಕಿ ಡಾ.ಶಮಿತಾ ಮಲ್ನಾಡ್ ಅವರ ನೇತೃತ್ವದ ಶಮಾ ತಂಡ ಹಾಗೂ ದಾವಣಗೆರೆ ಜಿಲ್ಲೆ ಯಕ್ಕನಹಳ್ಳಿ ಗ್ರಾಮದ ಜಾನಪದ ಕಲಾತಂಡಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟವು.