ಕೇಜ್ರಿವಾಲ್ ಭೇಟಿಗೆ ಬಂದವನ ಹತ್ತಿರ ಸಜೀವ ಬುಲೆಟ್ ಪತ್ತೆ
ನವದೆಹಲಿ, ನ.27- ದೆಹಲಿ ಮುಖ್ಯಮಂತ್ರಿ ಹಾಗೂ ಅಮ್ ಆದ್ಮಿ ಪಾಟರ್ಿ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬನ ಬಳಿ ಸಜೀವ ಬುಲೆಟ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.
ದೆಹಲಿಯ ಸೀಲಾಂಪುರ್ ಪ್ರದೇಶದ ಕರೋಲ್ಬಾಗ್ನಲ್ಲಿ ಮಸೀದಿಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮೊಹಮ್ಮದ್ ಇಮ್ರಾನ್ ಬಂಧಿತ ಮೌಲ್ವಿ.
ಈತ ಮುಖ್ಯಮಂತ್ರಿ ಕೇಜ್ರಿವಾಲ್ ನಿವಾಸಕ್ಕೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಈತ ಮಸೀದ್ ಬವ್ಲಿ ವಾಲಿ ಮಸೀದಿಯಲ್ಲಿ ಮೌಲ್ವಿ ಆಗಿದ್ದ. ಕಳೆದ ವಾರ ದೆಹಲಿ ಕಾರ್ಯದಶರ್ಿಗಳ ಕಚೇರಿಯ ಒಳಗೆ ಅರವಿಂದ್ ಕೇಜ್ರಿವಾಲ್ ಮೇಲೆ ವ್ಯಕ್ತಿಯೊಬ್ಬ ಮೆಣಸಿನ ಪುಡಿಯನ್ನು ಎರಚಿದ್ದ.ಈ ಹಿಂದೆಯೂ ಅರವಿಂದ್ ಕೇಜ್ರಿವಾಲ್ ಮೇಲೆ ಹಲ್ಲೆ ಮಾಡಲು ನಡೆಸಿದ ಯತ್ನ ನಡೆದಿತ್ತು.
ನಿನ್ನೆ ಇಮ್ರಾನ್ನ 12 ಮಂದಿ ಇಮಾಮ್ಸ್ ಮತ್ತು ಮೌಲ್ವಿಗಳ ಜತೆ ದೆಹಲಿಯ ವಕ್ಫ್ ಮಂಡಳಿಯ ಸಿಬ್ಬಂದಿಗೆ ವೇತನ ಹೆಚ್ಚಳ ಮಾಡಿಸುವ ಬಗ್ಗೆ ಮಾತುಕತೆ ನಡೆಸಲು ಮುಖ್ಯಮಂತ್ರಿಗಳ ನಿವಾಸಕ್ಕೆ ಬಂದಿದ್ದ.ಈ ವೇಳೆ ಆತನನ್ನು ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದಾಗ ಆತನ ಚೀಲದಲ್ಲಿ ಬುಲೆಟ್ ಪತ್ತೆಯಾಗಿದೆ.
ಇಮ್ರಾನ್ನನ್ನು ಸ್ಥಳೀಯ ಪೊಲೀಸರಿಗೆ ಒಪ್ಪಿಸಲಾಗಿದ್ದು, ಶಸ್ತ್ರಾಸ್ತ್ರ ಕಾಯ್ದೆಯಡಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
ವಿಚಾರಣೆ ವೇಳೆ ಇಮ್ರಾನ್, ತಾನು ಮಸೀದಿಯಲ್ಲಿ ಮೌಲ್ವಿ ಆಗಿದ್ದು ಮೂರು ತಿಂಗಳ ಹಿಂದೆ ಮಸೀದಿಯ ದಾನ ಪೆಟ್ಟಿಗೆಯಲ್ಲಿ ಸಿಡಿಮದ್ದುಗಳು ಪತ್ತೆಯಾದವು.ಅದನ್ನು ಯಮುನಾ ನದಿ ತೀರಕ್ಕೆ ಎಸೆಯಲು ಯೋಚಿಸಿದ್ದೆ.ಆದರೆ, ಕೊನೆಗೆ ಮನಸ್ಸು ತೋರದೆ ತನ್ನ ಚೀಲದಲ್ಲಿ ಇಟ್ಟುಕೊಂಡಿರುವುದಾಗಿ ಹೇಳಿದನು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 